ಚೈತ್ರ ಕುಂದಾಪುರ ವಂಚನೆ ಪ್ರಕರಣ | ಜಾರಿ ನಿರ್ದೇಶನಾಲಯಕ್ಕೆ ಕೆಆರ್‌ಎಸ್ ಪಕ್ಷ ದೂರು

Date:

  • ಅಕ್ರಮ ಆಸ್ತಿ ಮಾಡಿಕೊಂಡಿರುವ ಬಗ್ಗೆ ತನಿಖೆ ಮಾಡಬೇಕು
  • ಇಂತಹ ಸೂಟ್‌ ಕೇಸ್ ವ್ಯವಹಾರ ನಿರಂತರವಾಗಿ ನಡೆಯುತ್ತವೆ

ಬಿಜೆಪಿಯಿಂದ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡಲಾಗುವುದೆಂದು 5 ಕೋಟಿ ರೂ. ಹಣ ಪಡೆದುಕೊಂಡು ವಂಚಿಸಿರುವ ಆರೋಪ ಹೊತ್ತ ಚೈತ್ರ ಕುಂದಾಪುರ ಮತ್ತು ಆಕೆಯ ಸಂಗಡಿಗರು ಹಾಗೂ ಹಣ ನೀಡಿರುವ ಗೋವಿಂದ್ ಬಾಬು ಪೂಜಾರಿ ಅವರುಗಳ ವಿರುದ್ಧ ಜಾರಿ ನಿರ್ದೇಶನಾಲಯಕ್ಕೆ ಕೆಆರ್‌ಎಸ್ ಪಕ್ಷ ದೂರು ನೀಡಿದೆ.

ಬುಧವಾರ ದೂರು ನೀಡಿರುವ ಕೆಆರ್‌ಎಸ್ ಪಕ್ಷ, ಅಕ್ರಮ ಹಣ ವರ್ಗಾವಣೆ ಬಗ್ಗೆ ಮತ್ತು ಅಕ್ರಮ ಆಸ್ತಿ ಮಾಡಿಕೊಂಡಿರುವ ಬಗ್ಗೆ ತನಿಖೆ ಮಾಡಬೇಕು ಎಂದು ಜಾರಿ ನಿರ್ದೇಶನಾಲಯಕ್ಕೆ ಆಗ್ರಹಿಸಿದೆ.

“ಬಿಜೆಪಿ ಸೇರಿದಂತೆ, ಬಹುತೇಕ ಪ್ರಮುಖ ಪಕ್ಷಗಳು ಆಂತರಿಕ ಪ್ರಜಾಪ್ರಭುತ್ವ ಪಾಲಿಸದೆ ಹಾಗೂ ಸ್ಪರ್ಧಾಕಾಂಕ್ಷಿಗಳ ಆಯ್ಕೆ ಪ್ರಕ್ರಿಯೆ ಪಾರದರ್ಶಕ ರೀತಿಯಲ್ಲಿ ನಡೆಸದೆ ಇರುವುದೇ ಇಂದು ಈ ಪಕ್ಷಗಳಲ್ಲಿ ಇಂತಹ ಸೂಟ್‌ ಕೇಸ್ ವ್ಯವಹಾರಗಳು ನಿರಂತರವಾಗಿ ನಡೆಯಲು ಸಾಧ್ಯವಾಗಿದೆ. ಇದು ಕೇವಲ ಚೈತ್ರ ಕುಂದಾಪುರ ಮಾತ್ರವಲ್ಲದೆ, ಬಿಜೆಪಿ ಸೇರಿದಂತೆ ಇತರ ಪಕ್ಷಗಳಲ್ಲೂ ಇದೇ ರೀತಿಯ ಅವ್ಯವಹಾರಗಳು ನಡೆಯುತ್ತಿವೆ. ಈ ಬಗ್ಗೆ ಪ್ರಮುಖ ಪಕ್ಷಗಳು ಗಂಭೀರವಾಗಿ ಚಿಂತಿಸಬೇಕು” ಎಂದು ದೂರಿನಲ್ಲಿ ತಿಳಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಹಣ-ಹೆಸರು ಗಳಿಕೆಗೆ ಧರ್ಮವೇ ಸುಲಭದ ಸಾಧನ

“ಜೆಸಿಬಿ ಪಕ್ಷಗಳ ಭ್ರಷ್ಟಾಚಾರದ ಕಪ್ಪು ಹಣದ ರಾಜಕೀಯದ ಒಂದು ಸಣ್ಣ ಭಾಗ ಚೈತ್ರಾ ಕುಂದಾಪುರ ಅನ್ನುವ ಭ್ರಷ್ಟಾಚಾರಿಯ ಮೂಲಕ ತಂತಾನೇ ಬಯಲಾದರೂ, ಅದನ್ನು ಸೂಕ್ತ ತನಿಖಾ ಸಂಸ್ಥೆ ತನಿಖೆ ಮಾಡದಿದ್ದಲ್ಲಿ ಅದರಲ್ಲಿ ಭಾಗಿಯಾಗಿರುವ ಇತರ ದೊಡ್ಡ ಕುಳಗಳು ತಪ್ಪಿಸಿಕೊಳ್ಳುತ್ತವೆ” ಎಂದು ಕೆಆರ್‌ಎಸ್ ಪಕ್ಷ ದೂರಿನಲ್ಲಿ ವಿವರಿಸಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ...

ಕೊಪ್ಪಳ | ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ : ಕೆ.ಫಣಿರಾಜ್

ದಶಕಗಳ ಹಿಂದೆ ನಡೆದಿರುವ ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ. ಆದರೆ...

ರಾಯಚೂರು | ಕುರಿಗೆ ನೀರು ಕುಡಿಸಲು ನದಿಗೆ ತೆರಳಿದ್ದ ಬಾಲಕನ್ನು ಹೊತ್ತೊಯ್ದ ಮೊಸಳೆ

ಕೃಷ್ಣ ನದಿಯಲ್ಲಿ ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಬಾಲಕನ ಮೇಲೆ...

ಕೊಪ್ಪಳ | ಬಂಡವಾಳಶಾಹಿಗಳಿಂದ ಭೂಮಿ ಉಳಿಸಬೇಕಿದೆ: ರಾಕೇಶ್ ಟಿಕಾಯತ್

ಉದ್ಯಮಿಗಳಿಗೆ ರೈತರ ಜಮೀನು ಕಡಿಮೆ ದರದಲ್ಲಿ ಖರೀದಿಸಿ ಬಡಜನರ ಹೊಟ್ಟೆಗೆ ಬಟ್ಟೆ...