ಚೈತ್ರಾ ಕುಂದಾಪುರ ಪ್ರಕರಣ | ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಬಂಧನ ಆಗಲಿ: ಬೊಮ್ಮಾಯಿ

Date:

Advertisements
  • ‘ಟಿಕೆಟ್‌ಗಾಗಿ ಹಣ ಪ್ರಕರಣವನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿದೆ’
  • ‘ಚೈತ್ರಾ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ’

ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ವಂಚನೆ ಮಾಡಿರುವ ಆರೋಪ ಹೊತ್ತಿರುವ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಮಂಗಳೂರಿನಲ್ಲಿ ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, “ಚೈತ್ರಾ ಕುಂದಾಪುರ ಕೇಸ್‌ನ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು. ಯಾರೇ ಇದ್ದರೂ ಉಗ್ರ ಶಿಕ್ಷೆ ಆಗಲಿ. ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು” ಎಂದರು.

“ಟಿಕೆಟ್ ಕೊಡಿಸುತ್ತೇವೆ ಎಂದು ಹಣ ಪಡೆದಿರುವ ವಿಚಾರವನ್ನು ನಾವು ಗಂಭೀರವಾಗಿ ಪರಿಗಣಿಸುತ್ತೇವೆ. ಬಿಜೆಪಿಗೆ ಇದರಲ್ಲಿ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟ. ತನಿಖೆ ಆಗಲಿ, ಅಪರಾಧಿ ಸ್ಥಾನದಲ್ಲಿ ಇದ್ದವರು ದೊಡ್ಡ ದೊಡ್ಡ ಹೆಸರನ್ನು ಹೇಳುತ್ತಾರೆ. ಆದರೆ ತನಿಖೆ ಆಗಿ ಅದರ ಸತ್ಯ ಹೊರಬರಲಿ” ಎಂದು ಆಗ್ರಹಿಸಿದರು.

Advertisements

ಮೈತ್ರಿ ವಿಚಾರ ಪ್ರಾಥಮಿಕ ಹಂತದಲ್ಲಿದೆ

ಲೋಕಸಭೆ ಚುನಾವಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, “ಮೈತ್ರಿ ವಿಚಾರ ಪ್ರಾಥಮಿಕ ಹಂತದಲ್ಲಿದೆ. ಮೈತ್ರಿಯಲ್ಲಿ ಕ್ಷೇತ್ರ ಹಂಚಿಕೆ ಅಂತಿಮ ಹಂತ ತಲುಪಿಲ್ಲ. ಮುಂದಿನ ದಿನಗಳಲ್ಲಿ ಪಕ್ಷದ ವರಿಷ್ಠರು ಈ ಬಗ್ಗೆ ಚರ್ಚಿಸಲಿದ್ದಾರೆ. ಮೈತ್ರಿ ಸಮಯದಲ್ಲಿ ನಮ್ಮ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ತೆರಿಗೆ ವಂಚನೆ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ಸಿಎಂ ಸ್ಟಾಲಿನ್ ಜೊತೆ ಮಾತನಾಡುತ್ತಿಲ್ಲ

“ತಮಿಳುನಾಡಿನ ಡ್ಯಾಂಗಳಲ್ಲಿ ನೀರಿನ ಸ್ಟಾಕ್ ಹೆಚ್ಚಾಗಿದೆ ಎಂದು ನಾವು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇವೆ. ಆದರೂ, ರಾಜ್ಯ ಸರ್ಕಾರ ನೀರು ಬಿಡುತ್ತ ಬಂದಿದೆ. ರಾಜ್ಯ ಸರ್ಕಾರ ಕಾನೂನಾತ್ಮಕವಾಗಿ ಗಂಭೀರವಾಗಿ ತೆಗೆದುಕೊಂಡು ಹೋರಾಟ ಮಾಡುತ್ತಿಲ್ಲ. ಹೀಗಾಗಿ ಕಾವೇರಿ ಜಲಾನಯನದ ರೈತರಿಗೆ, ಬೆಂಗಳೂರಿಗೆ ಕಷ್ಟ ಆಗಲಿದೆ. ಸರ್ಕಾರ ಇದನ್ನು ಕಾನೂನಾತ್ಮಕವಾಗಿ ಅಥವಾ ಮಾತುಕತೆಯಿಂದ ಬಗೆಹರಿಸಬೇಕು” ಎಂದು ಒತ್ತಾಯಿಸಿದರು.

“ನಮ್ಮ ಸಿಎಂ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರ ಜೊತೆಗೆ ಮಾತನಾಡಲು ತಯಾರಿಲ್ಲ. ಇಂಡಿಯಾ ಒಕ್ಕೂಟ ಅಂತ ಹೇಳುತ್ತಾರೆ. ಇವರು ನಮ್ಮ‌ ನೀರಿನ ಹಕ್ಕಿನ ಬಗ್ಗೆ ಮಾತನಾಡುವುದಿಲ್ಲ. ಸದ್ಯ ನೀರು ಬಿಡುವುದಿಲ್ಲ ಅನ್ನುವ ತಮ್ಮ ನಿಲುವಿಗೆ ಅವರು ಗಟ್ಟಿಯಾಗಿ ನಿಲ್ಲಬೇಕು. ನಾವು ಈ ನಿಲುವಿನ ಬಗ್ಗೆ ಸರ್ಕಾರದ ಜೊತೆ ನಿಲ್ಲುತ್ತೇವೆ. ಒಂದು ವೇಳೆ ನೀರು ಬಿಟ್ಟರೆ ನಾವು ಸರ್ಕಾರದ ವಿರುದ್ದ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದರು.

ಬರಪೀಡಿತ ತಾಲ್ಲೂಕುಗಳಲ್ಲಿ ಬಿಜೆಪಿ ಹೋರಾಟ

“ರಾಜ್ಯ ಸರ್ಕಾರ ಬರ ಘೋಷಣೆಗೆ ಅನಗತ್ಯ ಕಾಲಹರಣ ಮಾಡಿದೆ. ಜೂನ್ ತಿಂಗಳಿನಿಂದಲೇ ವಸ್ತುಸ್ಥಿತಿ ಅರಿತು ಬರ ತಾಲೂಕುಗಳ ಘೋಷಣೆಗೆ ಕ್ರಮ ಕೈಗೊಳ್ಳಬೇಕಿತ್ತು. ಆದರೆ, ಸೆಪ್ಟಂಬರ್ ಬಂದರೂ ಇನ್ನೂ ಮೀನಮೇಷ ಎಣಿಸುತ್ತಿದೆ. ಬರಪೀಡಿತ ತಾಲೂಕುಗಳಲ್ಲಿ ಕುಡಿಯುವ ನೀರು, ದನಗಳಿಗೆ ಮೇವಿನ ವ್ಯವಸ್ಥೆ ಮಾಡಬೇಕು. ಮುಂಗಾರು ಬೆಳೆ ಹಾನಿಯಾಗಿದ್ದು, ತಕ್ಷಣ ರೈತರಿಗೆ ಪರಿಹಾರ ನೀಡಬೇಕು. ಈ ಸರ್ಕಾರ ಕೇಂದ್ರ ಸರ್ಕಾರದ ಮಾನದಂಡಗಳ ನೆಪ ಹೇಳುತ್ತಿದೆ. ಅಲ್ಪಾವಧಿ ಸಾಲವನ್ನು ದೀರ್ಘಾವಧಿ ಸಾಲವನ್ನಾಗಿ ಪರಿವರ್ತಿಸಬೇಕು” ಎಂದು ಆಗ್ರಹಿಸಿದರು.

“ನಮ್ಮ ಅವಧಿಯಲ್ಲಿ ಪ್ರವಾಹ ಬಂದಾಗ ಒಂದು ತಿಂಗಳಲ್ಲಿ ಪರಿಹಾರ ಘೋಷಣೆ ಮಾಡಿ ಬಿಡುಗಡೆ ಮಾಡಿದ್ದೆವು. ಕೇಂದ್ರ ಸರ್ಕಾರ ನೀಡುವ ಎರಡು ಪಟ್ಟು ಪರಿಹಾರ ನೀಡಿದ್ದೆವು. ಈ ಸರ್ಕಾರ ಬರಪೀಡಿತ ಪ್ರದೇಶಗಳಿಗೆ ಸೂಕ್ತ ಪರಿಹಾರ ನೀಡದಿದ್ದರೆ ಬಿಜೆಪಿ ವತಿಯಿಂದ ಬರಪೀಡಿತ ತಾಲೂಕುಗಳಲ್ಲಿ ಪ್ರತಿಭಟನೆ ಮಾಡಲಾಗುವುದು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X