ಮಂಡ್ಯ | ಆರ್‌ಸಿಬಿ ವಿಜಯೋತ್ಸವ ವೇಳೆ ಕಾಲ್ತುಳಿತದಲ್ಲಿ ಸಾವಿಗೀಡಾದ ಪೂರ್ಣಚಂದ್ರ ಕುಟುಂಬಕ್ಕೆ ಚಲುವರಾಯಸ್ವಾಮಿ ಸಾಂತ್ವಾನ

Date:

ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ 18 ವರ್ಷಗಳ ಬಳಿಕ ಭರ್ಜರಿ ಜಯಗಳಿಸಿದ ಆರ್‌ಸಿಬಿ ತಂಡದ ವಿಜಯೋತ್ಸವವನ್ನು ನೇರವಾಗಿ ವೀಕ್ಷಣೆ ಮಾಡಲು ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದ ಸಂದರ್ಭದಲ್ಲಿ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟ ಕೃಷ್ಣರಾಜಪೇಟೆ ತಾಲ್ಲೂಕಿನ ರಾಯಸಮುದ್ರ ಗ್ರಾಮದ ಪೂರ್ಣಚಂದ್ರ ತಾಯಿ ಕಾಂತಮಣಿ ಅವರಿಗೆ ಸರ್ಕಾರಿದಂದ ಬಿಡುಗಡೆಯಾಗಿದ್ದ ₹25 ಲಕ್ಷ ರೂಪಾಯಿಗಳ ಚೆಕ್ ನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್. ಚೆಲುವರಾಯ ಸ್ವಾಮಿ ವಿತರಣೆ ಮಾಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

- Advertisement -

ಕೃಷಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಮಾತನಾಡಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ ರಾಯಸಮುದ್ರ ಗ್ರಾಮದ ಶಿಕ್ಷಕ ಆರ್. ಬಿ. ಚಂದ್ರು ಮತ್ತು ಕಾಂತಮಣಿ ದಂಪತಿಗಳ ಪುತ್ರ ಪೂರ್ಣಚಂದ್ರ ಸೇರಿದಂತೆ 11ಜನ ಕ್ರೀಡಾ ಪ್ರೇಮಿಗಳು ಮೃತಪಟ್ಟಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ. ಇಂತಹ ದುರಂತ ನಡೆಯಬಾರದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಾಲ್ತುಳಿತದಲ್ಲಿ ಮೃತಪಟ್ಟ ಎಲ್ಲಾ 11 ಮಂದಿ ಕುಟುಂಬಕ್ಕೂ ರಾಜ್ಯ ಸರ್ಕಾರವೂ ತಲಾ ₹25 ಲಕ್ಷ ರೂಪಾಯಿಗಳನ್ನು ಪರಿಹಾರವಾಗಿ ನೀಡಿರುತ್ತದೆ. ಸರ್ಕಾರವು ಎಷ್ಟೇ ಪರಿಹಾರ ನೀಡಬಹುದು. ಕಳೆದು ಹೋದ ಜೀವವನ್ನು ವಾಪಸ್ ತರಲು ಸಾಧ್ಯವಾಗುವುದಿಲ್ಲ. ಪುತ್ರನನ್ನು ಕಳೆದುಕೊಂಡ ಪೋಷಕರು ಮತ್ತು ಕುಟುಂಬದವರ ಮನಸ್ಸಿಗೆ ಆಗಿರುವ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಬೈಕ್, ಟ್ಯಾಕ್ಸಿ ಚಾಲಕರ ಸಭೆ; ಪ್ರತಿಭಟನೆಗೆ ನಿರ್ಧಾರ

ಭೇಟಿಯಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ್, ಶಾಸಕ ಹೆಚ್. ಟಿ. ಮಂಜು, ತಹಶಿಲ್ದಾರ್ ಎಸ್. ಯು. ಅಶೋಕ್, ಮಾಜಿ ಶಾಸಕ ಕೆ. ಬಿ. ಚಂದ್ರಶೇಖರ್, ಜಿ.ಪಂ. ಮಾಜಿ ಉಪಾಧ್ಯಕ್ಷ ಎಸ್. ಅಂಬರೀಶ್, ನಿವೃತ್ತ ಪ್ರಾಂಶುಪಾಲ ಆರ್. ಟಿ. ಶಿವಕುಮಾರ್, ಗ್ಯಾಸ್ ರಾಜಶೇಖರ್, ಮಡುವಿನ ಕೋಡಿ ಕಾಂತರಾಜು, ರಾಜಯ್ಯ, ಹೆತ್ತಗೋನಹಳ್ಳಿ ನಾರಾಯಣ ಗೌಡ, ಗ್ರಾ.ಪಂ. ಉಪಾಧ್ಯಕ್ಷ ಯೋಗೇಶ್, ಸಚಿವರ ಆಪ್ತ ಸಹಾಯಕರಾದ ಚೇತನಾ ಮಹೇಶ್, ಅರಳಕುಪ್ಪೆ ಪ್ರತಾಪ್, ಸರ್ಕಲ್ ಇನ್ಸ್ಪೆಕ್ಟರ್ ಸುಮಾ ರಾಣಿ, ಎಸ್.ಐ ನವೀನ್ ಸೇರಿದಂತೆ ಇನ್ನಿತರರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

ಯಲ್ಲಾಪುರ | ವಜ್ರಳ್ಳಿಯಲ್ಲಿ ರಸ್ತೆ ಕಾಮಗಾರಿಗೆ ಸಂಗ್ರಹಿಸಿದ್ದ ₹36 ಸಾವಿರ ಮೌಲ್ಯದ ಕಡಿ, ಎಂ-ಸ್ಯಾಂಡ್ ಕಳವು

ಯಲ್ಲಾಪುರ: ರಸ್ತೆ ಕಾಮಗಾರಿಗಾಗಿ ಸಂಗ್ರಹಿಸಿಟ್ಟಿದ್ದ ಕಡಿ ಹಾಗೂ ಎಂ-ಸ್ಯಾಂಡ್ ಕಳವು ಮಾಡಿರುವ...