ಚಾಮರಾಜನಗರ | 10 ವರ್ಷದ ಬಾಲಕ ಹೃದಯಾಘಾತಕ್ಕೆ ಬಲಿ

Date:

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ಕುರಬಗೇರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ 10 ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬುಧವಾರ(ಜುಲೈ 09) ಮಧ್ಯಾಹ್ನ ನಡೆದಿದೆ.

- Advertisement -

ಮನೋಜ್ ಕುಮಾರ್(10) ಮೃತ ವಿದ್ಯಾರ್ಥಿ. ಈತ ಶಾಲೆಯಲ್ಲಿ ಪಾಠ ಕೇಳುತಿದ್ದ ಸಮಯದಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾನೆ. ಬಳಿಕ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿರುವುದಾಗಿ ತಿಳಿದುಬಂದಿದೆ. ಈತನಿಗೆ ಹೃದಯ ಸಂಬಂಧಿ ಕಾಯಿಲೆ ಸಮಸ್ಯೆಯಿದ್ದು, ಮೈಸೂರಿನ ಜಯದೇವ ಹಾಗೂ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸುತಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಮೂಲತಃ ದೊಡ್ಡಹುಂಡಿ ಗ್ರಾಮದ ಲೇ.ನಾಗರಾಜು-ನಾಗರತ್ನ ದಂಪತಿಯ ಪುತ್ರ ಮನೋಜ್ ಕುಮಾರ್ ದೊಡ್ಡಹುಂಡಿಯಲ್ಲಿ ಒಂದು ಮತ್ತು ಎರಡನೇ ತರಗತಿ ವ್ಯಾಸಂಗ ಮಾಡಿ ಮೂರನೇ ತರಗತಿಗೆ ಪಟ್ಟಣದ ಕುರಬಗೇರಿ ಹಿರಿಯ ಪ್ರಾಥಮಿಕ ಶಾಲೆಗೆ ದಾಖಲಾಗಿದ್ದು, ಈ ವರ್ಷ ನಾಲ್ಕನೇ ತರಗತಿ ವ್ಯಾಸಂಗ ಮಾಡುತಿದ್ದನು. ಮೃತ ವಿದ್ಯಾರ್ಥಿ ತಾಯಿ ಕೂಲಿ ಕೆಲಸ ಮಾಡಿಕೊಂಡು ಮಗನನ್ನು ಓದಿಸುತ್ತ ಜೀವನ ನಡೆಸುತಿದ್ದರು.

ಇದನ್ನೂ ಓದಿದ್ದೀರಾ? ಚಾ.ನಗರ | ನೀರಿಗಾಗಿ ತಂದೆ-ತಾಯಿ ಪರದಾಟ: ಸಿಎಂಗೆ ಪತ್ರ ಬರೆದ ಬಾಲಕಿ; ಗ್ರಾಮಕ್ಕೆ ಅಧಿಕಾರಿಗಳು ದೌಡು

“ಮನೋಜ್ ಕುಮಾರ್ ನ ಹೃದಯದಲ್ಲಿ ರಂಧ್ರವಿತ್ತು, 7 ವರ್ಷದ ಬಳಿಕ ಯಾವುದೇ ಸಮಸ್ಯೆ ಆಗುವುದಿಲ್ಲವೆಂದು ವೈದ್ಯರು ತಿಳಿಸಿದ್ದರು. ಆದರೆ, ಇತ್ತೀಚೆಗೆ ತಪಾಸಣೆ ನಡೆಸಿದ ರಂಧ್ರ ದೊಡ್ಡಾಗಿರುವುದು ಕಂಡುಬಂದಿತ್ತು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಾಲಕ ಮೊನ್ನೆಯೂ ನೋವು ಎನ್ನುತ್ತಿದ್ದ, ಇಂದು ಶಾಲೆಯಲ್ಲಿ ಕುಸಿದುಬಿದ್ದು ಮೃತಪಟ್ಟಿದ್ದಾನೆ” ಎಂದು ಮೃತ ಮನೋಜ್ ಕುಮಾರ್ ಸಂಬಂಧಿಯೊಬ್ಬರು ಹೇಳಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಸ್ತೂರಿ ರಂಗನ್ ವರದಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ: ಕಾಂಗ್ರೆಸ್ ಆಗ್ರಹ

ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ...

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...