ಚಾಮರಾಜನಗರ | ಹನೂರಿ‌ನ ಆಸ್ಪತ್ರೆಗೆ ಆಂಬ್ಯುಲೆನ್ಸ್ ಕೊಡುಗೆ ನೀಡಿದ ನಟ ಪ್ರಕಾಶ್ ರೈ

Date:

  • ತಮ್ಮ ಒಡೆತನದ ಪಿಆರ್‌ಎಫ್ ಫೌಂಡೇಶನ್ ವತಿಯಿಂದ ಕೊಡುಗೆ
  • ಕಾಮಗೆರೆ ಹೋಲಿಕ್ರಾಸ್ ಬಳಿ ಇರುವ ಆಸ್ಪತ್ರೆಗೂ ಆಂಬ್ಯುಲೆನ್ಸ್‌ ನೀಡಿಕೆ

ಬಹುಭಾಷಾ ನಟ ಪ್ರಕಾಶ್ ರೈ ಅವರು ತಮ್ಮ ಒಡೆತನದ ಪಿಆರ್‌ಎಫ್ ಫೌಂಡೇಶನ್ ವತಿಯಿಂದ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾಮಗೆರೆ ಹೋಲಿಕ್ರಾಸ್ ಬಳಿ ಇರುವ ಸರ್ಕಾರಿ ಆಸ್ಪತ್ರೆಗೆ ಆಂಬ್ಯುಲೆನ್ಸ್‌ಗಳನ್ನು ಕೊಡುಗೆ ನೀಡುವ ಮೂಲಕ ತಮ್ಮ ಸಮಾಜಮುಖಿ ಸೇವೆಗಳನ್ನು ಮುಂದುವರೆಸಿದ್ದಾರೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ಅಪ್ಪು ಹೆಸರಿನ ಆಂಬ್ಯುಲೆನ್ಸ್ ಕೊಡುಗೆಯಾಗಿ ನೀಡಿದ್ದು, ರಾಜ್ಯದ ಪ್ರತೀ ಜಿಲ್ಲೆಗಳಿಗೂ ಇದನ್ನು ವಿಸ್ತರಿಸುವ ಯೋಜನೆಯನ್ನು ಪ್ರಕಾಶ್‌ ರೈ ಒಡೆತನದ ಪಿಆರ್‌ಎಫ್ ಫೌಂಡೇಶನ್ ಹಮ್ಮಿಕೊಂಡಿದೆ.

ನಟ ಪ್ರಕಾಶ್‌ ರೈ ಮಾತನಾಡಿ, “ನಾನು ಪುನೀತ್ ರಾಜ್‌ಕುಮಾರ್ ಅವರ ಜೊತೆ ಮೂರು ಸಿನಿಮಾಗಳಲ್ಲಿ ನಟಿಸಿದ್ದು, ಅವರೊಂದಿಗೆ ಉತ್ತಮ ಒಡನಾಟ ಇಟ್ಟುಕೊಂಡಿದ್ದೆ. ಕೋವಿಡ್-19 ವೇಳೆಯಲ್ಲಿ ಅವರು ನನಗೆ ದೇಣಿಗೆ ರೂಪದಲ್ಲಿ ಸಾಕಷ್ಟು ಹಣ ಸಹಾಯ ಮಾಡಿದ್ದರು” ಎಂದು ನೆನಪಿಸಿಕೊಂಡರು.

“ಪುನೀತ್ ರಾಜ್‌ಕುಮಾರ್‌ ಮೃತಪಡುವ ವೇಳೆ ಅವರಿಗೆ ಸಕಾಲದಲ್ಲಿ ಆಂಬ್ಯುಲೆನ್ಸ್ ಸಿಕ್ಕಿದ್ದರೆ ಬದುಕುತ್ತಿದ್ದರು ಎಂಬ ಮಾತುಗಳು ಕೇಳಿ ಬಂದಿತ್ತು. ಈ ಪರಿಸ್ಥಿತಿ ಯಾರಿಗೂ ಬರಬಾರದು ಎನ್ನುವ ಉದ್ದೇಶದಿಂದ ಅವರ ಹೆಸರಿನಲ್ಲಿ ಆಂಬ್ಯುಲೆನ್ಸ್ ನೀಡಲಾಗುತ್ತಿದೆ” ಎಂದು ತಿಳಿಸಿದರು.

ಹೋಲಿಕ್ರಾಸ್ ಆಸ್ಪತ್ರೆಗೂ ಕೊಡುಗೆ

ಕಳೆದ ಕೆಲ ವರ್ಷಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಕಿಚ್ಚಗುತ್ತಿ ಮಾರಮ್ಮನ ದೇವಾಲಯದಲ್ಲಿ ವಿತರಿಸಿದ್ದ ವಿಷ ಪ್ರಸಾದ ದುರಂತ ಪ್ರಕರಣದ ವೇಳೆ ಹೋಲಿಕ್ರಾಸ್ ಆಸ್ಪತ್ರೆಯು ಗಣನೀಯ ಆರೋಗ್ಯ ಸೇವೆ ಒದಗಿಸಿತ್ತು. ಇಲ್ಲಿನ ಆಸ್ಪತ್ರೆಗೂ ಪ್ರಕಾಶ್ ರೈ ಆ್ಯಂಬುಲೆನ್ಸ್ ಕೊಡುಗೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಹೋಲಿಕ್ರಾಸ್ ಆಸ್ಪತ್ರೆಯು ಹಲವು ವರ್ಷಗಳಿಂದ ಬಡಜನರಿಗೆ ಆರೋಗ್ಯ ಸೇವೆ ಒದಗಿಸುತ್ತಾ ಬಂದಿದೆ. ಸುತ್ತಮುತ್ತಲಿನ ಗುಡ್ಡಗಾಡು ಪ್ರದೇಶದ ಜನರಿಗೆ ಅನುಕೂಲವಾಗಲೆಂದು ಆ್ಯಂಬುಲೆನ್ಸ್ ಕೊಡುಗೆ ನೀಡಿದ್ದೇನೆ” ಎಂದು ಹೇಳಿದರು.

ಹೋಲಿಕ್ರಾಸ್ ಆಸ್ಪತ್ರೆಯ ಆಡಳಿತಾಧಿಕಾರಿ ಸಿಸ್ಟರ್ ಡೆಲಿನಾ ಮಾತನಾಡಿ, “ನಮ್ಮ ಆಸ್ಪತ್ರೆ ಸೇವೆಯನ್ನು ಗುರುತಿಸಿ ಆ್ಯಂಬುಲೆನ್ಸ್‌ಗಳನ್ನು ಕೊಡುಗೆ ನೀಡಿರುವ ಪ್ರಕಾಶ್ ರೈ ಅವರಿಗೆ ನಮ್ಮ ಸಿಬ್ಬಂದಿಗಳ ವತಿಯಿಂದ ಧನ್ಯವಾದಗಳನ್ನು ತಿಳಿಸಿ, ಇಂತಹ ಅವಕಾಶವನ್ನು ಬಳಸಿಕೊಂಡು ಕಾಡಂಚಿನ ಗುಡ್ಡ ಪ್ರದೇಶದ ಜನರಿಗೆ ಇನಷ್ಟು ಸೇವೆ ಸಲ್ಲಿಸುತ್ತೇವೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ನ್ಯಾಯಾಂಗ ಬಡಾವಣೆಯಲ್ಲಿ ಬೀದಿ ಬದಿ ವ್ಯಾಪಾರಿಯ ಎಳನೀರು ಕಳ್ಳತನ

ಬಡ ವ್ಯಾಪಾರಿಯೊಬ್ಬರು ಮಾರಾಟ ಮಾಡಲು ತಂದಿರಿಸಿದ್ದ ಸುಮಾರು 800 ಎಳನೀರು ರಾತ್ರೋರಾತ್ರಿ...

ಈಗಲಾದರೂ ಚರ್ಚೆಗೆ ಬರುತ್ತದೆಯೇ ಪ್ರಾದೇಶಿಕ ಅಸಮಾನತೆ ಕೂಗು

ಕರ್ನಾಟಕ ಏಕೀಕರಣವಾಗಿ ಅರ್ಧ ಶತಮಾನ ಕಳೆದರೂ ಇಡೀ ಕರ್ನಾಟಕವನ್ನು ಸಮಗ್ರವಾಗಿ ಅಭಿವೃದ್ಧಿಯ...

ಉತ್ತರ ಕನ್ನಡ | ಬೇಸಿಗೆಗೂ ಮುನ್ನವೇ ನೀರಿನ ಬವಣೆ; ಸಂಕಷ್ಟದಲ್ಲಿ ಗ್ರಾಮಗಳು

ಶಿರಸಿ ಮಲೆನಾಡು ಆದರೆ, ಪ್ರತಿ ವರ್ಷ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಎದುರಾಗುತ್ತದೆ....

ಚಾಮರಾಜನಗರ | ಸರ್ವರ್‌ ಸಮಸ್ಯೆಯಿಂದ ವಸತಿ ಯೋಜನೆ ದಾಖಲೆ ಸಲ್ಲಿಕೆ ವಿಳಂಬ; ಕಾಲಾವಧಿ ಮುಂದೂಡುವಂತೆ ಒತ್ತಾಯ

ವಸತಿ ಯೋಜನೆಗಳ ಅಡಿಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ದಾಖಲೆಗಳನ್ನು ಸಲ್ಲಿಸಲು ನವೆಂಬರ್‌ 30...