ಚಾಮರಾಜನಗರ | ಹೆಣ್ಣುಮಕ್ಕಳ ಸುರಕ್ಷತೆ, ಹಕ್ಕು, ಆಶಯಗಳಿಗೆ ‘ಅಪ್ತಗೆಳತಿ’ ಪೂರಕ: ಶಾಸಕ ಎ ಆರ್ ಕೃಷ್ಣಮೂರ್ತಿ

Date:

Advertisements

ಹೆಣ್ಣುಮಕ್ಕಳ ಸುರಕ್ಷತೆ, ಹಕ್ಕು, ಆಶಯಗಳಿಗೆ ‘ಅಪ್ತಗೆಳತಿ’ ಪೂರಕವಾಗಿದೆ. ಪ್ರತಿಯೊಬ್ಬರ ಕಣ್ಣು ತೆರೆಸುವ ಕಾರ್ಯಕ್ರಮವಾಗಿದೆ ಎಂದು ಶಾಸಕ ಎ ಆರ್ ಕೃಷ್ಣಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದರು.

ಚಾಮರಾಜನಗರದ ಡಾ ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಯೋಜಿಸಿದ್ದ ವಿನೂತನ ‘ಅಪ್ತಗೆಳತಿ-ನಿಮ್ಮ ಬಳಿಗೆ’ ಕಾರ್ಯಕ್ರಮ ಉದಗಘಾಟಿಸಿ ಅಪ್ತಗೆಳತಿ ಕಿರುಪೆಟ್ಟಿಗೆ ಅನಾವರಣಗೊಳಿಸಿ ಮಾತನಾಡಿದರು.

“ಶತಶತಮಾನಗಳಿಂದಲೂ ಮಹಿಳೆಯರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ಸಂವಿಧಾನ ಜಾರಿ ಬಳಿಕ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗಿದ್ದು, ಹೆಣ್ಣುಮಕ್ಕಳು ಶೈಕ್ಷಣಿಕ, ಅರ್ಥಿಕವಾಗಿ ಮುನ್ನಡೆದು ಸಬಲರಾಗುತ್ತಿದ್ದಾರೆ. ಇದಕ್ಕೆ ಡಾ ಬಿ ಆರ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಮಹಿಳೆಯರು, ಮಕ್ಕಳಿಗೆ ನೀಡಿರುವ ಹಕ್ಕುಗಳೇ ಕಾರಣವಾಗಿವೆ” ಎಂದರು.

Advertisements

“ಪ್ರಸ್ತುತದಲ್ಲಿ ಮಹಿಳೆ, ಪುರುಷರೆನ್ನದೆ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿವೆ. ದೌರ್ಜನ್ಯ ನಡೆದಾಗ ಮುಗ್ದ ಹೆಣ್ಣುಮಕ್ಕಳು ಹೇಳಿಕೊಳ್ಳಲು ಸಾಕಷ್ಟು ಮುಜುಗರ, ಯಾತನೆ ಅನುಭವಿಸುತ್ತಾರೆ. ಹೆಣ್ಣು ತಾಯಿಯಾಗಿ, ಹೆಂಡತಿ, ಮಗಳು, ಅಕ್ಕ, ತಂಗಿಯಾಗಿ ನಮ್ಮನ್ನು ಅವರಿಸಿದ್ದಾರೆ. ದೌರ್ಜನ್ಯಕ್ಕೊಳಗಾದವರಿಗೆ ಬೆನ್ನೆಲುಬಾಗಿ ನಿಂತು ಮಾನಸಿಕ ಆತ್ಮಸ್ಥೈರ್ಯ ತುಂಬುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಅಪ್ತಗೆಳತಿ ಕಾರ್ಯಕ್ರಮವು ಸಂವಿಧಾನದ ಆಶಯಗಳಿಗೆ ಪೂರಕವಾಗಿದೆ” ಎಂದು ಶಾಸಕ ಕೃಷ್ಣಮೂರ್ತಿ ತಿಳಿಸಿದರು.

ಶಾಸಕ ಎಚ್ ಎಂ ಗಣೇಶ್ ಪ್ರಸಾದ್ ಮಾತನಾಡಿ, “ಅಪ್ತಗೆಳತಿ ಕಾರ್ಯಕ್ರಮ ಮಹಿಳೆಯರ ರಕ್ಷಣೆಗಾಗಿ ಕಲ್ಪಿಸಿರುವ ಉತ್ತಮ ಅವಕಾಶವಾಗಿದೆ. ಕಾರ್ಯಕ್ರಮವನ್ನು ಸಮರ್ಪಕವಾಗಿ ಜಾರಿಗೊಳಿಸುವುದರಿಂದ ಶಾಲೆ-ಕಾಲೇಜುಗಳಲ್ಲಿ ಹೆಣ್ಣುಮಕ್ಕಳು ಕಲಿಯಲು ಒಳ್ಳೆಯ ಪರಿಸರ ನಿರ್ಮಾಣವಾಗಲಿದೆ. ಕಲಿಕಾ ಪ್ರಕ್ರಿಯೆ ವೃದ್ಧಿಸಲಿದೆ. ದೌರ್ಜನ್ಯ ನಡೆದಾಗ ಹೆಣ್ಣುಮಕ್ಕಳು ಧೈರ್ಯವಾಗಿ ದೂರು ನೀಡುವ ವಾತಾವರಣ ನಿರ್ಮಾಣವಾಗಬೇಕು” ಎಂದರು.

ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, “ಇದೊಂದು ಅರ್ಥಪೂರ್ಣ ಹಾಗೂ ಅತ್ಯದ್ಭುತ ಕಾರ್ಯಕ್ರಮವಾಗಿದೆ. ಮಹಿಳೆಯರು ಅದರಲ್ಲೂ ಚಿಕ್ಕಮಕ್ಕಳ ಮೇಲೆಯೂ ದೌರ್ಜನ್ಯ ಪ್ರಕ್ರಣಗಳು ದಾಖಲಾಗುತ್ತಿವೆ. ದೌರ್ಜನ್ಯಗಳು ಶಾಲೆ, ಮನೆ ಹಾಗೂ ಸಾರ್ವಜನಿಕವಾಗಿ ಎಲ್ಲಿಯಾದರೂ ನಡೆಯಬಹುದು. ಆದರೆ ಪೊಲೀಸ್ ಠಾಣೆಗೆ ದೂರು ನೀಡಲು ಕೆಲವರು ಮುಂದೆ ಬರುವುದಿಲ್ಲ. ಇದನ್ನು ಮನಗಂಡು ಅಪ್ತಗೆಳತಿ ಕಾರ್ಯಕ್ರಮ ರೂಪಿತವಾಗಿದ್ದು, ಮಹಿಳಾ ಸುರಕ್ಷತೆಗೆ ಲ್ಯಾಂಡ್‍ಮಾರ್ಕ್ ದೊರೆತಿದೆ. ದಾಖಲಾಗುವ ಪ್ರತಿಯೊಂದು ದೂರುಗಳು ನಂಬರಿಂಗ್ ಆಗಬೇಕು. ನೊಂದವರಿಗೆ ಪರಿಣಾಮಕಾರಿಯಾಗಿ ನ್ಯಾಯ ದೊರಕಿಸಲು ಪೊಲೀಸ್ ಇಲಾಖೆ ಮುಂದಾಗಬೇಕು” ಎಂದು ಸೂಚನೆ ನೀಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿ ಟಿ ಕವಿತಾ ಮಾತನಾಡಿ, “ಜೀವಜಗತ್ತಿನ ಕೇಂದ್ರ ಬಿಂದುವಾಗಿರುವ ಹೆಣ್ಣುಮಕ್ಕಳು ಹಲವು ಸಂಕೋಲೆ, ಸಂಕಷ್ಟಗಳಿಂದ ಹೊರಬರಲು ಇನ್ನೂ ಸಾಧ್ಯವಾಗಿಲ್ಲ. ಹುಟ್ಟಿದ ಮಗುವಿನಿಂದ ಹಿಡಿದು ವೃದ್ಧರಾದಿಯಾಗಿ ಮಹಿಳೆಯರು ದೌರ್ಜನ್ಯಕ್ಕೀಡಾಗುತ್ತಿದ್ದಾರೆ. ಶೇ.90ರಷ್ಟು ದೌರ್ಜನ್ಯಗಳು ಪರಿಚಿತರಿಂದಲೇ ನಡೆಯುತ್ತಿವೆ. ಇದು ಕಳವಳಕಾರಿ ಸಂಗತಿಯಾಗಿದೆ. ಈ ದಿಸೆಯಲ್ಲಿ ಹೆಣ್ಣುಮಕ್ಕಳ ಸುರಕ್ಷತೆಗಾಗಿ ಕಿರು ದೂರುಪೆಟ್ಟಿಗೆಯನ್ನು ಜಿಲ್ಲೆಯ ಎಲ್ಲ ಶಾಲೆ-ಕಾಲೇಜುಗಳಲ್ಲಿಯೂ ಅಳವಡಿಸಲಾಗುತ್ತಿದೆ. ಯಾವುದೇ ಬಗೆಯ ದೌರ್ಜನ್ಯ ನಡೆದರೂ ಹೆಣ್ಣುಮಕ್ಕಳು, ಗಂಡುಮಕ್ಕಳು ಕಿರುಪೆಟ್ಟಿಗೆ ಮೂಲಕ ಮಾಹಿತಿ, ದೂರು ದಾಖಲಿಸಬಹುದು” ಎಂದರು.

“ಕಿರುಪಟ್ಟಿಗೆ ಮೂಲಕ ದೂರು ನೀಡುವ ಮಕ್ಕಳ ಹೆಸರನ್ನು ಗೌಪ್ಯವಾಗಿಡಲಾಗುವುದು. ಆಯಾ ಭಾಗದ ಬೀಟ್ ಪೋಲಿಸ್ ಪ್ರತಿ ಶನಿವಾರ ಕಿರುಪೆಟ್ಟಿಗೆ ತೆರೆದು ಸಂಬಂಧಪಟ್ಟ ಪೊಲೀಸ್ ಠಾಣೆಗೆ ದೂರುಗಳನ್ನು ಸಲ್ಲಿಸಲಿದ್ದಾರೆ. ಆ ಮೂಲಕ ಮಕ್ಕಳ ರಕ್ಷಣೆಗೆ ಕ್ರಮ ವಹಿಸಲಾಗಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಯುವಕರು ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಬೇಕು: ಜೆ.ಬಿ.ರಾಜು

“ಕಾರ್ಯಕ್ರಮದ ಮೊದಲ ಭಾಗವಾಗಿ ಎಲ್ಲ ಶಾಲೆ-ಕಾಲೇಜುಗಳಲ್ಲಿ ಕಿರುಪೆಟ್ಟಿಗೆ ಅಳವಡಿಸಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲ್ಲ ವಿದ್ಯಾರ್ಥಿನಿಲಯಗಳು, ರೈಲ್ವೆ ಹಾಗೂ ಬಸ್ ನಿಲ್ದಾಣ ಸೇರಿದಂತೆ ಜನಸಂದಣಿ ಪ್ರದೇಶಗಳಲ್ಲಿ ಅಳವಡಿಸಲು ಇಲಾಖೆ ಮುಂದಾಗಿದೆ. ಕಾರ್ಯಕ್ರಮ ಯಶಸ್ವಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ” ಎಂದರು.

ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಪಿ ಲಕ್ಷ್ಮೀ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್,
ಗ್ಯಾರಂಟಿ ಯೋಜನೆ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್ ವಿ ಚಂದ್ರು, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಪ್ರಸನ್ನ, ಡಿವೈಎಸ್‌ಪಿ ಲಕ್ಷ್ಮಯ್ಯ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X