ಚಾಮರಾಜನಗರ | ಸಹಾಯ ಯೋಜನೆ; ವಿಶೇಷಚೇತನರು, ಹಿರಿಯ ನಾಗರಿಕರಿಗೆ ಸಾಧನ-ಸಲಕರಣೆಗಳ ವಿತರಣೆ

Date:

Advertisements

ವಿಶೇಷಚೇತನ ವ್ಯಕ್ತಿಗಳಿಗೆ ರಾಷ್ಟ್ರೀಯ ವಯೋಶ್ರೀ ಯೋಜನೆ ಹಾಗೂ ಸಹಾಯ ಯೋಜನೆಯಡಿ ಚಾಮರಾಜನಗರ ಜಿಲ್ಲೆಯ 240 ಮಂದಿ ಹಿರಿಯ ನಾಗರಿಕರು ಹಾಗೂ 417 ಮಂದಿ ವಿಶೇಷಚೇತನರು ಸೇರಿದಂತೆ ಒಟ್ಟು 657 ಫಲಾನುಭವಿಗಳಿಗೆ ₹60 ಲಕ್ಷ ಮೊತ್ತದ ಸಾಧನ, ಸಲಕರಣೆಗಳನ್ನು ಉಚಿತವಾಗಿ ವಿತರಿಸಲಾಯಿತು.

ಚಾಮರಾಜನಗರದ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ‘ಅಂತರಾಷ್ಟ್ರೀಯ ಹಿರಿಯ ನಾಗರಿಕರ ದಿನಾಚರಣೆ’ ಅಂಗವಾಗಿ ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಿರಿಯ ನಾಗರಿಕರ ಸಬಲೀಕರಣ ಹಾಗೂ ವಿಕಲಚೇತನರ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸಾಧನ, ಸಲಕರಣೆ ವಿತರಣೆ ಕಾರ್ಯಕ್ರಮವನ್ನು ಎಂಎಸ್ಐಎಲ್ ಅಧ್ಯಕ್ಷ ಹಾಗೂ ಶಾಸಕ ಸಿ ಪುಟ್ಟರಂಗಶೆಟ್ಟಿ ಐದು ಮಂದಿ ಫಲಾನುಭವಿಗಳಿಗೆ ಸಾಂಕೇತಿಕವಾಗಿ ವಿತರಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.

ಶಾಸಕ ಸಿ ಪುಟ್ಟರಂಗಶೆಟ್ಟಿ ಮಾತನಾಡಿ, “ದೇಹದ ಯಾವುದೇ ಭಾಗದಲ್ಲಿ ಊನವಾದರೂ ಅವರು ವಿಶೇಷಚೇತನರೇ, ಈ ಊನತೆ ಹುಟ್ಟಿನಿಂದ ಅಥವಾ ಹುಟ್ಟಿದ ಬಳಿಕ ಬರಬಹುದು. ಊನತೆ ಕತ್ತಲೆಯ ಬದುಕಾಗಿದೆ. ಹಾಗಂತ ಯಾವುದೇ ವಿಶೇಷ್ಚೇತನರು ಧೃತಿಗೆಡಬಾರದು. ಅಗತ್ಯ ಸೌಲಭ್ಯಗಳನ್ನು ನೀಡಿ ಅವರ ಬಾಳಿನಲ್ಲಿ ಬೆಳಕು ಮೂಡಿಸಲು ಸರ್ಕಾರದೊಂದಿಗೆ ವಿವಿಧ ಸಂಘ ಸಂಸ್ಥೆಗಳು ನೆರವಾಗಿವೆ. ಅವುಗಳಲ್ಲಿ ಅಲಿಂಕೋ ಸಂಸ್ಥೆಯು ಒಂದಾಗಿದೆ” ಎಂದರು.

Advertisements

ಶಾಸಕ ಎ ಆರ್ ಕೃಷ್ಣಮೂರ್ತಿ ಮಾತನಾಡಿ ಸಾಮಾಜಿಕ ವ್ಯವಸ್ಥೆಯಲ್ಲಿ ಹಿರಿಯರು ಹಾಗೂ ವಿಶೇಷ ಚೇತನರನ್ನು ಎಲ್ಲರಂತೆ ಗೌರವದಿಂದ ನಡೆಸಿಕೊಳ್ಳಬೇಕಾಗಿದೆ. ಜಿಲ್ಲೆಯಲ್ಲಿ 18416 ವಿಶೇಷಚೇತನರನ್ನು ಗುರುತಿಸಲಾಗಿದ್ದು, ಅವರಿಗೆ ಸರ್ಕಾರದ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ತಲುಪಿಸಬೇಕಾದ ಜವಾಬ್ದಾರಿ ನಮ್ಮೆಲ್ಲರಿಗಿದೆ. ಇತ್ತೀಚೆಗೆ ಪ್ಯಾರಿಸ್‍ನಲ್ಲಿ ನಡೆದ ಪ್ಯಾರಾಲಂಪಿಕ್ನಲ್ಲಿ ವಿಶೇಷಚೇತನರು 60 ಪದಕಗಳನ್ನು ಗೆದ್ದು ದೇಶಕ್ಕೆ ಕೀರ್ತಿ ತಂದಿದ್ದಾರೆ. ಈ ನಿಟ್ಟಿನಲ್ಲಿ ವಿಶೇಷಚೇತನರಿಗೆ ಸಮಾನಾವಕಾಶ ನೀಡಿ ಗುರಿಮುಟ್ಟಲು ಪ್ರೇರೆಪಿಸಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ, “ವಿಶೇಷಚೇತನರಿಗೆ ಅನುಕಂಪ ಬೇಡ, ಅವಕಾಶ ನೀಡಬೇಕು. ಸರ್ಕಾರ ವಿಶೇಷಚೇತನರ ಪುನರ್ವಸತಿಗಾಗಿ ಹಲವಾರು ಸೌಲಭ್ಯಗಳನ್ನು ಜಾರಿಗೊಳಿಸಿದೆ. ವಿಶೇಷಚೇತನರಿಗೆ ಮೀಸಲಾಗಿರುವ ಸೌಲಭ್ಯಗಳನ್ನು ತಲುಪಿಸಿ, ಸಮಾಜದಲ್ಲಿ ಎಲ್ಲರಂತೆ ಬದುಕಲು ಅವಕಾಶ ಮಾಡಿಕೊಡಬೇಕು. ಗೌರವದಿಂದ ನೋಡಿಕೊಳ್ಳಬೇಕು. ಆಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯವಾಗಲಿದೆ” ಎಂದರು.

“ವಿಪರ್ಯಾಸ ಎಂದರೆ ನಾವು ಆಧುನಿಕತೆಗೆ ಮಾರುಹೋಗಿ ಮಾನವೀಯ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದೇವೆ. ಹಿರಿಯ ಜೀವಗಳನ್ನು ವೃದ್ದಾಶ್ರಮಕ್ಕೆ ದೂಡುತ್ತಿದ್ದೇವೆ. ಮುಂದುವರಿದ ಸಮಾಜ ಹಾಗೂ ಅನುಕೂಲಕರ ವ್ಯಕ್ತಿಗಳೇ ಹಿರಿಯರನ್ನು ಸಹಿಸಿಕೊಳ್ಳಲಾಗದೇ ವೃದ್ಧಾಶ್ರಮಕ್ಕೆ ಕಳುಹಿಸುತ್ತಿದ್ದು, ಇದು ತಪ್ಪಬೇಕು. ತಂದೆ-ತಾಯಿಗಳೇ ಕಣ್ಣಿಗೆ ಕಾಣುವ ನಿಜವಾದ ದೇವರುಗಳು. ಹಿರಿಯ ನಾಗರಿಕರ ಜ್ಞಾನ, ಅನುಭವ ನಮಗೆ, ನಮ್ಮ ಮುಂದಿನ ಪೀಳಿಗೆಗೆ ಅವಶ್ಯವಾಗಿದೆ” ಎಂದು ಕಿವಿಮಾತು ಹೇಳಿದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಖಾನಾಪುರ ಪಶ್ಚಿಮ ಭಾಗದ ಕಾಡಂಚಿನ ರೈತರ ಸಮಸ್ಯೆಗಳಿಗೆ ಸ್ಪಂದಿಸಿ: ಸಿದ್ದಗೌಡ ಮೋದಗಿ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಎಸ್ ಚಿದಂಬರ, ನಗರಸಭೆ ಅಧ್ಯಕ್ಷ ಎಸ್ ಸುರೇಶ್, ಪಂಚಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್ ವಿ ಚಂದ್ರು, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಮಂಜುನಾಥ್, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಸಕಲೇಶ್ವರ, ಅಲಿಂಕೋ ಸಂಸ್ಥೆಯ ಕಿರಿಯ ವ್ಯವಸ್ಥಾಪಕ ರಿಷಭ್ ಮಲ್ಲೋತ್ರ, ಇತರೆ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X