ಚಾಮರಾಜನಗರ | ಚುಕ್ಕಿಚರ್ಮ ರೋಗ ಪ್ರತ್ಯಕ್ಷ; ಮಕ್ಕಳು ಹೈರಾಣು

Date:

Advertisements

ಚಾಮರಾಜನಗರ ಜಿಲ್ಲೆಯಲ್ಲಿ ಈ ಹಿಂದೆ ಬೆಳಕಿಗೆ ಬಂದಿದ್ದ ಚುಕ್ಕಿಚರ್ಮ ಕಾಯಿಲೆ ಮತ್ತೆ ಕಾಣಿಸಿಕೊಂಡಿದೆ. ಚುಕ್ಕಿಚರ್ಮ ರೋಗ ಎಂದು ಕರೆಯಲಾಗುವ ಈ ಕಾಯಿಲೆ ವೈದ್ಯರಿಗೆ ಸವಾಲಾಗಿ ಕಂಡುಬಂದಿದೆ.

ಜಿಲ್ಲೆಯ ಹನೂರು ತಾಲೂಕಿನ ಕುರಟ್ಟಿ ಹೊಸೂರು, ಭದ್ರಯ್ಯನಹಳ್ಳಿ, ಶೆಟ್ಟಳ್ಳಿ ವ್ಯಾಪ್ತಿಯಲ್ಲಿ ಈ ಕಾಯಿಲೆ ಬೆಳಕಿಗೆ ಬಂದಿದೆ. ಮಾರಣಾಂತಿಕವಾಗಿರುವ ಈ ರೋಗ ಬಂದರೆ, ಸಾವು ಖಚಿತ ಎಂದು ಸ್ಥಳೀಯರು ಆತಂಕಪಡುತ್ತಿದ್ದಾರೆ.

2015ರಲ್ಲಿ ಇದೇ ಭಾಗದಲ್ಲಿ ಈ ಕಾಯಿಲೆ ಕಾಣಿಸಿಕೊಂಡಿತ್ತು. ಇದೊಂದು ಬಗೆಯ ಆಟೋಇಮ್ಯೂನ್ ಕಾಯಿಲೆ ಎಂದು ವೈದ್ಯರು ಕರೆದಿದ್ದಾರೆ. ಈ ಕಾಯಿಲೆ ಅಂಟಿದ ಮಕ್ಕಳು 18 ವರ್ಷದವರೆಗೆ ಬದುಕುವುದೇ ಹೆಚ್ಚು ಎನ್ನಲಾಗಿದೆ. ಚುಕ್ಕಿಚರ್ಮ ರೋಗಕ್ಕೆ ಔಷಧಿಯೇ ಇಲ್ಲದ ಕಾರಣ ಹಲವು ಮಕ್ಕಳು ಮೃತಪಟ್ಟಿದ್ದಾರೆ. ಕೆಲವು ಔಷಧಿಗಳ ಮೂಲಕ ಚುಕ್ಕಿಚರ್ಮ ರೋಗದ ಕೆಲವು ಲಕ್ಷಣಗಳನ್ನು ಗುಣಪಡಿಸಬಹುದಾಗಿದೆ. ಆದರೆ ಈ ಕಾಯಿಲೆ ವಾಸಿಯಾಗುವುದಿಲ್ಲ ಎಂದು ಹೇಳಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ನ ಎಲ್ಲ ಅಂಗ ಸಂಸ್ಥೆಗಳು ದೇಶದ ಭದ್ರ ಬುನಾದಿ ಗಟ್ಟಿಗೊಳಿಸಲು ಶ್ರಮಿಸಬೇಕು; ಕನ್ನಯ್ಯ ಕುಮಾರ್

ರೋಗ ಲಕ್ಷಣ : ಈ ರೋಗದಲ್ಲಿ ಮೊದಲು ಚರ್ಮದಲ್ಲಿ ಹುಣ್ಣು, ಬಿಳಿ ಮಚ್ಚೆ ಕಾಣಿಸಿಕೊಳ್ಳುತ್ತವೆ. ಚರ್ಮ ಕಪ್ಪು ಬಣ್ಣಕ್ಕೆ ತಿರುಗುತ್ತದೆ. ಕಣ್ಣು ಊದಿಕೊಳ್ಳುತ್ತದೆ. ಅನುವಂಶಿಕವಾಗಿ ಈ ಕಾಯಿಲೆ ಕೆಲವು ಕುಟುಂಬಗಳಲ್ಲಿ ಮತ್ತೆ ಮತ್ತೆ ಕಾಣಿಸಿಕೊಳ್ಳುತ್ತಿದೆ. ಹನೂರು ಸುತ್ತಲಿನ ಎಂಟು ಮಕ್ಕಳಲ್ಲಿ ಚುಕ್ಕಿ ಚರ್ಮರೋಗ ಲಕ್ಷಣ ಪತ್ತೆಯಾಗಿದ್ದು, ಬಡ ಕುಟುಂಬಗಳಿಗೆ ಶಾಪವಾಗಿ ಪರಿಣಮಿಸಿದೆ. ಸ್ಥಳಕ್ಕೆ ಜಿಲ್ಲಾ ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು, ಮೇಲಧಿಕಾರಿಗಳಿಗೆ ಈ ಬಗ್ಗೆ ವರದಿ ಸಲ್ಲಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X