ಚಾಮರಾಜನಗರ | ಮಾದಕ ವಸ್ತು ಸೇವನೆ ದುಷ್ಪರಿಣಾಮಗಳ ಜಾಗೃತಿ ಅಗತ್ಯ: ಡಿಸಿ ಶಿಲ್ಪಾ ನಾಗ್

Date:

ಆರೋಗ್ಯಕ್ಕೆ ಮಾರಕವಾಗಿರುವ ಮಾದಕ ದ್ರವ್ಯ, ಧೂಮಪಾನ, ತಂಬಾಕು ಸೇವನೆಯಂತಹ ಚಟಗಳನ್ನು ತ್ಯಜಿಸಬೇಕು. ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್‌ ಹೇಳಿದರು.

- Advertisement -

ನಗರದ ಜೆ ಹೆಚ್ ಪಟೇಲ್ ಸಭಾಂಗಣದಲ್ಲಿ ಜಿಲ್ಲಾ ಪೊಲೀಸ್ ಘಟಕದ ವತಿಯಿಂದ ಆಯೋಜಿಸಿದ್ದ ಮಾದಕ ವಸ್ತು ಸೇವನೆ ದುಷ್ಪರಿಣಾಮಗಳ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಮಾದಕ ವ್ಯಸನಕ್ಕೆ ಬಿದ್ದು ಚಿಕ್ಕ ವಯಸ್ಸಿನಲ್ಲಿಯೇ ಸಾವಿಗೀಡಾಗುವವರ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಕುಟುಂಬ ತೊಂದರೆ ಅನುಭವಿಸುತ್ತಿರುವುದನ್ನೂ ಪ್ರತಿನಿತ್ಯ ನೋಡುತ್ತಿದ್ದೇವೆ. ಚಿಕ್ಕ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕುಂದುತ್ತಿದೆ. ಹಾಗಾಗಿ ದುಶ್ಚಟಗಳಿಂದ ದೂರವಾದಲ್ಲಿ ಮಾತ್ರ ಉತ್ತಮವಾದ ಬದುಕು ಸಾಗಿಸಬಹುದು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮಕ್ಕಳಲ್ಲಿರುವ ಸಾಮರ್ಥ್ಯ ಗುರುತಿಸಿ ಹಲವಾರು ಶಿಕ್ಷಕರು ನಿಸ್ವಾರ್ಥದಿಂದ ಮಕ್ಕಳ ಪ್ರತಿಭೆಗೆ ಮಾರ್ಗದರ್ಶನ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು ತಮಗೆ ಒದಗಿರುವ ಅವಕಾಶಗಳನ್ನು ಉತ್ತಮವಾಗಿ ಬಳಸಿಕೊಳ್ಳಬೇಕು. ಎಷ್ಟೇ ದೊಡ್ಡ ವ್ಯಕ್ತಿಯಾದರೂ ತಾವು ಇದ್ದ ಗ್ರಾಮ, ಜಿಲ್ಲೆ, ಶಾಲೆ ಮರೆಯಬಾರದು ಎಂದು ಕಿವಿಮಾತು ಹೇಳಿದರು.

IMG 20250211 WA0036

ಇದೇ ಕಾರ್ಯಕ್ರಮದಲ್ಲಿ ʼಮಾದಕ ವಸ್ತು ಸೇವನೆಯಿಂದಾಗುವ ದುಷ್ಪರಿಣಾಮಗಳʼ ಕುರಿತು ಭಾಷಣ ಸ್ಫರ್ಧೆ ಏರ್ಪಡಿಸಲಾಗಿತ್ತು. ಇದರಲ್ಲಿ ಉತ್ತಮವಾಗಿ ಭಾಷಣ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿ ಟಿ ಕವಿತಾ ಮಾತನಾಡಿ, “ಇಂತಹ ಕಾರ್ಯಕ್ರಮ ಆಯೋಜಿಸಿರುವುದು ತೃಪ್ತಿ ತಂದಿದೆ. ವಿದ್ಯಾರ್ಥಿಗಳಿಗೆ ಸರಿಯಾದ ಹಾದಿ ಯಾವುದು ಎಂಬುದನ್ನ ತಿಳಿಸಬೇಕು. ಪ್ರೌಢಶಾಲೆ, ಪಿಯುಸಿ ಹಂತಗಳಲ್ಲಿ ಗ್ರಹಿಸಿದ ವಿಷಯವನ್ನ ಜೀವನದಲ್ಲಿ ಅಳವಡಿಸಿಕೊಳ್ಳುವ ಸಾಧ್ಯತೆ ಹೆಚ್ಚು. ಹೀಗಾಗಿ ಮಾದಕ ವಸ್ತುಗಳ ಸೇವನೆಯ ದುಷ್ಪರಿಣಾಮಗಳ ಕುರಿತ ಭಾಷಣ ಸ್ಪರ್ಧೆಯ ಮೂಲಕ ಜಾಗೃತಿ ಮೂಡಿಸುವ ವಿಶೇಷ ಕಾರ್ಯಕ್ರಮ ಏರ್ಪಡಿಸಿರುವುದು ಅವರಲ್ಲಿ ಉತ್ತಮ ಜೀವನದ ಮೌಲ್ಯಗಳು ಬೆಳೆಯಲು ಸಹಕಾರಿಯಾಗುತ್ತದೆ” ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಂಜುನಾಥ ಪ್ರಸನ್ನ ಮಾತನಾಡಿ, “ಸ್ವಾಸ್ತ್ಯ ಸಮಾಜ ನಿರ್ಮಾಣವಾಗಬೇಕಾದರೆ ಮಾದಕ ವಸ್ತುಗಳ ಸೇವನೆಯಿಂದ ಮುಕ್ತರಾಗಬೇಕು. ಹದಿ ಹರೆಯದ ವಯಸ್ಸಿನಲ್ಲಿ ಮಾದಕ ವಸ್ತು ಸೇವನೆ ಚಟಕ್ಕೆ ಬಲಿಯಾಗದಂತೆ ಅರಿವು ಮೂಡಿಸಬೇಕು. ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳುವುದನ್ನು ಮುಖ್ಯ ಗುರಿಯಾಗಿಸಿಕೊಳ್ಳಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಕೊಡಗು | 6ನೇ ತರಗತಿ ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ ಎನ್ ಶಶಿಧರ್, ಡಿವೈಎಸ್‍ಪಿ ಲಕ್ಷ್ಮಯ್ಯ, ತೀರ್ಪುಗಾರರಾಗಿ ಜಿ ಶಾಲಿನಿ ಕುಮಾರಿ, ಸಹ ಪ್ರಾಧ್ಯಪಕ ಎಂ ಕೆ ಮಂಜುನಾಥ್ ಹಾಗೂ ಇನ್ನಿತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...

ರಾಯಚೂರು | ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತ: ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

ಪ್ರವಾಸಕ್ಕೆ ತೆರಳಿದ್ದ ಕಾರು ಅಪಘಾತಕ್ಕೀಡಾಗಿ ನಾಲ್ವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು,...