ಚಾಮರಾಜನಗರದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಸಾವಿರಾರು ಎಕರೆ ಜಮೀನಿನಲ್ಲಿ ಬೆಳೆದಿದ್ದ ಬಾಳೆ ತೋಟ ಸಂಪೂರ್ಣವಾಗಿ ನಾಶವಾಗಿ ಸುಮಾರು 25 ಕೋಟಿ ರೂ. ನಷ್ಟವಾಗಿದೆ ಎಂದು ವರದಿಯಲಾಗಿದೆ.
ಜಿಲ್ಲೆಯ ಚಾಮರಾಜನಗರ, ಕೊಳ್ಳೇಗಾಲ, ಯಳಂದೂರು, ಹನೂರು ಹಾಗೂ ಗುಂಡ್ಲುಪೇಟೆ ತಾಲೂಕಿನಲ್ಲಿ ಸುಮಾರು 900 ರೈತರು 1,250 ಎಕರೆ ಪ್ರದೇಶದಲ್ಲಿ ಬಾಳೆ ಬೆಳೆ ಬೆಳೆದಿದ್ದರು. ಮಳೆಯಿಂದ ಬೆಳೆ ಸಂಫೂರ್ಣ ನ ನಾಶವಾಗಿದ್ದು, ಈ ಎಲ್ಲ ರೈತರ ಒಟ್ಟು 25 ಕೋಟಿ ರೂ.ಗಳಷ್ಟು ನಷ್ಟವಾಘಿದೆ ಎಂದು ಹೇಳಲಾಗಿದೆ.
ತೋಟಗಾರಿಕಾ ಇಲಾಖೆಯ ಅಧಿಕಾರಿಗಳು ಬೆಳೆ ನಷ್ಟದ ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದಾರೆ. ವರದಿಯಂತೆ, ರೈತರು ಎಕರೆಗೆ ಕನಿಷ್ಠ 2 ಲಕ್ಷ ರೂ. ನಷ್ಟ ಅನುಭವಿಸಿದ್ದಾರೆ ಎಂದು ತಿಳಿದುಬಂದಿದೆ. ರೈತರಿಗೆ ರಾಜ್ಯ ವಿಪತ್ತು ಪರಿಹಾರ ನಿಧಿ ಮಾರ್ಗಸೂಚಿಗಳ ಅಡಿಯಲ್ಲಿ ಸೂಕ್ತ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಭರವಸೆ ನೀಡಿದ್ದಾರೆ.