ಚಾಮರಾಜನಗರ ಬಂದ್; ಭಾಗಶಃ ಯಶಸ್ವಿ

Date:

ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ ಬಿ. ಆರ್. ಗವಾಯಿ ಅವರ ಮೇಲೆ ವಕೀಲ ಶೂ ಎಸೆದ ಘಟನೆ ಹಿನ್ನಲೆಯಲ್ಲಿ ಪ್ರಗತಿಪರ ಸಂಘಟನೆಗಳು ಕರೆ ನೀಡಿದ್ದ ಚಾಮರಾಜನಗರ ಬಂದ್ ಗೆ, ವಾಣಿಜ್ಯ ಚಟುವಟಿಕೆಗಳು, ಅಂಗಡಿ ಮುಂಗಟ್ಟು ಮುಚ್ಚಿ ಬೆಂಬಲ ನೀಡುವುದರ ಮೂಲಕ ಭಾಗಶಃ ಯಶಸ್ವಿಯಾಯಿತು.

- Advertisement -

ಚಾಮರಾಜನಗರದ ದೊಡ್ಡ ಅಂಗಡಿ ಬೀದಿ, ಸೋಮವಾರ ಪೇಟೆ ಬೀದಿ, ರಥದ ಬೀದಿ, ತರಕಾರಿ ಮಾರುಕಟ್ಟೆ, ಸಂತೆಮರಳ್ಳಿ ಸರ್ಕಲ್, ಎಲ್ ಐ ಸಿ ವೃತ್ತ, ಬಚ್ಚಪ್ಪ ವೃತ್ತ, ಬಿ ರಾಚಯ್ಯ ಜೋಡಿ ರಸ್ತೆ ಸ್ಥಬ್ದವಾಗಿತ್ತು. ದಿನವಿಡೀ ಗಿಜಿಗುಡುವ ರಸ್ತೆಗಳು ಬಂದ್ ನಿಂದ ಬಿಕೋ ಎನ್ನುವಂತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕೆಲವು ಖಾಸಗಿ ಶಾಲೆಗಳು ರಜೆ ನೀಡಿದ್ದು ಹೊರತಾಗಿ ರಾಷ್ಟ್ರೀಕೃತ ಬ್ಯಾಂಕ್, ಮೆಡಿಕಲ್ ಶಾಪ್, ಸರ್ಕಾರಿ ಕಚೇರಿ, ಅಗತ್ಯ ಸೇವೆಗಳು ಸಾರ್ವಜನಿಕರಿಗೆ ಎಂದಿನಂತೆ ಲಭ್ಯವಿತ್ತು. ಭುವನೇಶ್ವರಿ ವೃತ್ತದಲ್ಲಿ ದಲಿತ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು, ಸಂವಿಧಾನ ಸಂರಕ್ಷಣ ಸಮಿತಿ, ಕಾಂಗ್ರೆಸ್, ಬಿಎಸ್ಪಿ, ಎಸ್ಡಿಪಿಐ ಸೇರಿದಂತೆ ನೂರಾರು ಕಾರ್ಯಕರ್ತರು ಜಮಾಯಿಸಿ ಘೋಷಣೆ ಕೂಗಿದರು.

ಪ್ರತಿಭಟನೆಯನ್ನುದ್ದೇಶಿಸಿ ಮೈಸೂರಿನ ಉರಿಲಿಂಗ ಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಮಾತನಾಡಿ,”ಶೋಷಿತ ಸಮುದಾಯಗಳು, ದಲಿತರು ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿರುವ ಸಂವಿಧಾನದಲ್ಲಿ ಬದುಕುತ್ತಿರುವವರು. ಸಮಾಜದಲ್ಲಿ ಸ್ಥಾನಮಾನ ಗಳಿಸಿ ಸರಿ ಸಮಾನಾಗಿ ನಿಲ್ಲಲೂ ಸಂವಿಧಾನವೇ ಕಾರಣ. ಇದನ್ನ ಸಹಿಸಲಾಗದ ಮನುವಾದಿಗಳು ನೀಚತನ ಪ್ರದರ್ಶಿಸುತ್ತಿದ್ದಾರೆ. ನ್ಯಾಯಮೂರ್ತಿಗಳು ದಲಿತರೆನ್ನುವ ಕಾರಣಕ್ಕೆ ಮನುವಾದಿ ವಕೀಲ ಶೂ ಎಸೆತಕ್ಕೆ ಮುಂದಾಗಿದ್ದು ದೇಶ ದ್ರೋಹದ ಕೆಲಸವೇ ಸರಿ. ಇಂತಹ ನಾಗಪುರದ ವಿಷ ಜಂತುಗಳಿಗೆ ಬುದ್ಧಿ ಕಲಿಸಬೇಕಿದೆ. ಧರ್ಮದ ಹೆಸರಿನಲ್ಲಿ ಸದಾ ದ್ವೇಷ ಕಾರುವ ಸಂವಿಧಾನ ವಿರೋಧಿಗಳ ಹೆಡೆಮುರಿ ಕಟ್ಟಬೇಕಿದೆ ” ಎಂದರು.

ಕೊಳ್ಳೆಗಾಲ ಶಾಸಕ ಎ. ಆರ್. ಕೃಷ್ಣಮೂರ್ತಿ ಮಾತನಾಡಿ, “ಮುಖ್ಯ ನ್ಯಾಯಮೂರ್ತಿಗಳ ಮೇಲೆ ಶೂ ಎಸೆತ ಭಾರತ ದೇಶಕ್ಕೆ ಮಾಡಿದ ಅಪಮಾನ. ದೇಶದ್ರೋಹದ ಕೆಲಸ ಮಾಡಿರುವ ವಕೀಲನನ್ನು ದೇಶದಿಂದಲೇ ಗಡಿಪಾರು ಮಾಡಬೇಕು. ಕಾನೂನು ರೀತ್ಯಾ ಮರಣ ದಂಡನೆ ಶಿಕ್ಷೆಗೆ ಗುರಿಪಡಿಸಬೇಕು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, “ಸನಾತನಿಗಳು ಸಂವಿಧಾನದ ಮೇಲಸ್ಟೇ ಅಲ್ಲದೇ, ನ್ಯಾಯಾಂಗದ ಮೇಲೂ ದೌರ್ಜನ್ಯ ಎಸಗುವ ಮೂಲಕ ಕೀಳುಮಟ್ಟಕ್ಕೆ ಇಳಿದಿದ್ದಾರೆ. ಇಂತಹ ದೇಶದ್ರೋಹಿ ರಾಕೇಶ್ ಕಿಶೋರ್ ನನ್ನು ಕೂಡಲೇ ಗಡಿಪಾರು ಮಾಡಬೇಕು, ಅದುವರೆಗೂ ಹೋರಾಟ ಮುಂದುವರಿಯಲಿದೆ” ಎಂದರು.

ಈ ಸುದ್ದಿ ಓದಿದ್ದೀರಾ?ಮೈಸೂರು | ರೈತನ ಮೇಲೆ ದಾಳಿ ನಡೆಸಿದ್ದ ಹುಲಿ ಸೆರೆ

ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಅಯ್ಯನಪುರ ಶಿವಕುಮಾರ್, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಹೆಚ್. ವಿ. ಚಂದ್ರು, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ರಾಮಸಮುದ್ರ ಪುಟ್ಟಸ್ವಾಮಿ, ಪುರುಷೋತ್ತಮ, ಪ್ರಸನ್ನ ಕುಮಾರ್, ಉಮೇಶ್, ಶ್ರೀನಿವಾಸ ನಾಯಕ, ಸಂಘಸೇನಾ, ಅಬ್ರಾರ್ ಅಹಮದ್, ಗಾಳಿಪುರ ಮಹೇಶ್, ಸೋಮನಾಯಕ, ಬಿ.ಕೆ. ರವಿಕುಮಾರ್, ದೊಡ್ಡಿಂದುವಾಡಿ ಸಿದ್ದರಾಜು, ಬಾ. ಮ. ಕೃಷ್ಣಮೂರ್ತಿ, ಎನ್. ನಾಗಯ್ಯ, ಸಿ. ಎಂ. ಶಿವಣ್ಣ, ಬ್ಯಾಡಮೂಡ್ಲು ಬಸವಣ್ಣ, ನಲ್ಲೂರು ಮಹದೇವಸ್ವಾಮಿ, ಮೋಹನ್, ಚಿಕ್ಕ ಮಹಾದೇವ, ಮಧುಸೂದನ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...

ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಹಣದ ಕೊರತೆಯಿಲ್ಲ: ಸಚಿವ ಸಿ. ಪುಟ್ಟರಂಗಶೆಟ್ಟಿ

ಕುಡಿಯುವ ನೀರಿನ ಸೌಲಭ್ಯವನ್ನು ಸಮರ್ಪಕವಾಗಿ ಒದಗಿಸುವುದು ಸರ್ಕಾರದ ಆದ್ಯತೆಯಾಗಿದ್ದು, ಸಮಸ್ಯೆ ಪರಿಹಾರಕ್ಕೆ...