ಚಾಮರಾಜನಗರ ಜಿಲ್ಲೆ, ಯಳಂದೂರಿನ ಇರಸವಾಡಿ ಗ್ರಾಮದಲ್ಲಿ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಯಳಂದೂರಿನ ಬಳೇ ಪೇಟೆಯಲ್ಲಿ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಇರಸವಾಡಿ ಗ್ರಾಮದ ಕೃಷ್ಣಶೆಟ್ಟಿ ಹಾಗೂ ಪುಟ್ಟಸ್ವಾಮಿ ಎಂಬುವರು ಗ್ರಾಮದಲ್ಲಿ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಯಳಂದೂರಿನ ಬಳೇ ಪೇಟೆ ಕಾಮಾನು ಬಳಿ ಕಾದು ಕುಳಿತು ಯಳಂದೂರಿನಿಂದ ಬಸ್ ಮರಳಿ ತೆರಳುತಿದ್ದ ವೇಳೆ ಅಡ್ಡಗಟ್ಟಿ ಚಾಲಕ ವಿಜಯ್ ಕುಮಾರ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಸ್ವಾಭಿಮಾನದ ಬದುಕು ಕಟ್ಟಿಕೊಟ್ಟವರು ವಿಶ್ವಜ್ಞಾನಿ ಡಾ. ಬಿ. ಆರ್. ಅಂಬೇಡ್ಕರ್ : ಸಂಸದ ಸುನಿಲ್ ಬೋಸ್
ಘಟನೆ ನಡೆದ ಸ್ಥಳದಲ್ಲಿದ್ದ ಸ್ಥಳೀಯರುಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಯಳಂದೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.