ಚಾಮರಾಜನಗರ | ಕುಸಿದ ಮುಖ್ಯ ರಸ್ತೆಗೆ ಇಲ್ಲ ದುರಸ್ಥಿ ಭಾಗ್ಯ; ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ

Date:

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಿಂದ ತಮಿಳುನಾಡು ಕಡೆಗೆ ತೆರಳುವ ಮುಖ್ಯ ರಸ್ತೆಯು ಒಡೆಯರ ಪಾಳ್ಯದ ಟ್ರ್ಯಾಕ್ಟರ್ ಗ್ಯಾರೇಜ್ ಸಮೀಪದಲ್ಲಿ ಕುಸಿದು ಬಿದ್ದು ಹಾಳಾಗಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿ ಒಂದು ವರ್ಷ ಕಳೆದಿದೆ ರಸ್ತೆ ಬದಿಯಲ್ಲಿ ದೊಡ್ಡ ಗುಂಡಿ ಬಿದ್ದಿದ್ದು ಅನಾಹುತಕ್ಕೆ ಎಡೆ ಮಾಡಿ ಕೊಟ್ಟಿದೆ ಎಂದು ಸವಾರರು ಆಕ್ರೋಶ ಹೊರಹಾಕುತ್ತಿದ್ದಾರೆ.

ಈ ಬಗ್ಗೆ ಸಂಬಂಧ ಪಟ್ಟ ಜನಪ್ರತಿನಿದಿಗಳು ಹಾಗು ಇಲಾಖೆಗೆ  ದುರಸ್ಥಿಗೊಳಿಸುವಂತೆ ಮನವಿ ಮಾಡಿದ್ದರು ಗಣನೆಗೆ ತೆಗೆದುಕೊಳ್ಳದೆ, ಕೇವಲ ಬ್ಯಾರಿಕೆಡ್‌ಗಳನ್ನು ಇಟ್ಟು ಯತಾಸ್ಥಿತಿಯಲ್ಲಿಟ್ಟಿದೆ. ಇಲ್ಲಿ ಪ್ರಯಾಣಿಸುವ ವಾಹನ ಸವಾರರು ಪ್ರತೀ ದಿನ ಭಯದಲ್ಲೇ ಸಂಚಾರ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಈ ಸ್ಥಳದಲ್ಲೇ ವಾಹನಗಳು ಮುಖಾ ಮುಖಿ ಎದುರಾದರೆ ಅವಘಡವಂತೂ ಕಟ್ಟಿಟ್ಟ ಬುತ್ತಿ.

ಹಾಗಾಗಿ ಸಂಬಂಧ ಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆ ಹನೂರು ತಾಲೂಕು ಅಧ್ಯಕ್ಷ ನೇಮತ್ ಪಾಷ ಮತ್ತು ಪದಾಧಿಕಾರಿಗಳು ಹಾಗು ಸ್ಥಳೀಯ ನಾಗರಿಕರು ಅಗ್ರಹಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಸ ಸುರಿಯುವ ಜಾಗವಾಗಿ ಮಾರ್ಪಟ್ಟ ಬೆಂಗಳೂರಿನ ಮೇಲ್ಸೇತುವೆಗಳು!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ವಾಹನ ಸವಾರರಿಗೆ ಸಂಚಾರ ದಟ್ಟಣೆ ತಲೆನೋವಾಗಿ ಪರಿಣಮಿಸಿದೆ....

ರಾಯಚೂರು | ಅಬಕಾರಿ ಇಲಾಖೆ ದಾಳಿ; ₹500 ಮುಖಬೆಲೆಯ ನೋಟಿನ 62 ಬಂಡಲ್ ಪತ್ತೆ

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಗೌಳಿಗಲ್ಲಿಯ ಗೌಳಿಯೊಬ್ಬರ ಮನೆಯಲ್ಲಿ ಗೋಣಿ ಚೀಲದ...

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ...