ಇ-ಸ್ವತ್ತು ಮಾಡಿಕೊಡಲು 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ನಗರಸಭೆ ಆರ್‌ಐ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಚಾಮರಾಜನಗರ ನಗರಸಭೆಯಲ್ಲಿ ನಡೆದಿದೆ.
ಚಾಮರಾಜನಗರ ನಗರಸಭೆಯ ಕಂದಾಯ ನಿರೀಕ್ಷಕ ಅಧಿಕಾರಿ ನಾರಾಯಣ್ ಎಂಬುವವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಾದೇಶ್ ಎಂಬವರ ನಿವೇಶನದ ಇ-ಸ್ವತ್ತು ಮಾಡಿಕೊಡಲು 1 ಲಕ್ಷ ರೂ. ಬೇಡಿಕೆ ಇಟ್ಟಿದ್ದರು.
ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಪೋಕ್ಸೊ ಪ್ರಕರಣದಲ್ಲಿ ಕರ್ತವ್ಯ ಲೋಪ; ಮೂವರು ಅಧಿಕಾರಿಗಳಿಗೆ ₹5 ಲಕ್ಷ ದಂಡ
ಮಂಗಳವಾರ ₹20 ಸಾವಿರ ನಗದು ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಸಾಕ್ಷಿ ಸಮೇತ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ, ಲೋಕಾಯುಕ್ತ ಪೊಲೀಸರು ಕಂದಾಯ ನಿರೀಕ್ಷಕನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.