ಚಾಮರಾಜನಗರ | ದಸರಾ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಚಾಲನೆ

Date:

Advertisements

ಚಾಮರಾಜನಗರದ ಡಾ ಬಿ ಆರ್ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟಕ್ಕೆ ಜಿಲ್ಲಾಧಿಕಾರಿ ಶಿಲ್ಪಾನಾಗ್ ಚಾಲನೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟದಲ್ಲಿ ಜಿಲ್ಲಾಧಿಕಾರಿ ಕ್ರೀಡಾ ಧ್ವಜಾರೋಹಣ ನೆರೆವೇರಿಸಿದರು.

ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವಿಜೇತರಾಗಿ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಜಿಲ್ಲೆಯ ಐದು ತಾಲೂಕುಗಳ ಕ್ರೀಡಾತಂಡಗಳ ಪರಿಚಯ ಮಾಡಿಕೊಂಡು, ಕ್ರೀಡಾಪಟುಗಳೊಂದಿಗೆ ಆತ್ಮೀಯವಾಗಿ ಮಾತನಾಡಿ ವಿದ್ಯಾರ್ಥಿಗಳಲ್ಲಿ ಹುರುಪು, ಉತ್ಸಾಹ ಇಮ್ಮಡಿಗೊಳಿಸಿದರು.

Advertisements

ಕಾರ್ಯಕ್ರಮವನ್ನು ಉದ್ಘಾಟಿಸಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ ಮಾತನಾಡಿ, “ವಿದ್ಯಾರ್ಥಿಗಳು ಪಾಠ, ಪ್ರವಚನದ ಜತೆಗೆ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೈಹಿಕ, ಮಾನಸಿಕ ಆರೋಗ್ಯ ಉತ್ತಮಗೊಳ್ಳಲಿದೆ. ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ. ಭಾಗವಹಿಸುವಿಕೆ ಮುಖ್ಯವಾಗಿದೆ. ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಬೇಕು” ಎಂದರು.

“ವಿದ್ಯಾರ್ಥಿಗಳು ಕ್ರೀಡಾ ಕೂಟದಲ್ಲಿ ಕ್ರೀಡಾ ಮನೋಭಾವ ಮೆರೆಯಬೇಕು. ಜಿಲ್ಲಾಮಟ್ಟದಲ್ಲಿ ವಿಜೇತರಾದ ಕ್ರೀಡಾಪಟುಗಳು ಮೈಸೂರಿನಲ್ಲಿ ನಡೆಯುವ ರಾಜ್ಯಮಟ್ಟದ ದಸರಾ ಕ್ರೀಡಾಕೂಟದಲ್ಲಿ ಗೆದ್ದು ಜಿಲ್ಲೆಗೆ ಕೀರ್ತಿ ತರುವಂತಾಗಬೇಕು. ಕ್ರೀಡೆಯಲ್ಲಿ ಸೋತವರು ಹತಾಶರಾಗದೇ ಮತ್ತೊಮ್ಮೆ ಗೆಲುವಿಗೆ ಪ್ರಯತ್ನಿಸಬೇಕು” ಎಂದು ಕ್ರೀಡಾರ್ಥಿಗಳಿಗೆ ಕಿವಿಮಾತು ಹೇಳಿದರು.

ಜಿಲ್ಲಾ ಕ್ರೀಡಾಂಗಣ ಅಭಿವೃದ್ಧಿ ಸಮಿತಿ ಸದಸ್ಯ ಶ್ರೀನಿವಾಸ ಪ್ರಸಾದ್ ಮಾತನಾಡಿ, “ಕ್ರೀಡಾಂಗಣಕ್ಕೆ ಕುಡಿಯುವ ನೀರು ಸೇರಿದಂತೆ ಇತರೆ ಮೂಲಸೌಲಭ್ಯಗಳ ಕೊರತೆ ಇದ್ದು, ಶಾಶ್ವತ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸಲ್ಲಿಸಿರುವ ಪ್ರಸ್ತಾವನೆಗೆ ಅನುಮೋದನೆ ದೊರೆತಿದೆ. ಚಾಮರಾಜನಗರ ಜಿಲ್ಲಾ ಕೇಂದ್ರವಾಗಿ 25 ವರ್ಷಗಳೇ ಕಳೆದಿದ್ದರೂ ಜಿಲ್ಲಾ ಕ್ರೀಡಾಂಗಣ ಇನ್ನೂ ಅಭಿವೃದ್ಧಿಯಾಗಬೇಕಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಕಾವೇರಿ ಆರತಿ ಕೈಬಿಟ್ಟು ವಚನ ಪಸರಿಸುವಂತೆ ʼನಾವು ದ್ರಾವಿಡ ಕನ್ನಡಗರು’ ಸಂಘಟನೆ ಆಗ್ರಹ

“ಜಿಮ್ ಸ್ಥಾಪನೆ ಮಾಡಲು ಕ್ರೀಡಾ ಇಲಾಖೆ ಕಚೇರಿ ಹಾಗೂ ಕ್ರೀಡಾಂಗಣದ ಪ್ರವೇಶದ್ವಾರದ ಕ್ರೀಯಾಯೋಜನೆಗೆ ಅನುದಾನ ಬಿಡುಗಡೆಯಾಗಿದ್ದು, ಕಾಮಗಾರಿ ಆರಂಭಿಸಬೇಕಾಗಿದೆ. ಸರ್ಕಾರವು ನಿಗದಿಪಡಿಸಿರುವ ಶೇ.2ರಷ್ಟು ಕ್ರೀಡಾ ಮೀಸಲಾತಿಗೆ ನೆಟ್‍ಬಾಲ್ ಕ್ರೀಡೆಯನ್ನು ಸೇರ್ಪಡೆ ಮಾಡಿರುವುದು ಆರೋಗ್ಯಕರ ಬೆಳವಣಿಗೆಯಾಗಿದ್ದು, ಜಿಲ್ಲೆಯ ಎಲ್ಲ ಶಾಲೆಗಳಲ್ಲಿ ನೆಟ್‍ಬಾಲ್ ತರಬೇತಿ ನೀಡಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಬೇಕು” ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶಿವಸ್ವಾಮಿ, ತಾಲೂಕು ದೈಹಿಕ ಪರಿವೀಕ್ಷಕ ಬಸವರಾಜು, ಗ್ರೇಡ್-2 ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಚಿಕ್ಕಬಸವಯ್ಯ, ಉಪಾಧ್ಯಕ್ಷ ಶಶಿಕುಮಾರ್, ಪ್ರಧಾನ ಕಾರ್ಯದರ್ಶಿ ಶಿವಮಲ್ಲು, ಪದಾಧಿಕಾರಿ ಕುಮಾರಸ್ವಾಮಿ, ಕ್ರೀಡಾ ತರಬೇತುದಾರ ಗಣೇಶ್ ಸೇರಿದಂತೆ ಹಲವರು
ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X