ಚಾಮರಾಜನಗರ | ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷಾ ಕಾರ್ಯಕ್ಕೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

Date:

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆಗೆ ಸಂಬಂಧಿಸಿದ ಜಿಲ್ಲಾಮಟ್ಟದ ಮೇಲ್ವಿಚಾರಣಾ ಹಾಗೂ ಮೌಲ್ಯಮಾಪನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಜಿಲ್ಲೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರನ್ನು ಗುರುತಿಸಿ ಅವರಿಗೆ ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಮಟ್ಟದ ಸಮೀಕ್ಷಾ ಕಾರ್ಯಕ್ಕೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

- Advertisement -

ಸರ್ಕಾರದ ನಿರ್ದೇಶನದನ್ವಯ ಲಿಂಗತ್ವ ಅಲ್ಪಸಂಖ್ಯಾತರನ್ನು ಗುರುತಿಸಿ ಅವಶ್ಯವಾಗಿರುವ ಮೂಲಸೌಕರ್ಯಗಳನ್ನು ಒದಗಿಸಿ ಅವರನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಜಿಲ್ಲೆಯಲ್ಲಿರುವ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷಾ ಕಾರ್ಯವನ್ನು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಅನುಷ್ಠಾನಗೊಳಿಸುತ್ತಿದೆ. ಈ ನಿಟ್ಟಿನಲ್ಲಿ ಸಮೀಕ್ಷಾ ಕಾರ್ಯ ಹಮ್ಮಿಕೊಳ್ಳಲು ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷಾ ಕಾರ್ಯಕ್ಕೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳನ್ನೊಳಗೊಂಡ ಮೇಲ್ವಿಚಾರಣಾ ಹಾಗೂ ಮೌಲ್ಯಮಾಪನಾ ಸಮಿತಿಯನ್ನು ರಚಿಸಲಾಗಿದೆ. ಯಾವುದೇ ಲಿಂಗತ್ವ ಅಲ್ಪಸಂಖ್ಯಾತರು ಸಮೀಕ್ಷೆಯಿಂದ ವಂಚಿತರಾಗದಂತೆ ಸಮಿತಿಯು ಉಸ್ತುವಾರಿ ವಹಿಸಲಿದೆ. ಈ ಕಾರ್ಯಕ್ಕೆ ವಿವಿಧ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಿ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿರುವ ದಮನಿತ ಮಹಿಳೆಯರು, ಎಚ್.ಐ.ವಿ ಬಾಧಿತ ಮಹಿಳೆಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರನ್ನು ಗುರುತಿಸಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಬೇಕು. ಕೌಶಲ್ಯಾಭಿವೃದ್ಧಿ ತರಬೇತಿ ನೀಡಿ ಜೀವನ ಭದ್ರತೆಗೆ ಅವಕಾಶ ಮಾಡಿಕೊಡಬೇಕು. ಲಿಂಗತ್ವ ಅಲ್ಪಸಂಖ್ಯಾತರಿಗೆ ಎಲ್ಲಾ ಬ್ಯಾಂಕುಗಳು ಸಾಲಸೌಲಭ್ಯಗಳನ್ನು ನೀಡುವಲ್ಲಿ ಯಾವುದೇ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕು. ಸರ್ಕಾರದ ವಿವಿಧ ವಸತಿ ಯೋಜನೆಗಳಡಿ ಮನೆ ಮಂಜೂರು ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಮಾತನಾಡಿ ವಸತಿ ಯೋಜನೆಗಳಡಿ ಎಚ್.ಐ.ವಿ ಸೋಂಕಿತರಿಗೆ ಮನೆ ಮಂಜೂರು ಮಾಡುವ ಸಂಬಂಧ ಮಂಜೂರಾತಿ ಆದೇಶದಲ್ಲಿ ಎಚ್.ಐ.ವಿ ಬಾಧಿತರು ಎಂದು ನಮೂದಿಸುವ ಬದಲಾಗಿ ವಿಶೇಷ ಯೋಜನೆಯ ವರ್ಗ ಎಂದು ನಮೂದಿಸಲು ಸೂಕ್ತ ಕ್ರಮ ವಹಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ನಾಣಚ್ಚಿ ನಾಗರಹೊಳೆ : ಗೌರವ, ಘನತೆಯೊಂದಿಗೆ ನಡೆದುಕೊಳ್ಳಿ; ಆದಿವಾಸಿ ಬುಡಕಟ್ಟು ಜನರ ಆಗ್ರಹ

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ. ಎನ್. ಶಶಿಧರ್, ಮಹಿಳಾ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಸುರೇಶ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮಹಮದ್ ಅಕ್ಬರ್, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸುರೇಖಾ, ಜಿಲ್ಲಾಮಟ್ಟದ ಅಧಿಕಾರಿಗಳು, ಸ್ನೇಹಜ್ಯೋತಿ ಹಾಗೂ ಸಮತಾ ಸೊಸೈಟಿ ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...