ಚಾಮರಾಜನಗರ | ಅಂಧ ಯುವತಿ ನೆರವಿಗೆ ಧಾವಿಸಿದ ಜಿಲ್ಲಾಧಿಕಾರಿ

Date:

ಚಾಮರಾಜನಗರ ನಗರ ಜಿಲ್ಲೆ, ಕಸಬಾ ವ್ಯಾಪ್ತಿಯ ತಮ್ಮಡಹಳ್ಳಿ ಅಂಧ ಯುವತಿ ಭಾಗ್ಯ ಅವರಿಗೆ ಬಹು ವರ್ಷಗಳಿಂದ ಆಧಾರ್ ಪಡೆಯಲು ತೊಡಕಾಗಿದ್ದ ಸಮಸ್ಯೆಯನ್ನು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಪರಿಹರಿಸಿದ್ದಾರೆ.

- Advertisement -

ಚಾಮರಾಜನಗರ ತಾಲೂಕಿನ ತಮ್ಮಡಹಳ್ಳಿಯ ಭಾಗ್ಯ ಎಂಬುವವರು ಅಂಧರಾಗಿದ್ದು ಆಧಾರ್ ಕಾರ್ಡ್ ಪಡೆಯುವ ಸಲುವಾಗಿ ನಡೆಸುವ ಕಣ್ಣಿನ ಪೂರ್ವ ತಪಾಸಣೆ ಸಂದರ್ಭದಲ್ಲಿ ಕಣ್ಣಿನ ತೊಂದರೆಯಿಂದ ಏರಿಳಿತವಾಗುತ್ತಿದ್ದರಿಂದ ಆಧಾರ್ ಕಾರ್ಡ್ ಪಡೆಯಲು ಸಾಧ್ಯವಾಗುತ್ತಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಕಳೆದ 2024ರ ಡಿಸೆಂಬರ್ 19ರಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ಅದ್ಯಕ್ಷತೆಯಲ್ಲಿ ನಡೆದ ಜಿಲ್ಲಾಮಟ್ಟದ ವಿಕಲಚೇತನರ ಕುಂದು ಕೊರತೆ ಸಭೆಯಲ್ಲಿ ಭಾಗ್ಯ ಅವರು ಆಧಾರ್ ನೊಂದಣಿಯಾಗದಿರುವ ಸಮಸ್ಯೆ ನಿವೇದಿಸಿಕೊಂಡಿದ್ದರು. ಸಮಸ್ಯೆ ಆಲಿಸಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಭಾಗ್ಯ ಅವರಿಗೆ ಆಧಾರ್ ನೊಂದಣಿಗೆ ವಿಶೇಷ ಕ್ರಮ ವಹಿಸಲು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಆಧಾರ್ ನೊಂದಣೀಗೆ ಇದ್ದ ತೊಂದರೆಗಳನ್ನು ವಿವರವಾಗಿ ಪಟ್ಟಿ ಮಾಡಿ ಇ-ಆಡಳಿತ ಕೇಂದ್ರಕ್ಕೆ ಕಳುಹಿಸಿ ಆಧಾರ್ ಕಾರ್ಡ್ ಪಡೆಯಲು ಪತ್ರ ಕಳುಹಿಸಲಾಗಿತ್ತು. ಅದರಂತೆ, ತೀವ್ರತರವಾದ ವಿಕಲಚೇತನರಿಗೆ ಯು.ಡಿ.ಐ.ಡಿ ಕಾರ್ಡ್ ಮಾಡಿಸುವಂತೆಯೂ ಜಿಲ್ಲಾಧಿಕಾರಿ ಸೂಚನೆ ನೀಡಿದ್ದರು.

ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಜಿಲ್ಲಾಮಟ್ಟದ ಆಧಾರ್ ಕೇಂದ್ರ ಅಧಿಕಾರಿಗಳು ಸತತವಾಗಿ ಪ್ರಯತ್ನಿಸಿ ಭಾಗ್ಯ ಅವರಿಗೆ ಆಧಾರ್ ನೊಂದಣಿಗೆ ಇದ್ದ ತೊಡಕುಗಳನ್ನು ಪರಿಹರಿಸಿದ್ದಾರೆ. ಕೊನೆಗೂ ಜಿಲ್ಲಾಧಿಕಾರಿಯವರ ವಿಶೇಷ ಕಾಳಜಿಯಿಂದ ಭಾಗ್ಯ ಅವರಿಗೆ ಆಧಾರ್ ನೊಂದಣಿಯಾಗಿ ಕಾರ್ಡು ದೊರೆತಿದೆ.

ಈ ಸುದ್ದಿ ಓದಿದ್ದೀರಾ? ಯುಗಧರ್ಮ | ಗುಲ್ಫಿಶಾ ಕೇಳುತ್ತಾಳೆ – ಇದು ನ್ಯಾಯವೇ?

ಭಾಗ್ಯ ಅವರು ಮಾತನಾಡಿ ” ಆಧಾರ್ ಕಾರ್ಡ್ ಇರದೆ ಸರ್ಕಾರದ ಸವಲತ್ತು ಪಡೆಯಲು, ಪಡೆಯುವಾಗ ನಿರಂತರವಾಗಿ ಸಾಕಷ್ಟು ತೊಂದರೆಯಾಗಿದ್ದು, ಬ್ಯಾಂಕ್ ಯಾವುದೇ ಆಗಲಿ ಎಲ್ಲದಕ್ಕೂ ಆಧಾರ್ ಲಿಂಕ್ ಮಾಡಲಾಗದೆ ಸಂಕಷ್ಟ ಅನುಭವಿಸಿದ್ದರು. ಪದವಿ ಪೂರ್ಣಗೊಳಿಸಿರುವ ನನಗೆ ಆಧಾರ್ ಇಲ್ಲದೆ ಇದ್ದುದ್ದರಿಂದ ಮುಂದಿನ ಭವಿಷ್ಯಕ್ಕೆ ತೊಂದರೆಯಾಗುತ್ತಿತ್ತು. ಜಿಲ್ಲಾಧಿಕಾರಿಗಳ ವಿಶೇಷ ಆಸಕ್ತಿಯಿಂದ ಆಧಾರ್ ಕಾರ್ಡ್ ಬಂದಿದೆ. ಇದಕ್ಕಾಗಿ ಜಿಲ್ಲಾಧಿಕಾರಿಯವರಿಗೆ ತುಂಬು ಹೃದಯದಿಂದ ಕೃತಜ್ಞತೆಗಳನ್ನ ಸಲ್ಲಿಸುತ್ತೇನೆ. ಬಹು ವರ್ಷಗಳ ಸಮಸ್ಯೆ ಪರಿಹಾರವಾಗಿದ್ದು ಮುಂದಿನ ಬದುಕಿಗೆ ಉತ್ಸಾಹ ದೊರೆತಿದೆ ” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ ಭೀತಿಯಲ್ಲಿ ರಾಜಕೀಯ ಪಕ್ಷಗಳು!

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ...

ಬಾಗೇಪಲ್ಲಿ | ಪರಿಷತ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಗೆಲವಿಗೆ ಶ್ರಮಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ

ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನೂ ಪ್ರಾಮಾಣಿಕವಾಗಿ ಮತದಾರರನ್ನು ಸಂಪರ್ಕಿಸಿ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ...

ಚಿಂತಾಮಣಿ | ಅಪಘಾತಕ್ಕೀಡಾದ ಸವಾರನ ಜೀವ ಉಳಿಸಿದ ಪೊಲೀಸ್‌ ಸಿಬ್ಬಂದಿಗೆ ಎಸ್‌ಪಿ ಗೌರವ

ಚಿಂತಾಮಣಿ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯನ್ನು ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ...

ವಿಜಯಪುರ | ಗ್ರಾಮೀಣ ಪ್ರತಿಭೆಯ ಅಂತಾರಾಷ್ಟ್ರೀಯ ಸಾಧನೆಗೆ ಎಂ.ಬಿ ಪಾಟೀಲ ಮೆಚ್ಚುಗೆ

ಕೆನಡಾದಲ್ಲಿ ಇತ್ತೀಚೆಗೆ ನಡೆದ ಕಾಮನ್‌ವೆಲ್ತ್ ಕ್ರೀಡಾಕೂಟದ ಪವರ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ...