ಚಾಮರಾಜನಗರ | ಡಾ. ಬಿ.ಆರ್. ಅಂಬೇಡ್ಕರ್ ಜೀವನಸಾಧನೆ, ವಿಚಾರಧಾರೆಗಳ ಜಾಗೃತಿ ಅಗತ್ಯ: ಶ್ರೀರೂಪ

Date:

ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ನಗರದ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ನಗರಸಭೆಯ ಸಂಯುಕ್ತ ಆಶ್ರಯದಲ್ಲಿ ವಿಚಾರ ಸಂಕಿರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

- Advertisement -

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಶ್ರೀರೂಪ, ಸಂವಿಧಾನ ರಚನೆ ಮೂಲಕ ದೇಶದ ಎಲ್ಲಾ ವರ್ಗಗಳ ಜನರಿಗೆ ಸಮಾನ ಅವಕಾಶ ಕಲ್ಪಿಸಿದ ಜಗತ್ತಿನ ಮಹಾನ್ ಮೇಧಾವಿ ಅಂಬೇಡ್ಕರ್ ಅವರ ಜೀವನ ಸಾಧನೆ ಹಾಗೂ ಮೌಲ್ಯಯುತ ವಿಚಾರಧಾರೆಗಳ ಬಗ್ಗೆ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದು ಅವಶ್ಯಕ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಅಂಬೇಡ್ಕರ್ ಅವರ ಅಸಾಧಾರಣ ಚಿಂತನೆಗಳನ್ನು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಜಯಂತಿಗೆ ಪೂರ್ವಭಾವಿಯಾಗಿ ವಿಚಾರ ಸಂಕಿರಣ ಆಯೋಜಿಸಲಾಗುತ್ತಿರುವುದು ಜಿಲ್ಲೆಯ ವಿಶೇಷತೆಯಾಗಿದೆ ಎಂದರು. ಲಂಡನ್ ಸ್ಕೂಲ್ ಆಫ್ ಏಕಾನಾಮಿಕ್ಸ್‌ನಲ್ಲಿ ಅಧ್ಯಯನ ಮಾಡಿದ್ದ ಅಂಬೇಡ್ಕರ್ ಅವರು ಅರ್ಥಶಾಸ್ತ್ರಜ್ಞರಾಗಿ ಹಾಗೂ ಸಮಾಜಶಾಸ್ತ್ರಜ್ಞರಾಗಿ ಪ್ರಸಿದ್ಧರಾಗಿದ್ದು, ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸ್ಥಾಪನೆಗೆ ನೀಡಿದ ಕೊಡುಗೆ ಅಪಾರವಾಗಿದೆ ಎಂದು ವಿವರಿಸಿದರು.

ದೇಶದ ಅಸ್ಪೃಶ್ಯರು, ಶೋಷಿತರು, ದೀನದಲಿತರು ಮತ್ತು ಅಲ್ಪಸಂಖ್ಯಾತರ ಏಳಿಗೆಗಾಗಿ ಜೀವನವನ್ನೇ ಸಮರ್ಪಿಸಿದ ಅಂಬೇಡ್ಕರ್ ಅವರು ಮಹಿಳೆಯರಿಗೆ ಹೆರಿಗೆ ರಜೆ, ಹಿಂದೂ ಕೋಡ್ ಬಿಲ್ ಮುಂತಾದ ಪ್ರಮುಖ ಸುಧಾರಣೆಗಳನ್ನು ಪ್ರತಿಪಾದಿಸಿದ್ದರು. ರೈತರ ಜೀವನಮಟ್ಟ ಸುಧಾರಣೆಗೆ ಬೆಂಬಲ ಬೆಲೆ, ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿದ್ದು, ಮಹಿಳೆಯರು ಸೇರಿದಂತೆ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ನೀಡಿದ ಮಹನೀಯರಾಗಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಮಾತನಾಡಿ, ಇಂತಹ ವಿಚಾರ ಸಂಕಿರಣಗಳು ವಿದ್ಯಾರ್ಥಿಗಳು ಹಾಗೂ ನಾಗರಿಕರಿಗೆ ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ವ್ಯಾಪಕವಾಗಿ ಪರಿಚಯಿಸುವಲ್ಲಿ ಸಹಕಾರಿಯಾಗಿವೆ ಎಂದರು. ಶಿಕ್ಷಣದ ಮಹತ್ವವನ್ನು ಒತ್ತಿಹೇಳಿದ ಅವರು, ಅನ್ಯಾಯವನ್ನು ಪ್ರಶ್ನಿಸುವ ಮನೋಭಾವ ಸಮಾಜದಲ್ಲಿ ಸಮಾನತೆ ತರಲು ನೆರವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿದ್ದ ತಿ. ನರಸೀಪುರ ನಳಂದ ಬುದ್ಧವಿಹಾರದ ಪೂಜ್ಯ ಬೋಧಿರತ್ನ ಬಂತೇಜಿ ಅವರು ಮಾತನಾಡಿ, ಅಂಬೇಡ್ಕರ್ ಅವರ ಕನಸು ನನಸಾಗಲು ಅವರ ಆಶಯಗಳು ಸಂಪೂರ್ಣವಾಗಿ ಜಾರಿಯಾಗಬೇಕು. ‘ಸರ್ವರಿಗೂ ಸಮಬಾಳು – ಸರ್ವರಿಗೂ ಸಮಪಾಲು’ ಎಂಬ ತತ್ವ ಅನುಷ್ಠಾನಗೊಳ್ಳಬೇಕು ಎಂದು ಹೇಳಿದರು.

ಮುಖ್ಯ ಭಾಷಣಕಾರರಾಗಿ ಆಗಮಿಸಿದ್ದ ಮೈಸೂರು ಕೆ.ಆರ್. ಆಸ್ಪತ್ರೆಯ ಕೀಲು ಮತ್ತು ಮೂಳೆ ತಜ್ಞ ಡಾ. ಡಿ. ಜಗನ್ನಾಥ್ ಅವರು ‘ಅಂಬೇಡ್ಕರ್ ದೃಷ್ಠಿಕೋನದಲ್ಲಿ ಧಮ್ಮ ಮತ್ತು ಸಾಮಾಜಿಕ ಸಾಮರಸ್ಯ’ ಕುರಿತು ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯ ಭಾಷಾಂತರ ನಿರ್ದೇಶನಾಲಯದ ನಿರ್ದೇಶಕ ಡಾ. ಎಂ. ವೆಂಕಟೇಶ್ ಅವರು ‘ಅಂಬೇಡ್ಕರ್ ವೈಚಾರಿಕತೆ ಮತ್ತು ಪ್ರಸ್ತುತ ಸನ್ನಿವೇಶ’ ಕುರಿತು ಉಪನ್ಯಾಸ ನೀಡಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮಕ್ಕಳಲ್ಲಿ ಕಲಿಯುವ-ಕುತೂಹಲಕಾರಿ ಆಸಕ್ತಿ; ರಂಜನಿಯವಾಗಿ ಕಲಿಸಿದರೆ ಗ್ರಹಿಸುತ್ತಾರೆ: ಡಾ ಪಿ ಕೆ ರಾಜಶೇಖರ್

ಸಂಕಿರಣದಲ್ಲಿ ಡಿವೈಎಸ್ಪಿ ಸ್ನೇಹರಾಜ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮುನಿರಾಜು, ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಾಜು ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...