ಚಾಮರಾಜನಗರ | ಡಾ ಬಿ ಆರ್ ಅಂಬೇಡ್ಕರ್,ಡಾ ಬಾಬು ಜಗಜೀವನ್ ರಾಮ್ ಜಯಂತಿ ಅದ್ದೂರಿ ಆಚರಣೆಗೆ ತೀರ್ಮಾನ

Date:

Advertisements

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳು ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಪ್ರತಿನಿಧಿಗಳ ಸಮ್ಮುಖದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾಡಳಿತದ ವತಿಯಿಂದ ಎಲ್ಲರ ಸಹಕಾರದೊಂದಿಗೆ ಏಪ್ರಿಲ್ 5 ರಂದು ಮಾಜಿ ಉಪ ಪ್ರಧಾನಿ ಡಾ ಬಾಬು ಜಗಜೀವನ್ ರಾಮ್ ಹಾಗೂ ಏಪ್ರಿಲ್ 14 ರಂದು ಸಂವಿದಾನ ಶಿಲ್ಪಿ ಡಾ ಬಿ ಆರ್ ಅಂಬೇಡ್ಕರ್ ಅವರ ಜನ್ಮದಿನಾಚರಣೆಯನ್ನು ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಹಮ್ಮಿಕೊಳ್ಳಲು ತಿರ್ಮಾನಿಸಲಾಯಿತು.

ಸಂಘಟಣೆಗಳ ಮುಖಂಡರು ಮಾತನಾಡಿ ” ಸಾಕಷ್ಟು ಮುಂಚಿತವಾಗಿಯೇ ಇಬ್ಬರು ಮಹಾನೀಯರ ಜಯಂತಿ ಆಚರಣೆಯನ್ನು ಹಮ್ಮಿಕೊಳ್ಳಲು ಸಿದ್ದತೆ ಕೈಗೊಳ್ಳಬೇಕು ಕರಪತ್ರ, ಆಹ್ವಾನ ಪತ್ರಿಕೆಗಳನ್ನು ಮೊದಲೇ ಮುದ್ರಿಸಿ ತಲುಪಿಸಬೇಕು, ವಿಚಾರ ಸಂಕಿರಣ, ಕಾರ್ಯಕ್ರಮದಂದು ಮುಖ್ಯ ಭಾಷಣಕ್ಕಾಗಿ ಮಹನೀಯರ ವಿಚಾರಧಾರೆಗಳನ್ನು ಆಳವಾಗಿ ಅಧ್ಯಯನ ಮಾಡಿರುವವರನ್ನು ಆಹ್ವಾನಿಸಬೇಕು.

ಡಾ ಬಿ ಆರ್ ಅಂಬೇಡ್ಕರ್, ಡಾ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರದ ಮೆರವಣಿಗೆಯು ಅದ್ದೂರಿಯಾಗಿ ನಡೆಯಬೇಕು. ಹೆಚ್ಚು ಕಲಾ ತಂಡಗಳನ್ನು ನಿಯೋಜಿಸಬೇಕು. ಎಲ್ಲಾ ತಾಲ್ಲೂಕುಗಳಲ್ಲಿಯೂ ಕಾರ್ಯಕ್ರಮ ವ್ಯವಸ್ಥಿತವಾಗಿ ಏರ್ಪಾಡಾಗಬೇಕು. ಕಾರ್ಯಕ್ರಮ ಹೆಚ್ಚು ಅರ್ಥಪೂರ್ಣವಾಗಿ ನಡೆಯಲು ನಿಯೋಜಿತವಾಗಲಿರುವ ಸಮಿತಿಗಳು ಎಲ್ಲಾ ಸಿದ್ದತೆಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕು ” ಎಂದು ಸಲಹೆ ನೀಡಿದರು.

Advertisements

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ ” ಮಹನೀಯರ ಜಯಂತಿಯನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಣೆ ಮಾಡಲು ಎಲ್ಲಾ ಸಿದ್ದತೆಗಳನ್ನು ಕೈಗೊಳ್ಳಲಾಗುವುದು. ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ಅದ್ದೂರಿ ವೇದಿಕೆ ನಿರ್ಮಿಸಿ ಕಾರ್ಯಕ್ರಮ ನಡೆಸಲಾಗುವುದು. ಮೆರವಣಿಗೆಗೆ ಮೆರಗು ತರಲು ಹೆಚ್ಚಿನ ಕಲಾ ತಂಡಗಳನ್ನು ನಿಯೋಜನೆ ಮಾಡಲಾಗುವುದು.ಈಗಾಗಲೇ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಮುತುವರ್ಜಿಯಿಂದ ಕಾರ್ಯಕ್ರಮ ಯಶಸ್ವಿಗೆ ಕ್ರಮ ವಹಿಸಲು ತಿಳಿಸಲಾಗಿದೆ.

ವಿಚಾರ ಸಂಕಿರಣ ಮತ್ತು ಜಯಂತಿ ಕಾರ್ಯಕ್ರಮಕ್ಕೆ ಮುಖ್ಯ ಭಾಷಣಕಾರರನ್ನು ಆಹ್ವಾನಿಸಬೇಕಿದೆ. ಇದಕ್ಕಾಗಿ ವಿಶೇಷ ಸಮಿತಿಯೊಂದನ್ನು ರಚಿಸಿ ಎಲ್ಲರ ಸಲಹೆ ಒಮ್ಮತದ ತೀರ್ಮಾನದಂತೆ ಭಾಷಣಕಾರರು, ವಿಷಯ ತಜ್ಞರನ್ನು ಆಯ್ಕೆ ಮಾಡಲಾಗುವುದು. ಕಾರ್ಯಕ್ರಮ ಸುವ್ಯವಸ್ಥಿತವಾಗಿ ನಡೆಸಲು ಸಮಿತಿಗಳು ಜವಬ್ದಾರಿ ವಹಿಸಲಿವೆ. ಪೂರ್ವಭಾವಿ ಸಭೆಗಳನ್ನು ಸಮಿತಿ ಸದಸ್ಯರು ಕೈಗೊಂಡು ಎಲ್ಲಾ ಸಿದ್ದತೆಗಳನ್ನು ಮಾಡಲಿದ್ದಾರೆ. ಯಾವುದೇ ಲೋಪಗಳಿಗೆ ಅವಕಾಶವಾಗದಂತೆ ಇಬ್ಬರು ಮಹನೀಯರ ಜಯಂತಿ ಕಾರ್ಯಕ್ರಮ ಏರ್ಪಾಡು ಮಾಡಲಾಗುವುದು, ಎಲ್ಲಾ ಅಧಿಕಾರಿ ಸಿಬ್ಬಂದಿಗೆ ಕಾರ್ಯಕ್ರಮದಂದು ಹಾಜರಿರಲು ಸೂಚಿಸಲಾಗುವುದು. ತಾಲ್ಲೂಕು ಮಟ್ಟದಲ್ಲಿಯೂ ಅಚ್ಚುಕಟ್ಟಾಗಿ ಕಾರ್ಯಕ್ರಮ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮುಂಗಾರಿನ ಮೊದಲ ಉಳುಮೆ ‘ ಹೊನ್ನಾರು ‘

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿ ಟಿ ಕವಿತಾ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮುನಿರಾಜು, ಮುಖಂಡರಾದ ಸಿ ಎಂ ಕೃಷ್ಣಮೂರ್ತಿ, ಕೆ ಎಂ ನಾಗರಾಜು, ಶಿವಮೂರ್ತಿ, ನಾಗರಾಜು, ನಾಗಯ್ಯ, ಯರಿಯೂರು ರಾಜಣ್ಣ, ಚಾ ಗು ನಾಗರಾಜು, ಜವರಯ್ಯ, ರಾಮಸಮುದ್ರ ಸುರೇಶ್, ಸಿ ಎಂ ಶಿವಣ್ಣ, ಪಿ ಸಂಘಸೇನ, ಬಸವನಪುರ ರಾಜಶೇಖರ್, ಬ್ಯಾಡಮೂಡ್ಲು ಬಸವಣ್ಣ, ನಾರಾಯಣ್, ಕಂದಹಳ್ಳಿ ನಾರಾಯಣ, ನಾಗೇಶ್, ಆರೂರು ನಾಗೇಂದ್ರ, ಶಿವಕುಮಾರ್, ಮುರುಗೇಶ್, ಪರಶಿವಮೂರ್ತಿ, ಸಿದ್ದಪ್ಪಾಜಿ, ಡಿ ಸ್ವಾಮಿ, ಸಿ ಎಂ ನರಸಿಂಹಮೂರ್ತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X