ಚಾಮರಾಜನಗರ | ಮಾನವ-ಪ್ರಾಣಿ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮ : ಈಶ್ವರ ಖಂಡ್ರೆ

Date:

ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆ.ಡಿ.ಪಿ ಸಭಾಂಗಣದಲ್ಲಿ ನಡೆದ ಜಂಟಿ ಸಭೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ಈಶ್ವರ್ ಖಂಡ್ರೆ ಮಾತನಾಡಿ, ಮಾನವ-ಪ್ರಾಣಿ ಸಂಘರ್ಷ ತಡೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗುವುದು ಎಂದರು.

- Advertisement -

“ಚಾಮರಾಜನಗರ ಮತ್ತು ಮೈಸೂರು ಸಮೃದ್ಧವಾದ ಅರಣ್ಯ, ಪ್ರಾಣಿ ಸಂಪತ್ತನ್ನು ಹೊಂದಿರುವ ಜಿಲ್ಲೆಗಳಾಗಿದ್ದು, ಇತ್ತೀಚೆಗೆ ಈ ಭಾಗದಲ್ಲಿ ಮಾನವ-ಪ್ರಾಣಿ ಸಂಘರ್ಷ ಹೆಚ್ಚಾಗಿರುವುದು ಕಂಡುಬಂದಿದೆ. ಪ್ರಸ್ತುತ ಹುಲಿದಾಳಿಗೆ 3 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರತಿ ಜೀವವು ಅಮೂಲ್ಯವಾಗಿದ್ದು, ಜೀವಕ್ಕೆ ಬೆಲೆ ಕಟ್ಟಲಾಗದು. ಮಾನವ-ಪ್ರಾಣಿ ಸಂಘರ್ಷ ತಡೆಯಲು ಸಾರ್ವಜನಿಕರ ಸಹಕಾರವು ಅವಶ್ಯವಾಗಿದೆ. ಸಂಘರ್ಷವನ್ನು ನಿಯಂತ್ರಣಕ್ಕೆ ನೀಡಿರುವ ಸಲಹೆಗಳನ್ನು ಕ್ರೋಢಿಕರಿಸಿ ಪರಿಣಾಮಕಾರಿ ಹಾಗೂ ಪ್ರಾಮಾಣಿಕವಾಗಿ ಎಲ್ಲಾ ಕ್ರಮ ತೆಗೆದುಕೊಳ್ಳಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

“ಸಾಮಾನ್ಯವಾಗಿ ಮಾನವ-ಪ್ರಾಣಿ ಸಂಘರ್ಷ ಎಲ್ಲೆಡೆಯೂ ಇದೆ. ಈ ಸಾಲಿನಲ್ಲಿ ಆನೆ, ಹುಲಿ, ಚಿರತೆ ಸೇರಿದಂತೆ ಇತರೆ ಪ್ರಾಣಿಗಳಿಂದ 30 ಜನರ ಪ್ರಾಣ ಹಾನಿಯಾಗಿದೆ. ಇದನ್ನು ಶೂನ್ಯಕ್ಕೆ ತರಬೇಕಾಗಿರುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ. ಇದರ ಗಂಭೀರತೆಯನ್ನು ಮನಗಂಡು ತಳಮಟ್ಟದ ಸಮಸ್ಯೆಗಳನ್ನು ಅರಿಯಲು ಸ್ಥಳೀಯವಾಗಿ ಸಭೆ ಆಯೋಜಿಸಲಾಗಿದೆ. ಮಾನವ-ಪ್ರಾಣಿ ಸಂಘರ್ಷ ತಡೆಗಾಗಿ ಅರಣ್ಯ ಇಲಾಖೆಯಿಂದ 2-3 ತಜ್ಞರ ಸಮಿತಿಯನ್ನು ರಚಿಸಲಾಗಿದೆ. ಸಮಿತಿ ವರದಿಯನ್ನಾಧರಿಸಿ ಶಾಶ್ವತ ಪರಿಹಾರ ಕ್ರಮಗಳನ್ನು ವಹಿಸಲಾಗುತ್ತದೆ” ಎಂದು ತಿಳಿಸಿದರು.

ಬೆಳೆ ಹಾನಿಗೆ ಕಳೆದ ವರ್ಷ ₹46 ಕೋಟಿ ರೂಪಾಯಿ ಹಾಗೂ ಈ ಸಾಲಿನಲ್ಲಿ ಇದುವರೆಗೆ ₹36 ಕೋಟಿ ರೂಪಾಯಿ ವಿತರಿಸಲಾಗಿದೆ. ಜನ, ಜಾನುವಾರುಗಳ ಪ್ರಾಣ ಹಾನಿಗೆ ನಿಗದಿಯಾಗಿರುವ ಪರಿಹಾರನ್ನು ವೈಜ್ಞಾನಿಕವಾಗಿ ಹೆಚ್ಚಿಸಬೇಕೆಂಬ ಬೇಡಿಕೆ ಇದೆ. ಈ ಸಂಬಂಧ ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದು. ಬಂಡೀಪುರ ವ್ಯಾಪ್ತಿಯಲ್ಲಿ 1972ರಲ್ಲಿ 12 ಹುಲಿಗಳಿದ್ದು, ಈಗ 560ಕ್ಕೆ ಏರಿಕೆಯಾಗಿದೆ. ಪ್ರಾಣಿಗಳ ಸಂಖ್ಯೆಗೆ ಅನುಗುಣವಾಗಿ ಅರಣ್ಯ ವ್ಯಾಪ್ತಿಯು ವಿಸ್ತಾರವಾಗಬೇಕು. ಹುಲ್ಲುಗಾವಲು ಪ್ರದೇಶವು ದ್ವಿಗುಣವಾಗಬೇಕಿದೆ ಎಂದರು.

ಪ್ರಾಣಿ ದಾಳಿ ತಡೆಯಲು ಕಾರ್ಯಪಡೆಗೆ ತರಬೇತಿ ನೀಡಿ ಗಸ್ತು ಸಂಚಾರದ ಪರಿಮಿತಿಯನ್ನು ಹೆಚ್ಚಿಸಲು ಕಾರ್ಯಪಡೆಯಲ್ಲಿ ಕಾಡಿನ ಬಗ್ಗೆ ಸಂಪೂರ್ಣ ಜ್ಞಾನವಿರುವ ಅದಿವಾಸಿಗಳು, ಅರಣ್ಯದಂಚಿನ ಜನರನ್ನು ಸೇರಿಸಿಕೊಳ್ಳಲಾಗುವುದು. ಅತ್ಯಾಧುನಿಕ ತಂತ್ರಜ್ಞಾನ ಬಳಸಿ ಹುಲಿ, ಚಿರತೆಯಂತಹ ವನ್ಯಜೀವಿಗಳನ್ನು ಕಾಡಿಗೆ ಮರಳಿಸಲು ಸಮಗ್ರ ಕಮ್ಯಾಂಡೋ ಕೇಂದ್ರ ತೆರೆಯಲಾಗುವುದು. ಇಲಾಖೆಯ ಹಿರಿಯ ಅಧಿಕಾರಿಗಳು ಸಮಸ್ಯೆ ಇರುವ ಅರಣ್ಯಪ್ರದೇಶಕ್ಕೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಹೇಳಿದರು.

ಅರಣ್ಯ ಇಲಾಖೆಗೆ ಪಶುವೈದ್ಯಾಧಿಕಾರಿಗಳನ್ನು ನೇಮಿಸಿಕೊಳ್ಳುವ ಸಂಬಂಧ ಅನುಮೋದನೆಗಾಗಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಹುಲಿ. ಆನೆ ಸೆರೆ ಕಾರ್ಯಾಚರಣೆ ವೇಳೆ ಪ್ರಾಮಾಣಿಕ ಮಾನದಂಡ ಪಾಲನೆ ಮಾಡಬೇಕೆಂದು ನಿದೇಶನ ನೀಡಲಾಗಿದೆ. ಕಾರ್ಯಾಚರಣೆ ಸಿಬ್ಬಂದಿಗೆ ಸೂಕ್ತ ತರಬೇತಿ ಕೊಡಲಾಗುವುದು ಎಂದರು.

ಅರಣ್ಯ ಹಾಗೂ ಅರಣ್ಯಪ್ರದೇಶದ ಸುತ್ತಲಿನ ಸ್ಥಳಗಳಲ್ಲಿ ಯಾವುದೇ ಗಣಿಗಾರಿಕೆ ಹಾಗೂ ಅಕ್ರಮ ರೆಸಾರ್ಟ್‍ಗಳಿಗೆ ಸರ್ಕಾರದಿಂದ ಅನುಮತಿ ನೀಡಿಲ್ಲ. ಅಂತಹ ಪ್ರಕರಣಗಳಿದ್ದರೆ ಸೂಕ್ತ ತನಿಖೆ ನಡೆಸಿ ಕ್ರಮ ವಹಿಸಲಾಗುತ್ತದೆ. ಅರಣ್ಯದಲ್ಲಿರುವ ಆದಿವಾಸಿಗಳಿಗೆ ಕುಡಿಯುವ ನೀರು, ವಿದ್ಯುತ್ ವ್ಯವಸ್ಥೆಗೆ ಅಧಿಕಾರಿಗಳು ತೊಂದರೆ ನೀಡಬಾರದು ಎಂದು ತಿಳಿಸಿದರು.

ಪಶು ಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಮಾತನಾಡಿ, “ಜಿಲ್ಲೆಯ ಅರಣ್ಯ ಪ್ರದೇಶಗಳಿಗೆ ಮೂಲಸೌಲಭ್ಯಗಳನ್ನು ಒದಗಿಸುವ ಸಂಬಂಧ ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರು ಹಾಗೂ ವಿದ್ಯುತ್ ಸರಬರಾಜು ಕಾಮಗಾರಿಗಳಿಗೆ ಅರಣ್ಯ ಇಲಾಖೆ ಅಡ್ಡಿಪಡಿಸುತ್ತಿರುವುದು ಗಮನಕ್ಕೆ ಬಂದಿದೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಅರಣ್ಯ ಸಚಿವರು ಅಭಿವೃದ್ಧಿ ಕಾಮಗಾರಿಗಳಿಗೆ ತೊಂದರೆ ನೀಡದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಸಿ. ಮಹದೇವಪ್ಪ ಮಾತನಾಡಿ, ಮಾನವ-ಪ್ರಾಣಿ ಸಂಘರ್ಷ ತಡೆಯುವ ಸಂಬಂಧ ಸಭೆಯ ಗಂಭೀರತೆ ಸರ್ಕಾರಕ್ಕೆ ಮನವರಿಕೆಯಾಗಿದೆ. ಈ ಭಾಗದಲ್ಲಿ ಆಗಿದ್ದಾಂಗ್ಗೆ ಸಮಸ್ಯೆಗಳು ಸೃಷ್ಠಿಯಾಗುತ್ತಲೇ ಇವೆ. ಕಾಡುಪ್ರಾಣಿ ಹಾವಳಿ ತಡೆಯಲು ಎಲ್ಲರ ಸಹಕಾರವು ಅವಶ್ಯವಾಗಿದೆ. ವನ್ಯಜೀವಿಗಳಿಂದ ಎದುರಾಗುತ್ತಿರುವ ಸಮಸ್ಯೆಗಳ ಬಗೆಹರಿಸಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು.

ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಮಾತನಾಡಿ, ಅರಣ್ಯ ಭಾಗಗಳಿಗೆ ಹೊಂದಿಕೊಂಡಿರುವ ಹಾಗೂ ಅರಣ್ಯ ವಾಸಿಗಳಿಗೆ ಮೂಲಸೌಕರ್ಯಗಳಿಗೆ ಯಾವುದೇ ತೊಂದರೆಯಾಗಬಾರದು. ವಿದ್ಯುತ್, ಕುಡಿಯುವ ನೀರಿನಂತಹ ಅಗತ್ಯ ಸೌಲಭ್ಯಗಳಿಗೆ ಅನುಮತಿಯನ್ನು ತ್ವರಿತವಾಗಿ ನೀಡಿ ಅನುಕೂಲ ಕಲ್ಪಿಸಿಕೊಡಬೇಕು. ಇದಕ್ಕೆ ಯಾವುದೇ ವಿಳಂಬ ಧೋರಣೆ ಅನುಸರಿಸುವುದು ಬೇಡ ಎಂದು ಈಗಾಗಲೇ ತಿಳಿಸಲಾಗಿದೆ ಎಂದರು.

ಸಭೆಯ ಆರಂಭದಲ್ಲಿ ಸಚಿವರು ರೈತರಿಂದ ಸಮಸ್ಯೆಗಳನ್ನು ಆಲಿಸಿದರು. ಮಾನವ-ಪ್ರಾಣಿ ಸಂಘರ್ಷ ತಡೆಯಲು ಅರಣ್ಯ ಇಲಾಖೆ ಶಾಶ್ವತ ಕ್ರಮಗಳನ್ನು ಕೈಗೊಳ್ಳಬೇಕು. ಆಧುನಿಕ ತಂತಜ್ಞಾನವನ್ನು ಅಳವಡಿಸಿಕೊಂಡು ಕಾಡುಪ್ರಾಣಿಗಳ ಹಾವಳಿ ತಡೆಯಬೇಕು. ರೈತರಿಗೆ ಕೃಷಿ ಚಟುವಟಿಕೆಗೆ ತೊಂದರೆಯಾಗಿದೆ. ಬೆಳೆನಷ್ಟ ಹಾಗೂ ಜೀವಹಾನಿಗೆ ನೀಡುವ ಪರಿಹಾರ ಶೀಘ್ರವಾಗಿ ನೀಡಬೇಕು ಹಾಗೂ ವೈಜ್ಞಾನಿಕವಾಗಿರಬೇಕು. ಅಕ್ರಮ ರೆಸಾರ್ಟ್ ಹಾಗೂ ಗಣಿಗಾರಿಕೆಗೆ ಅನುಮತಿ ನೀಡಬಾರದು. ಅರಣ್ಯಪ್ರದೇಶದಲ್ಲಿ ಹುಲ್ಲುಗಾಲು ಹೆಚ್ಚಿಸಬೇಕು ಎಂಬುದು ಸೇರಿದಂತೆ ಸಾಕಷ್ಟು ವಿಷಯಗಳನ್ನು ರೈತರು ಸಭೆಯ ಗಮನಕ್ಕೆ ತಂದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಹೊಲಯ ಸಮುದಾಯದ ವಿಶಿಷ್ಟ ಸಾಂಸ್ಕೃತಿಕ ಆಚರಣೆ ʼಬಲಿ ಚಕ್ರವರ್ತಿ ಚಟ್ಟʼದ ರಹಸ್ಯ ಗೊತ್ತೇ?

ಎಂ.ಎಸ್.ಐ.ಎಲ್ ಅಧ್ಯಕ್ಷ ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಎಚ್.ಎಂ. ಗಣೇಶ್ ಪ್ರಸಾದ್, ಎಂ.ಆರ್. ಮಂಜುನಾಥ್, ದರ್ಶನ್ ಧ್ರುವನಾರಾಯಣ, ಅನಿಲ್ ಚಿಕ್ಕಮಾದು, ವಿಧಾನ ಪರಿಷತ್ ಸದಸ್ಯರಾದ ಸಿ.ಎನ್. ಮಂಜೇಗೌಡ, ಕೆ. ಶಿವಕುಮಾರ್, ಚುಡಾ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ನಗರಸಭೆ ಅಧ್ಯಕ್ಷ ಎಸ್. ಸುರೇಶ್, ಪಶ್ಚಿಮ ಘಟ್ಟಗಳ ಕಾರ್ಯಪಡೆ ಅಧ್ಯಕ್ಷ ತಬ್ರೇಜ್ ಆಲಂ ಷರೀಫ್, ಅರಣ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮನೋಜ್‍ಕುಮಾರ್, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸ್ಮಿತಾ ಬಿಜ್ಜೂರ್, ಪ್ರಭಾಸ್‍ಚಂದ್ರ ರೇ, ಬಿ.ಪಿ. ರವಿ, ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಅರಣ್ಯ ಪಡೆ ಮುಖ್ಯಸ್ಥೆ ಮೀನಾಕ್ಷಿ ನೇಗಿ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಮೈಸೂರು ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತರೆಡ್ಡಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಮೈಸೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯುಕೇಶ್‍ಕುಮಾರ್, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ರೈತ ಮುಖಂಡರಾದ ಬಡಗಲಪುರ ನಾಗೇಂದ್ರ, ಮಹೇಶ್ ಪ್ರಭು, ಹೊನ್ನೂರು ಪ್ರಕಾಶ್, ಹಳ್ಳಿಕೆರೆಹುಂಡಿ ಭಾಗ್ಯರಾಜ್, ಅಣಗಳ್ಳಿ ಬಸವರಾಜು, ಹೊಸಕೋಟೆ ಬಸವರಾಜು, ದಸಂಸ ಹಿರಿಯ ಮುಖಂಡ ಬೆಟ್ಟಯ್ಯಕೋಟೆ, ಹೊನ್ನೂರು ಬಸವಣ್ಣ, ಹೆಗ್ಗವಾಡಿಪುರ ಮಹೇಶ್, ಆರ್. ಮಹದೇವ್, ವೆಂಕಟರಮಣಸ್ವಾಮಿ ಪಾಪು, ರಾಜೇಂದ್ರ ರಾಮಾಪುರ ಸೇರಿದಂತೆ ಇನ್ನಿತರರು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ಮತದಾರರ ಹೆಸರು ತೆಗೆದುಹಾಕಲು ಸಂಚು: ಕಾರ್ಪೊರೇಟರ್, ಪಾಲಿಕೆ ಅಧಿಕಾರಿಗಳ ವಿರುದ್ಧ FIR

ಬಳ್ಳಾರಿ ನಗರ ಕ್ಷೇತ್ರದ ಮತದಾರರ ಪಟ್ಟಿಯಿಂದ ಮತದಾರರ ಹೆಸರುಗಳನ್ನು ತೆಗೆದು ಹಾಕಲು...

ಕಲಬುರಗಿ | ಗಾಂಧೀಜಿ ಆದರ್ಶಗಳು ಯುವಕರಿಗೆ ದಾರಿದೀಪ: ಪವನಕುಮಾರ ವಳಕೇರಿ

ಬ್ರಿಟಿಷರ ವಿರುದ್ಧ ಶಾಂತಿ, ಅಹಿಂಸೆ ಹಾಗೂ ತಾಳ್ಮೆಯ ಮಾರ್ಗದಲ್ಲಿ ಹೋರಾಡಿ ದೇಶಕ್ಕೆ...

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...