ಚಾಮರಾಜನಗರ | ಗೌರವಯುತವಾಗಿ ಬದುಕುವ ಹಕ್ಕು ಎಲ್ಲರಿಗಿದೆ: ನ್ಯಾ. ಈಶ್ವರ

Date:

Advertisements

ಸಮಾಜದಲ್ಲಿ ಗೌರವಯುತವಾಗಿ ಬದುಕುವ ಹಕ್ಕು ಪ್ರತಿಯೊಬ್ಬರಿಗೂ ಇದೆ ಎಂದು ಸಿವಿಲ್‌ ನ್ಯಾಯಾಧೀಶ ಈಶ್ವರ ಹೇಳಿದರು.

ಚಾಮರಾಜನಗರದ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ಜೀತಪದ್ದತಿ ನಿರ್ಮೂಲನಾ ದಿನಾಚರಣೆ ಅಂಗವಾಗಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿಗೆ ಏರ್ಪಡಿಸಲಾಗಿದ್ದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ನೀಡಿರುವ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಬೇಕು.
ಬಡತನವನ್ನೇ ಬಂಡವಾಳವಾಗಿಸಿಕೊಂಡು ಬಡವರನ್ನು ಜೀವನಪೂರ್ತಿ ದುಡಿಸಿಕೊಳ್ಳಬಾರದು. ಅದು ವ್ಯಕ್ತಿಯ ಮೂಲಭೂತ ಹಕ್ಕುಗಳ ನೇರ ಉಲ್ಲಂಘನೆಯಾಗಲಿದೆ” ಎಂದರು.

ಜೀತಪದ್ದತಿ ನಿರ್ಮೂಲನಾ ಕಾಯ್ದೆಯನ್ನು ಸರ್ಕಾರ 1976ರಲ್ಲಿ ಜಾರಿಗೊಳಿಸಿದೆ. ದೇಶದ ಪ್ರತಿಯೊಬ್ಬರೂ ಗೌರವದಿಂದ ಬದುಕಲು ಡಾ ಬಿ ಆರ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸಮಾನತೆ ಕುರಿತ ಹಲವಾರು ಅನುಚ್ಛೇದಗಳನ್ನು ಅಡಕಗೊಳಿಸಿದ್ದಾರೆ. ಎಲ್ಲಿಯೇ ಆಗಲಿ ಜೀತಪದ್ದತಿ ಕಂಡುಬಂದರೆ ಅಂತಹವರನ್ನು ಗುರುತಿಸಿ ಅವರಿಗೆ ಪುನರ್ವಸತಿ ಕಲ್ಪಿಸುವ ಕೆಲಸವಾಗಬೇಕು ಎಂದರು.

Advertisements

ಜೀತಪದ್ದತಿ ನಿರ್ಮೂಲನೆಯ ಅರಿವು ಮೂಡಿಸುವ ಧ್ಯೇಯ ವಾಕ್ಯಗಳನ್ನು ಮರದ ಪ್ರತಿಕೃತಿಗೆ ಅಳವಡಿಸಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್, “ಕನಿಷ್ಠ ಬಡವರು, ಸಮಾಜದ ಕಟ್ಟ ಕಡೆಯ ವ್ಯಕ್ತಿಗಳು ಜೀತ ಪದ್ದತಿಗೆ ಸಿಲುಕಿರುವುದನ್ನು ನೋಡಿದ್ದೇವೆ. ಕನಿಷ್ಠ ವೇತನ ನೀಡದೇ ಒತ್ತಾಯಪೂರ್ವಕವಾಗಿ ದುಡಿಸಿಕೊಳ್ಳವುದು ತಪ್ಪಾಗಲಿದೆ. ಜೀತಪದ್ದತಿಯನ್ನು ತೊಲಗಿಸಲು ಜೀತ ವ್ಯಕ್ತಿಗಳನ್ನು ಗುರುತಿಸಿ, ಪರಿಹಾರ ನೀಡಿ ಸಂಪೂರ್ಣವಾಗಿ ಅವಶ್ಯ ಪುನರ್ವಸತಿ ಕಲ್ಪಿಸುವುದು ಜಿಲ್ಲಾಮಟ್ಟದ ಅಧಿಕಾರಿಗಳ ಜವಾಬ್ದಾರಿಯೂ ಆಗಿದೆ” ಎಂದು ತಿಳಿಸಿದರು.

“ಜಿಲ್ಲೆಯಲ್ಲಿ 2015-16, 2017ರಲ್ಲಿ ಜೀತಪದ್ದತಿ ಸಮೀಕ್ಷೆ ನಡೆಸಿ 45-52 ಜನರನ್ನು ಗುರುತಿಸಲಾಗಿತ್ತು. ಜೀತದಾಳುಗಳ ಪುನರ್ವಸತಿ ಕಾರ್ಯ ಸದ್ಯದಲ್ಲಿಯೇ ಪೂರ್ಣಗೊಳ್ಳಲಿದೆ. ಸರ್ಕಾರದ ನೀತಿ, ನಿಯಮಗಳನ್ವಯ ಅವರಿಗೆ ಸಹಾಯಹಸ್ತ ಚಾಚಬೇಕಿದೆ. ಅದು ನಮ್ಮೆಲ್ಲರ ಕರ್ತವ್ಯವೂ ಆಗಿದೆ. ಜೀತಪದ್ದತಿ ನಿರ್ಮೂಲನೆಯನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದೆ. ಚಾಮರಾಜನಗರವನ್ನು ಜೀತ ಮುಕ್ತ ಜಿಲ್ಲೆಯನ್ನಾಗಿಸಲು ಎಲ್ಲರೂ ಪಣ ತೊಡೋಣ” ಎಂದು ಕರೆ ನೀಡಿದರು.

ಜೀತಪದ್ದತಿ ನಿರ್ಮೂಲನೆಯ ಪ್ರತಿಜ್ಞಾವಿಧಿ ಬೋಧಿಸಿ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿ ಟಿ ಕವಿತ, “ಜೀತ ಸಾಮಾಜಿಕ ಅನಿಷ್ಠ ಪದ್ದತಿ. ಯಾವುದೋ ಕಾರಣಕ್ಕಾಗಿ ವ್ಯಕ್ತಿಯ ಹಕ್ಕುಗಳನ್ನು, ವೈಯಕ್ತಿಕ ಬದುಕನ್ನು ಬಲವಂತವಾಗಿ ಕಸಿಯುವುದೇ ಜೀತಪದ್ದತಿ. ಜೀತ ನಿರ್ಮೂಲನೆಯ ಬಗ್ಗೆ ಜಾಗೃತಿ ಮೂಡಿಸಿ ನಾಗರಿಕ ಸಮಾಜದಿಂದ ಜೀತಪದ್ದತಿಯನ್ನು ಸಂಪೂರ್ಣವಾಗಿ ತೊಲಗಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಮಾತನಾಡಿ, “ಜೀತಪದ್ದತಿ ನಿರ್ಮೂಲನೆ ಕಾರ್ಯದಲ್ಲಿ ಎಲ್ಲಾ ಇಲಾಖೆ ಅಧಿಕಾರಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಮುಖ್ಯವಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜೀತಪದ್ದತಿಯನ್ನು ಗುರುತಿಸಿ ಜೀತ ವಿಮುಕ್ತರಿಗೆ ಪರಿಹಾರ, ಪುನರ್ವಸತಿ ಕಲ್ಪಿಸಲು ಅಧಿಕಾರಿಗಳ ತಂಡ ಮುಂದಾಗಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಕೇಂದ್ರ, ರಾಜ್ಯ ಸರ್ಕಾರಗಳ ರೈತ ವಿರೋಧಿ ನೀತಿ ವಿರುದ್ಧ ರಾಜ್ಯ ರೈತ ಸಂಘ ಗುಡುಗು

ಕಾರ್ಯಕ್ರಮದಲ್ಲಿ ವಕೀಲೆ ರೂಪಶ್ರೀ, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪಿ ಲಕ್ಷ್ಮಿ, ಜೀತ ವಿಮುಕ್ತ ಸಂಘಟನೆಯ ಆರ್ ಎಫ್ ಓ, ಜಿಲ್ಲಾ ಸಂಚಾಲಕ ಜಿ ಕೆ ಕುನ್ನ ಹೊಳಿಯಯ್ಯ ಸೇರಿದಂತೆ ಹಲವರು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X