ಚಾಮರಾಜನಗರ | ಪೂರ್ವ ಮುಂಗಾರು ಮಳೆಗೆ ಮನೆ ಕುಸಿತ; ತಂದೆ ಮಕ್ಕಳು ಅಪಾಯದಿಂದ ಪಾರು

Date:

  • ಮನೆ ಗೋಡೆ ಕುಸಿದ ಪರಿಣಾಮ ಎರಡು ಬೈಕ್‌ಗಳು ಜಖಂ
  • ಮಳೆ ಸುರಿದಿದ್ದರಿಂದ ರೈತರಲ್ಲಿ ಸಂತಸ ಮೂಡಿದೆ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಮತ್ತು ಯಳಂದೂರು ತಾಲೂಕು ವ್ಯಾಪ್ತಿಯಲ್ಲಿ ಮುಂಗಾರು ಪೂರ್ವ ಮಳೆ ಧಾರಾಕಾರವಾಗಿ ಸುರಿದಿದೆ. ಯಳಂದೂರು ತಾಲೂಕಿನ ಕೋಮಾರನಪುರದಲ್ಲಿ ಮನೆಯೊಂದು ಕುಸಿದು‌ ಬಿದ್ದಿದ್ದು, ತಂದೆ, ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

“ಸೋಮವಾರ ತಡರಾತ್ರಿ ಬಿರುಸಿನ ಮಳೆ ಸುರಿದಿದೆ. ಮನೆಯ ಒಳಗಡೆ ನೀರು ಸೋರಲು ಆರಂಭವಾಯಿತು. ಮಗ ಪ್ರಜ್ವಲ್‌ನನ್ನು ಕರೆದುಕೊಂಡು ಮನೆಯಿಂದ ಹೊರ ಬರುತ್ತಿದ್ದಂತೆ ಮನೆ ಸಂಪೂರ್ಣವಾಗಿ ಕುಸಿದು ಬಿದ್ದಿತು” ಎಂದು ಕುಮಾರನಪುರದ ಲಿಂಗಾಯತರ ಬಡಾವಣೆಯ ಪುಟ್ಟಸ್ವಾಮಿ ಹೇಳಿದ್ದಾರೆ.

ಕೊಳ್ಳೇಗಾಲದ ಮುಡಿಗುಂಡ ಬಡಾವಣೆಯ ಮಹದೇವಮ್ಮ ಎಂಬುವರ ಮನೆ ಗೋಡೆ ಕುಸಿದಿದ್ದು, ಎರಡು ಬೈಕ್‌ಗಳು ಜಖಂ ಆಗಿವೆ. ಮಹದೇವಮ್ಮನ ಮನೆಯಲ್ಲಿದ್ದ ಒಂಬತ್ತು ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಯಳಂದೂರು‌ ತಾಲೂಕು ವ್ಯಾಪ್ತಿಯಲ್ಲಿ ರಾತ್ರಿ 11 ಗಂಟೆಯ ‌ನಂತರ ಧಾರಾಕಾರ ಮಳೆ ಸುರಿದಿದ್ದು, 7.15 ಸೆಂ.ಮೀ ಮಳೆಯಾಗಿದೆ. ಕೊಳ್ಳೇಗಾಲ ತಾಲೂಕಿನ ಕುಣಗಳ್ಳಿಯಲ್ಲಿ 6.45 ಸೆಂ.ಮೀ ಮಳೆ ಬಿದ್ದಿದೆ.

ಕೊಳ್ಳೇಗಾಲ ತಾಲೂಕಿನ ಸತ್ತೇಗಾಲ, ಜಕ್ಕಳ್ಳಿ, ಜಾಗೇರಿ, ಧನಗೆರೆ, ಸರಗೂರು, ನರಿಪುರ, ಗುಂಡೇಗಾಲ, ಪಾಳ್ಯ, ಕುಣಗಳ್ಳಿ, ಕುಂತೂರು, ಕೆಂಪನಪಾಳ್ಯ, ತಿಮ್ಮರಾಜಿಪುರ, ಮಧುವನಹಳ್ಳಿ,‌ ದೊಡ್ಡಿಂದುವಾಡಿ ಸೇರಿದಂತೆ ಅನೇಕ ಕಡೆ ಉತ್ತಮ ಮಳೆಯಾಗಿದೆ.

ಬಿಳಿಗಿರಿರಂಗನ ಬೆಟ್ಟದ ಸುತ್ತಮುತ್ತ ಮೂರು ತಾಸು ಮಳೆ ಸುರಿದಿದೆ. ಇದರಿಂದ ಕಾಫಿ ಬೆಳಗಾರರಲ್ಲಿ ಹರ್ಷ ಮೂಡಿಸಿದೆ.

ವಾರದಿಂದ ಅಲ್ಲಲ್ಲಿ ತುಂತುರು ಮಳೆಯಾಗುತ್ತಿತ್ತು. ಬಿತ್ತನೆ ಮಾಡಲು ರೈತರು ಸಿದ್ಧತೆಯಲ್ಲಿ ತೊಡಗಿದ್ದರು. ರಾತ್ರಿ ಸುರಿದ ಮಳೆಯಿಂದ ರೈತರಲ್ಲಿ ಸಂತಸ ಮೂಡಿದೆ. ದ್ವಿದಳ ದಾನ್ಯಗಳ ಬಿತ್ತನೆಗೆ ರೈತರು ಮುಂದಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ | ಚನ್ನಕೇಶವಸ್ವಾಮಿ ರಥೋತ್ಸವ: ವಿರೋಧದ ನಡುವೆಯೂ ಸೌಹಾರ್ದತೆ ಮೆರೆದ ಬೇಲೂರು

“ರಾತ್ರಿ 11ರಿಂದ ಬೆಳಗಿನ ಜಾವ ಎರಡು ಗಂಟೆಯ ತನಕ ಭರ್ಜರಿ ಮಳೆಯಾಯಿತು. ಕಾಡಂಚಿನ ಗ್ರಾಮಗಳ ರಸ್ತೆ ಸುತ್ತಮುತ್ತ ನೀರು ಹರಿದಿದ್ದು, ವಾತಾವರಣದಲ್ಲಿ ತಂಪು ತುಂಬಿದೆ” ಎಂದು ರೈತ ಶಿವರಾಜು ಸಂತಸ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಕರ್ನಾಟಕ’ ನಾಮಕರಣಕ್ಕೆ 50ರ ಸಂಭ್ರಮ | ವರ್ಷವಿಡಿ ವಿಶೇಷ ಕಾರ್ಯಕ್ರಮ: ಸಚಿವ ಶಿವರಾಜ್ ತಂಗಡಗಿ

'ರಾಜ್ಯ 'ಕರ್ನಾಟಕ' ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿದೆ' ವರ್ಷವಿಡಿ ಕಾರ್ಯಕ್ರಮ ಆಯೋಜಿಸಲು...

ಚಿತ್ರದುರ್ಗ | ಮನೆ ಬಾಗಿಲಿಗೆ ಇ-ಸ್ವತ್ತು ‘ಜನಸ್ನೇಹಿ ಕಾರ್ಯಕ್ರಮ’ಕ್ಕೆ ಮತ್ತೆ ಚಾಲನೆ ನೀಡಿದ ಸಿಇಒ ದಿವಾಕರ್

ಗ್ರಾಮ ಪಂಚಾಯತಿ ವ್ಯಾಪ್ತಿಯ ದಾಖಲೆಗಳನ್ನು ಸರ್ಕಾರವು ಡಿಜಿಟಲೀಕರಣಗೊಳಿಸಿದ್ದು, ಮನೆಯ ಖಾಯಂ ಹಕ್ಕು...

ಶಾಸಕ ಪ್ರದೀಪ್ ಈಶ್ವರ್ ಸಹಾಯ ಅರಸಿ ಬಂದ ವೃದ್ಧೆ; ಬರಿಗೈನಲ್ಲೇ ವಾಪಸ್

ಸದ್ಯ ರಾಜ್ಯ ರಾಜಕಾರಣದಲ್ಲಿ ತೆಲುಗು-ಕನ್ನಡ ಮಿಶ್ರಿತ ಡೈಲಾಗ್‌ಗಳಿಂದ ಅಬ್ಬರಿಸಿ ಬೊಬ್ಬಿರಿಯುತ್ತಿರುವವರು ಶಾಸಕ...

ಭ್ರಷ್ಟ ಪಿಡಿಒಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪಿಡಿಒಗಳ ಮೇಲಿನ ತನಿಖೆಯನ್ನು ಚುರುಕುಗೊಳಿಸಿ ಅಂತಹವರ ವಿರುದ್ಧ...