ಚಾಮರಾಜನಗರ | ಮಲೆ ಮಹದೇಶ್ವರ ಬೆಟ್ಟ ಜಾತ್ರಾ ಮಹೋತ್ಸವ; ಸಕಲ ಸಿದ್ಧತೆಗೆ ಡಿಸಿ ಸೂಚನೆ

Date:

Advertisements

ಚಾಮರಾಜನಗರ ಜಿಲ್ಲೆಯ ಪ್ರಸಿದ್ದ ಯಾತ್ರಾ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಮಹಾ ಶಿವರಾತ್ರಿ ಹಾಗೂ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಆಗಮಿಸುವ ಭಕ್ತಾಧಿಗಳ ಸೌಲಭ್ಯಕ್ಕೆ ಅಗತ್ಯ ಸಿದ್ದತೆಯನ್ನು ಸಮರ್ಪಕವಾಗಿ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಮಹಾ ಶಿವರಾತ್ರಿ ಹಾಗೂ ಯುಗಾದಿ ಜಾತ್ರಾ ಮಹೋತ್ಸವ ಸಂಬಂಧ ನಡೆದ ಪೂರ್ವಸಿದ್ದತಾ ಸಭೆಯಲ್ಲಿ ಮಾತನಾಡಿದ ಅವರು, “ಮಲೆ ಮಹದೇಶ್ವರ ಕ್ಷೇತ್ರಕ್ಕೆ ನಾಡಿನ ನಾನಾ ಭಾಗಗಳಲ್ಲದೇ ಹೊರ ರಾಜ್ಯಗಳಿಂದಲೂ ಲಕ್ಷಾಂತರ ಮಂದಿ ಆಗಮಿಸಲಿದ್ದಾರೆ. ಭಕ್ತರಿಗೆ ಕುಡಿಯುವ ನೀರು, ನೆರಳಿನ ವ್ಯವಸ್ಥೆ, ವಾಸ್ತವ್ಯ, ದಾಸೋಹ, ದೇವರ ದರ್ಶನಕ್ಕೆ ಅಗತ್ಯ ಸೌಕರ್ಯಗಳನ್ನು ಯಾವುದೇ ತೊಂದರೆಯಿಲ್ಲದೆ ಕಲ್ಪಿಸಬೇಕು. ಕ್ಷೇತ್ರದಲ್ಲಿ ಶುದ್ದ ಕುಡಿಯುವ ನೀರಿನ ಘಟಕಗಳಿವೆ. ಹೆಚ್ಚು ಸಂಖ್ಯೆಯಲ್ಲಿ ಭಕ್ತಾಧಿಗಳು ಬರಲಿರುವುದರಿಂದ ಕುಡಿಯುವ ನೀರಿನ ಮಾದರಿಗಳನ್ನು ಪರೀಕ್ಷಿಸಬೇಕು. ಪಾದಯಾತ್ರೆಯಲ್ಲಿ ಸಹ ಸಾಕಷ್ಟು ಮಂದಿ ಕ್ಷೇತ್ರಕ್ಕೆ ಆಗಮಿಸುವುದರಿಂದ ಮಾರ್ಗ ಮಧ್ಯೆ ಕುಡಿಯುವ ನೀರಿನ ವ್ಯವಸ್ಥೆ ಇರಬೇಕು. ಮಹದೇಶ್ವರ ಬೆಟ್ಟದಲ್ಲಿ ಪ್ಲಾಸ್ಟಿಕ್ ನಿಷೇಧ ಇದ್ದು, ಪ್ಲಾಸ್ಟಿಕ್ ಬಾಟಲ್, ಪ್ಲಾಸ್ಟಿಕ್ ವಸ್ತು ಇತರೆ ತ್ಯಾಜ್ಯಗಳನ್ನು ಕೊಂಡೊಯ್ಯದಂತೆ ಸಾರ್ವಜನಿಕರಿಗೆ ಮನವರಿಕೆ ಮಾಡಬೇಕು” ಎಂದು ನಿರ್ದೇಶಿಸಿದರು.

“ಕ್ಷೇತ್ರದಲ್ಲಿ ನೈರ್ಮಲ್ಯಕ್ಕೆ ಹೆಚ್ಚು ಒತ್ತು ನೀಡಿ ಸಮರ್ಪಕವಾಗಿ ಶೌಚಾಲಯ, ಸ್ನಾನದ ವ್ಯವಸ್ಥೆ ಕಲ್ಪಿಸಬೇಕು. ಆರೋಗ್ಯ ಇಲಾಖೆಯಿಂದ ಹೆಚ್ಚುವರಿ ವೈದ್ಯರು, ಸಿಬ್ಬಂದಿ ನಿಯೋಜಿಸಿ ಅಗತ್ಯ ಔಷಧಗಳನ್ನು ದಾಸ್ತಾನು ಮಾಡಿಕೊಳ್ಳಬೇಕು. ಪಾದಯಾತ್ರಿಗಳು ಬರುವ ಹಿನ್ನೆಲೆ ಕೌದಳ್ಳಿ ಆರೋಗ್ಯ ಕೇಂದ್ರದಲ್ಲಿಯೂ ಪೂರ್ಣ ಅವಧಿಯಲ್ಲಿ ವೈದ್ಯಕೀಯ ಸೇವೆ ಲಭ್ಯವಾಗಬೇಕು. ಪಾದಯಾತ್ರೆಯಲ್ಲಿ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ನೇರವಾಗಿ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಬೇಕು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ತಮಿಳುನಾಡು ರಾಜ್ಯದ ಭಾಗಗಳಿಂದಲೂ ಸರ್ಕಾರಿ ಬಸ್ಸುಗಳು ಹೆಚ್ಚು ನಿಯೋಜನೆಯಾಗಲಿವೆ. ನಿಗಮದ ಅಧಿಕಾರಿಗಳನ್ನು ಕ್ಷೇತ್ರಕ್ಕೆ ನಿಯೋಜಿಸಿ ಜನರ ಅಗತ್ಯಕ್ಕೆ ತಕ್ಕಂತೆ ಬಸ್ಸುಗಳನ್ನು ಮುಂಚಿತವಾಗಿಯೇ ವ್ಯವಸ್ಥೆ ಮಾಡಲಾಗುವುದು. ಎಲ್ಲಿಯೇ ಆಗಲಿ ಬಸ್ಸುಗಳಿಗೆ ಯಾವುದೇ ಕೊರತೆಯಾಗದಿರಲಿ” ಎಂದು ತಿಳಿಸಿದರು.

Advertisements

ಶಾಸಕ ಎಂ ಆರ್ ಮಂಜುನಾಥ್‌ ಮಾತನಾಡಿ, “ಕ್ಷೇತ್ರದಲ್ಲಿ ಭಕ್ತರು, ಗಣ್ಯರು ಸೇರಿದಂತೆ ಪ್ರತಿಯೊಬ್ಬರಿಗೂ ಮಾಹಿತಿ ನೀಡುವ ಕಾರ್ಯ ಸಮರ್ಪಕವಾಗಿ ನಡೆಯಬೇಕು. ದೇವಾಲಯದಲ್ಲಿ ನಡೆಯುವ ವಿಶೇಷ ಪೂಜೆ ಇನ್ನಿತರ ಕೈಂಕರ್ಯಗಳ ಬಗ್ಗೆ ಎಲ್ಇಡಿ ಮೂಲಕ ವೀಕ್ಷಣೆಗೆ ಅವಕಾಶ ಕಲ್ಪಿಸಲು ಕ್ರಮವಹಿಸಬೇಕು. ನಿಗದಿಪಡಿಸಿದ ಸ್ಥಳಗಳಲ್ಲಿ ವಾಹನ ನಿಲುಗಡೆಯಾಗಬೇಕು. ಸುಸೂತ್ರವಾಗಿ ಜಾತ್ರೆ ನಡೆಯಲು ಪೂರಕವಾಗಿರುವ ಎಲ್ಲ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಬೇಕು” ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಮಾತನಾಡಿ, “ಕುಡಿಯುವ ನೀರಿನ ವ್ಯವಸ್ಥೆಗಳನ್ನು ಪರಿಶೀಲಿಸಲಾಗುವುದು. ಶುದ್ದ ಕುಡಿಯುವ ನೀರು ಸಂಗ್ರಹಣೆ ಪೂರೈಕೆ ಬಗ್ಗೆ ಖಾತರಿ ಪಡಿಸಿಕೊಳ್ಳಲಾಗುವುದು. ಗ್ರಾಮ ಪಂಚಾಯಿತಿ ವತಿಯಿಂದ ಜಾತ್ರಾ ದಿನಗಳಲ್ಲಿ ಹೆಚ್ಚಿನ ಸಿಬ್ಬಂದಿ ನಿಯೋಜಿಸಲಾಗುವುದು” ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿ ಟಿ ಕವಿತಾ ಅವರು ಮಾತನಾಡಿ, “ಶಿವರಾತ್ರಿ ಜಾತ್ರೆಗೆ ಅಗತ್ಯ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದೆ. ಇಬ್ಬರು ಡಿವೈಎಸ್‍ಪಿ, 9 ಇನ್ಸ್ಪೆಕ್ಟರ್, 32 ಸಬ್‍ ಇನ್ಸ್ಪೆಕ್ಟರ್, 67 ಸಹಾಯಕ ಸಬ್‍ ಇನ್ಸ್ಪೆಕ್ಟರ್, 421 ಕಾನ್ಸ್ಟೇಬಲ್, 98 ಮಹಿಳಾ ಪೊಲೀಸರು, 401 ಗೃಹ ರಕ್ಷಕ ದಳ ಸಿಬ್ಬಂದಿ, ಡಿ ಆರ್ 4 ತುಕಡಿ, ಕೆಎಸ್‍ಆರ್‌ಪಿ 1 ತುಕಡಿಯನ್ನು ನಿಯೋಜಿಸಲಾಗಿದೆ” ಎಂದು ಮಾಹಿತಿ ನೀಡಿದರು.

ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಎ ಇ ರಘು ಮಾತನಾಡಿ, “ಮಹಾ ಶಿವರಾತ್ರಿ ಜಾತ್ರೆ ಫೆಬ್ರವರಿ 25 ರಿಂದ ಆರಂಭವಾಗಲಿದ್ದು, ಮಾರ್ಚ್ 1 ರವರೆಗೆ ನಡೆಯಲಿದೆ. ಯುಗಾದಿ ಜಾತ್ರಾ ಮಹೋತ್ಸವ ಮಾರ್ಚ್ 27 ರಿಂದ 30 ರವರೆಗೆ ಜರುಗಲಿದೆ. ಜಾತ್ರಾ ಅವಧಿಯಲ್ಲಿ ಭಕ್ತಾಧಿಗಳಿಗೆ ವಿಶೇಷ ದಾಸೋಹ ಇರಲಿದ್ದು, ಬೆಳಿಗ್ಗೆ 7 ರಿಂದ ಮಧ್ಯರಾತ್ರಿ 12 ಗಂಟೆಯವರೆಗೂ ನಿರಂತರವಾಗಿ ನಡೆಯಲಿದೆ. ಭಕ್ತಾಧಿಗಳ ಮೂಲ ಸೌಕರ್ಯಕ್ಕಾಗಿ ಎಲ್ಲ ವ್ಯವಸ್ಥೆಳಿಗೆ ಕ್ರಮ ವಹಿಸಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಸರ್ಕಾರಗಳು ಬದಲಾದರೂ ಶೋಷಣೆ ನೀತಿಗಳು ಬದಲಾಗಿಲ್ಲ: ಚಂದ್ರಶೇಖರ ಮೇಟಿ

ಸಭೆಯಲ್ಲಿ ಸಾಲೂರು ಬೃಹನ್ಮಠದ ಡಾ ಶಾಂತ ಮಲ್ಲಿಕಾರ್ಜುನ ಸ್ವಾಮಿ, ಮಲೈ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ನಾಮ ನಿರ್ದೇಶಿತ ಸದಸ್ಯ ಗಂಗನ ತಿಮ್ಮಯ್ಯ, ಭಾಗ್ಯಮ್ಮ, ಮಹದೇವಪ್ಪ ಬಿ, ಮರಿಸ್ವಾಮಿ, ಆರ್ ಎಸ್ ಕುಮಾರ ವಿಜಯ, ದೇವಾಲಯದ ಅರ್ಚಕ ಕೆ ವಿ ಮಾದೇಶ್, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಅಧಿಕಾರಿ ಪರಮೇಶ್ವರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X