ಚಾಮರಾಜನಗರ | ಮಲೆಮಹದೇಶ್ವರ ಜಾತ್ರಾ ಮಹೋತ್ಸವ; ಸಮರ್ಪಕ ಸಿದ್ಧತೆಗೆ ಸಚಿವ ಕೆ ವೆಂಕಟೇಶ್ ಸೂಚನೆ

Date:

ಮಲೆಮಹದೇಶ್ವರ ಜಾತ್ರಾ ಮಹೋತ್ಸವದ ವೇಳೆ ಆಗಮಿಸುವ ಭಕ್ತರ ಅನುಕೂಲಕ್ಕೆ ಸಮರ್ಪಕ ಸಿದ್ದತೆ ಕೈಗೊಳ್ಳಿ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

- Advertisement -

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ, ದೀಪಾವಳಿ, ಕಾರ್ತಿಕ ಸೋಮವಾರದಂದು ನಡೆಯುವ ಜಾತ್ರಾ ಮಹೋತ್ಸವ ಕಾರ್ಯಕ್ರಮಗಳ ಪೂರ್ವ ಸಿದ್ದತಾ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

“ಜಾತ್ರಾ ಸಂದರ್ಭದಲ್ಲಿ ಆಗಮಿಸುವ ಭಕ್ತಾಧಿಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಪೂರೈಸಬೇಕು. ಸರದಿ ಸಾಲಿನಲ್ಲಿ ದರ್ಶನ ಮಾಡುವ ಭಕ್ತರಿಗೆ ಶಾಮಿಯಾನ ಹಾಕುವ ಮೂಲಕ ನೆರಳಿನ ವ್ಯವಸ್ಥೆ ಕಲ್ಪಿಸಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

“ಜಾತ್ರೆ ವೇಳೆ ಹೆಚ್ಚು ಭಕ್ತಾಧಿಗಳು ಕ್ಷೇತ್ರಕ್ಕೆ ಆಗಮಿಸುವುದರಿಂದ ತಾತ್ಕಾಲಿಕ ಶೌಚಾಲಯ, ಸ್ನಾನಗೃಹ, ಸಾಮಾಗ್ರಿಗಳನ್ನು ಇಡಲು ಲಗೇಜ್ ಕೌಂಟರ್‌ಗಳನ್ನು ತೆರೆಯಬೇಕು. ಅಂತರಗಂಗೆ ಸ್ನಾನ ಘಟ್ಟದಲ್ಲಿ ಶುಚಿತ್ವ ಕಾಪಾಡಿಕೊಳ್ಳಲು ಕ್ರಮ ವಹಿಸಬೇಕು” ಎಂದು ತಿಳಿಸಿದರು.

“ಜಾತ್ರೆ ನಡೆಯುವ ದಿನಗಳಲ್ಲಿ ನಿರಂತರವಾಗಿ ದಾಸೋಹ ಇರಬೇಕು. ಅಡುಗೆ ಮಾಡುವ ಭಕ್ತಾಧಿಗಳಿಗೆ ಅಗತ್ಯವಿರುವ ಸೌಲಭ್ಯಗಳನ್ನು ಕಲ್ಪಿಸಬೇಕು. ದೈನಂದಿನ ದಾಸೋಹದ ಬಳಿ ಮಾಡಲಾಗುತ್ತಿರುವ ನಿರಂತರ ದಾಸೋಹ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕು” ಎಂದು ನಿರ್ದೇಶನ ನೀಡಿದರು.

“ವಾಹನಗಳ ನಿಲುಗಡೆ ಸೌಲಭ್ಯ, ಸುಗಮ ಸಂಚಾರಕ್ಕಾಗಿ ಅವಶ್ಯವಿರುವೆಡೆ ಸೂಚನಾ ಫಲಕ ಅಳವಡಿಕೆ, ಅಗತ್ಯಕ್ಕನುಸಾರವಾಗಿ ಬ್ಯಾರಿಕೇಡ್ ವ್ಯವಸ್ಥೆ ಇರಬೇಕು. ಮದ್ಯ ಮಾರಾಟ ಮತ್ತು ಸಾಗಾಣಿಕೆ ತಡೆಯಲು ತಪಾಸಣಾ ಕೇಂದ್ರಗಳನ್ನು ಕಟ್ಟುನಿಟ್ಟಾಗಿ ನಿರ್ವಹಿಸಬೇಕು. ಜಾತ್ರಾ ಸಮಯದಲ್ಲಿ ಆರೋಗ್ಯ ಇಲಾಖೆ ಹೆಚ್ಚವರಿ ವೈದ್ಯಾಧಿಕಾರಿ ಸಿಬ್ಬಂದಿಯನ್ನು ನಿಯೋಜಿಸಬೇಕು” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಯುಬಿಡಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನೇರ ನೇಮಕಾತಿಗೆ ಒತ್ತಾಯಿಸಿ ಎಐಯುಟಿಯುಸಿ ಪ್ರತಿಭಟನೆ

“ಜಾತ್ರೆಯಲ್ಲಿ ಸ್ವಚ್ಚತೆಗೆ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿಕೊಳ್ಳಬೇಕು. ತಾಳಬೆಟ್ಟದಲ್ಲಿಯೂ ಸ್ವಚ್ಚತಾ ಕಾರ್ಯಕ್ಕಾಗಿ ಸಿಬ್ಬಂದಿಯನ್ನು ನಿಯೋಜಿಸಬೇಕು. ಪ್ರಾಧಿಕಾರದ ರಂಗಮಂದಿರದಲ್ಲಿ ಸಾಂಸ್ಕಂತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಕ್ಷೇತ್ರಕ್ಕೆ ಬರಲು ಸಾರಿಗೆ ನಿಗಮದಿಂದ ಹೆಚ್ಚು ಬಸ್‌ಗಳ ವ್ಯವಸ್ಥೆ ಕಲ್ಪಿಸಬೇಕು. ಕ್ಷೇತ್ರದಲ್ಲಿ ಜಾತ್ರಾ ಸಂದರ್ಭದಲ್ಲಿ ಆಹಾರ ಸುರಕ್ಷತೆ ಬಗ್ಗೆ ಗಮನಹರಿಸಬೇಕು” ಎಂದು ಸಂಬಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಶಾಸಕ ಸಿ ಪುಟ್ಟರಂಗಶೆಟ್ಟಿ, ಸಾಲೂರು ಶಾಂತಮಲ್ಲಿಕಾರ್ಜುನಸ್ವಾಮಿ, ಜಿಲ್ಲಾಧಿಕಾರಿ ಶಿಲ್ಪಾನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಬಿ ಟಿ ಕವಿತಾ, ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ರಘು ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ರಸ್ತೆಯಲ್ಲಿ ಬರ್ತ್‌ಡೇ ಪಾರ್ಟಿ: ಮನೆಗೆ ಹೋಗಲು ದಾರಿ ಕೇಳಿದ ವ್ಯಕ್ತಿಯ ಮೇಲೆ ಹಲ್ಲೆ, ಮೂವರ ವಿರುದ್ಧ ದೂರು

ಮುಂಡಗೋಡ: ರಸ್ತೆಯಲ್ಲಿ ಹುಟ್ಟುಹಬ್ಬದ ಆಚರಣೆ ಮಾಡುತ್ತಿದ್ದಾಗ ಮನೆಗೆ ಹೋಗಲು ಜಾಗ ಕೇಳಿದ್ದಕ್ಕೆ...

ಬೀಳಗಿ | ಬೆಳೆ ಉಳಿಸಲು ಘಟಪ್ರಭಾ ಎಡದಂಡೆ ಕಾಲುವೆಯ ಕೊನೆಯವರೆಗೆ ನೀರು ಹರಿಸಿ: ಭಾರತೀಯ ಕಿಸಾನ್‌ ಸಂಘ ಆಗ್ರಹ

ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ಸಾಕಷ್ಟು ನೀರಿದ್ದರೂ ಘಟಪ್ರಭಾ ಎಡದಂಡೆ ಕಾಲುವೆಯ...

ಕೊಳ್ಳೆಗಾಲ | ಕಬ್ಬಿಗೆ ಟನ್‌ಗೆ ₹6,000 ಎಂಎಸ್‌ಪಿ ನಿಗದಿಗೆ ಆಗ್ರಹ

ಕಬ್ಬಿಗೆ ಪ್ರತಿ ಟನ್‌ಗೆ ₹6,000 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವುದು...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...