ಚಾಮರಾಜನಗರ | ಮಾನವ ನಿರ್ಮಿತ ಚಟುವಟಿಕೆಗಳಿಂದ ಪರಿಸರಕ್ಕೆ ಗಂಭೀರ ಹಾನಿ: ಈಶ್ವರ

Date:

ಮಾನವ ನಿರ್ಮಿತ ಪರಿಸರದಿಂದ ಪ್ರಾಕೃತಿಕ ಪರಿಸರದ ಮೇಲೆ ಗಂಭೀರ ಪರಿಣಾಮ ಉಂಟಾಗುತ್ತಿದ್ದು, ಇದನ್ನು ತಡೆಗಟ್ಟುವುದು ಅತ್ಯಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ ಅವರು ಹೇಳಿದರು.

- Advertisement -

ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ನಗರಸಭೆ, ಶಾಲಾ ಶಿಕ್ಷಣ ಹಾಗೂ ತೋಟಗಾರಿಕೆ ಇಲಾಖೆಗಳ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಗಾಳಿ, ನೀರು, ಮಣ್ಣು, ಖನಿಜ ಸಂಪತ್ತು ಸೇರಿದಂತೆ ನೈಸರ್ಗಿಕ ಸಂಪನ್ಮೂಲಗಳ ಮೇಲೆ ಕಟ್ಟಡಗಳು, ಕೈಗಾರಿಕೆಗಳು ಹಾಗೂ ಇತರ ಮಾನವ ನಿರ್ಮಿತ ಚಟುವಟಿಕೆಗಳಿಂದ ದುಷ್ಪರಿಣಾಮಗಳು ಉಂಟಾಗುತ್ತಿವೆ. ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಮೂಲಭೂತ ಕರ್ತವ್ಯವಾಗಿದ್ದು, ಗಾಳಿ, ನೀರು, ಮಣ್ಣು ಮತ್ತು ಅರಣ್ಯ ಸಂಪತ್ತನ್ನು ಉಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಅವರು ತಿಳಿಸಿದರು.

ಗಿಡಮರಗಳನ್ನು ನೆಟ್ಟು ಪೋಷಿಸುವುದರಿಂದ ಆಮ್ಲಜನಕದ ಪೂರೈಕೆ ಹೆಚ್ಚುವುದರ ಜೊತೆಗೆ ಪರಿಸರ ಸಮತೋಲನ ಕಾಪಾಡಲು ನೆರವಾಗುತ್ತದೆ. ಅರಣ್ಯ ಪ್ರದೇಶಗಳು ವೃದ್ಧಿಯಾದಂತೆ ಸಕಾಲದಲ್ಲಿ ಮಳೆ ಸುರಿದು ಕೃಷಿ ಮತ್ತು ಅಂತರ್ಜಲ ವೃದ್ಧಿಗೂ ಅನುಕೂಲವಾಗುತ್ತದೆ ಎಂದು ಹೇಳಿದರು.

ಉತ್ತಮ ಆರೋಗ್ಯಕ್ಕಾಗಿ ಉತ್ತಮ ಪರಿಸರ ಅತ್ಯಗತ್ಯವಾಗಿದೆ. ಶುದ್ಧ ಗಾಳಿ, ಬೆಳಕು ಹಾಗೂ ನೀರನ್ನು ಮುಂದಿನ ಪೀಳಿಗೆಗೆ ಉಳಿಸಿಕೊಡಬೇಕು. ಒಂದು ಮರ ಕಡಿದರೆ ಕನಿಷ್ಠ ಹತ್ತು ಗಿಡಗಳನ್ನು ನೆಡುವ ಮನೋಭಾವ ಬೆಳೆಸಿಕೊಳ್ಳಬೇಕು. ಪರಿಸರ ಜಾಗೃತಿಗಾಗಿ 1973ರಿಂದ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದೆ ಎಂದು ಈಶ್ವರ ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಶ್ರೀರೂಪ ಅವರು, ಜಿಲ್ಲೆಯ ಅರಣ್ಯ ಸಂಪತ್ತು ಹಸಿರು ಶ್ವಾಸಕೋಶದಂತಿದ್ದು, ಪರಿಸರ ಸ್ನೇಹಿ ಜಿಲ್ಲೆಯಾಗಿ ರೂಪುಗೊಳ್ಳಲು ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸುವುದು ಅಗತ್ಯ ಎಂದು ತಿಳಿಸಿದರು.

ಕೆರೆ-ಕಟ್ಟೆಗಳಿಗೆ ಪ್ಲಾಸ್ಟಿಕ್ ತ್ಯಾಜ್ಯ ಹಾಕದೆ ಅವುಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಸಹಕರಿಸಬೇಕು. ಅಭಿವೃದ್ಧಿ ಮತ್ತು ಪರಿಸರವು ಒಂದೇ ನಾಣ್ಯದ ಎರಡು ಮುಖಗಳಂತೆ. ಇವೆರಡನ್ನೂ ಸಮನ್ವಯಗೊಳಿಸಿಕೊಂಡು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕಿದ್ದು, ಪರಿಸರ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

ವಿಶೇಷ ಉಪನ್ಯಾಸ ನೀಡಿದ ಧೀನಬಂಧು ಸಂಸ್ಥೆಯ ಸಂಸ್ಥಾಪಕ ಹಾಗೂ ಕಾರ್ಯದರ್ಶಿ ಪ್ರೊ. ಜಿ.ಎಸ್. ಜಯದೇವ್ ಅವರು, ಪ್ರಕೃತಿಯನ್ನು ಪ್ರೀತಿಸುವ ಮತ್ತು ಗೌರವಿಸುವ ಮನೋಭಾವ ಪ್ರತಿಯೊಬ್ಬರಲ್ಲೂ ಬೆಳೆಯಬೇಕು ಎಂದು ಹೇಳಿದರು.

ಜಾಗತಿಕ ತಾಪಮಾನ ಏರಿಕೆ, ಕೈಗಾರಿಕಾ ಕ್ರಾಂತಿ, ಅತಿಯಾದ ಕೊಳವೆಬಾವಿ ಕೊರೆಯುವಿಕೆ, ಅರಣ್ಯ ನಾಶ ಹಾಗೂ ಕೀಟನಾಶಕಗಳ ಬಳಕೆಯಿಂದ ಪರಿಸರದ ಮೇಲೆ ಅಪಾಯ ಹೆಚ್ಚಾಗುತ್ತಿದೆ. ಇದೇ ರೀತಿ ಮುಂದುವರಿದರೆ ಭವಿಷ್ಯದಲ್ಲಿ ಮತ್ತಷ್ಟು ಗಂಭೀರ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಅವರು ಎಚ್ಚರಿಸಿದರು.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಚಿತ್ರಕಲಾ ಹಾಗೂ ಪ್ರಬಂಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪ್ಲಾಸ್ಟಿಕ್ ತ್ಯಜಿಸಿ ಪರಿಸರ ಸ್ನೇಹಿ ವಸ್ತುಗಳನ್ನು ಬಳಸುವ ಸಂದೇಶದೊಂದಿಗೆ ಭಾಗವಹಿಸಿದವರಿಗೆ ಬಟ್ಟೆ ಚೀಲಗಳನ್ನು ವಿತರಿಸಲಾಯಿತು. ಕಾರ್ಯಕ್ರಮಕ್ಕೂ ಮುನ್ನ ಡಾ. ಬಿ.ಆರ್. ಅಂಬೇಡ್ಕರ್ ಭವನದ ಆವರಣದಲ್ಲಿ ಗಣ್ಯರು ಸಸಿ ನೆಟ್ಟು ನೀರೆರೆಯುವ ಮೂಲಕ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು.

ಈ ಸುದ್ದಿ ಓದಿದ್ದೀರಾ?ಮಂಡ್ಯ | ಏಕರೂಪ ಸಮಾನ ಶಿಕ್ಷಣಕ್ಕೆ ಆಗ್ರಹಿಸಿ ಇಂದು ಬೃಹತ್ ಪಂಜಿನ ಮೆರವಣಿಗೆ

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಉಮಾಶಂಕರ್, ನಗರಸಭೆ ಆಯುಕ್ತ ಪರಶುರಾಮ್ ಎಂ. ಛಲವಾದಿ, ಪರಿಸರ ಎಂಜಿನಿಯರ್ ರೂಪಾ ಸೇರಿದಂತೆ ಹಲವು ಅಧಿಕಾರಿಗಳು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...