ಚಾಮರಾಜನಗರ | ಪರವಾನಗಿ ಇಲ್ಲದೇ ತಂಬಾಕು ಮಾರಾಟಕ್ಕೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಶ್ರೀರೂಪ ಕಟ್ಟುನಿಟ್ಟಿನ ಸೂಚನೆ

Date:

ಪರವಾನಗಿ ಪಡೆಯದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರ ವಿರುದ್ಧ ಗರಿಷ್ಠ ಪ್ರಮಾಣದಲ್ಲಿ ದಂಡ ವಿಧಿಸಿ, ಕಡ್ಡಾಯವಾಗಿ ಪರವಾನಗಿ ಪಡೆಯಲು ಸೂಚನೆ ನೀಡಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

- Advertisement -

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ನಿಯಮಬಾಹಿರವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ತಂಬಾಕು ಉತ್ಪನ್ನಗಳ ಮಾರಾಟಗಾರರು ಪ್ರತ್ಯೇಕ ಪರವಾನಗಿ ಹೊಂದಿರುವುದು ಕಡ್ಡಾಯವಾಗಿದ್ದು, ತಂಬಾಕು ನಿಯಂತ್ರಣ ಸಮಿತಿಗಳನ್ನು ರಚಿಸಿಕೊಂಡು ನಿರಂತರ ಕಾರ್ಯಾಚರಣೆ ನಡೆಸಬೇಕು ಎಂದು ಸೂಚಿಸಿದರು. ಪರಿಶೀಲನೆ ವೇಳೆ ಪರವಾನಗಿ ಇಲ್ಲದೇ ತಂಬಾಕು ಉತ್ಪನ್ನ ಮಾರಾಟ ಪತ್ತೆಯಾದರೆ ಹೆಚ್ಚಿನ ಪ್ರಮಾಣದಲ್ಲಿ ದಂಡ ವಿಧಿಸುವುದರ ಜೊತೆಗೆ ತಕ್ಷಣ ಪರವಾನಗಿ ಪಡೆಯಲು ಕಟ್ಟುನಿಟ್ಟಿನ ಸೂಚನೆ ನೀಡಬೇಕು ಎಂದರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳ ಶಾಲೆಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ 100 ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಅವಕಾಶವಿಲ್ಲ. ಈ ನಿಯಮ ಉಲ್ಲಂಘನೆಯಾಗುತ್ತಿದೆಯೇ ಎಂಬುದನ್ನು ಅಧಿಕಾರಿಗಳು ನಿಯಮಿತವಾಗಿ ಪರಿಶೀಲಿಸಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳು ಆಗಿಂದಾಗ್ಗೆ ದಾಳಿ ನಡೆಸಿ ಉಲ್ಲಂಘನೆ ಪ್ರಕರಣಗಳು ಕಂಡುಬಂದರೆ ದಂಡ ವಿಧಿಸಿ, ಜಿಲ್ಲಾ ತಂಬಾಕು ನಿಯಂತ್ರಣ ಘಟಕಕ್ಕೆ ವರದಿ ಸಲ್ಲಿಸಬೇಕು ಎಂದು ತಿಳಿಸಿದರು.

ಆರೋಗ್ಯ ಇಲಾಖೆಯ ಸರ್ವೆಯ ಆಧಾರದ ಮೇಲೆ ತಂಬಾಕು ಮುಕ್ತ ಗ್ರಾಮಗಳಾಗಿ ಆಯ್ಕೆಗೊಂಡಿರುವ 68 ಗ್ರಾಮಗಳಲ್ಲಿ ವಿಶೇಷ ಗ್ರಾಮಸಭೆಗಳನ್ನು ಆಯೋಜಿಸಿ ನಿರ್ಣಯ ಕೈಗೊಳ್ಳಬೇಕು. ಆರೋಗ್ಯ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ತಂಬಾಕು ಮುಕ್ತ ಗ್ರಾಮ ಘೋಷಣೆ ಅನುಷ್ಠಾನವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ತಂಬಾಕು ಮತ್ತು ಮಾದಕದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ ಕೋಟ್ಪಾ ಕಾಯ್ದೆಯ ಕುರಿತು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ತಂಬಾಕು ಉತ್ಪನ್ನಗಳ ನಿಯಂತ್ರಣ ಕಾಯ್ದೆಯಡಿ ತಪಾಸಣೆ ಹಾಗೂ ಪರಿಶೀಲನೆ ಕಾರ್ಯವನ್ನು ಮತ್ತಷ್ಟು ಚುರುಕುಗೊಳಿಸಬೇಕೆಂದು ಜಿಲ್ಲಾಧಿಕಾರಿ ಹೇಳಿದರು.

ಸಭೆಯಲ್ಲಿ ಕೋಟ್ಪಾ ಕಾಯ್ದೆಯಡಿ 2025ರ ಏಪ್ರಿಲ್‌ನಿಂದ ಅಕ್ಟೋಬರ್‌ವರೆಗೆ ವ್ಯಾಪಕ ದಾಳಿ ನಡೆಸಿ ಹೆಚ್ಚು ದಂಡ ವಸೂಲಿ ಮಾಡಿರುವ ಚಾಮರಾಜನಗರ ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್ ಹಾಗೂ ಹನೂರು ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಕಾಶ್ ಅವರಿಗೆ ಪ್ರಶಂಸನಾ ಪತ್ರ ವಿತರಿಸಲಾಯಿತು.

ಈ ಸುದ್ದಿ ಓದಿದ್ದೀರಾ?ಶ್ರೀರಂಗಪಟ್ಟಣ | ಶಿಕ್ಷಣ ಮತ್ತು ಸಂಶೋಧನೆಗಾಗಿ ವಸ್ತುಸಂಗ್ರಹಾಲಯಗಳ ಮಹತ್ವ ಅನಾವರಣ

ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಆರೋಗ್ಯ ಇಲಾಖೆಯ ಕಾರ್ಯಕ್ರಮ ಅಧಿಕಾರಿ ಡಾ. ಚಂದ್ರಶೇಖರ್, ಡಾ. ಸುಂದರೇಶ್, ತಾಲೂಕು ಆರೋಗ್ಯಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಚಲಿಸುತ್ತಿದ್ದ ಕಾರು ಕೆರೆಗೆ; ಮೂವರು ಪಾರು 

ಚಲಿಸುತ್ತಿದ್ದ ಕಾರಿನ ಟೈರ್ ಬ್ಲಾಸ್ಟ್ ಆಗಿ ಕಾ‌ರ್ ಕೆರೆಗೆ ಬಿದ್ದ ಪರಿಣಾಮ...

ಹಾಸನ | ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಶಾಸಕ ಸಿ.ಎನ್ ಬಾಲಕೃಷ್ಣರಿಗೆ ಮನವಿ; ಸಿಐಟಿಯು

ಕಾರ್ಮಿಕರಿಗೆ ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಹಾಗೂ ಕಾರ್ಮಿಕರ ವಿವಿಧ ಬೇಡಿಕೆಗಳ...

ಹಾಸನ | 271 ರೈತರಿಗೆ ಪರಿಹಾರ ವಿತರಿಸುವ ಪ್ರಕ್ರಿಯೆ

ಭೂಸ್ವಾಧೀನ ಪೂರ್ಣಗೊಂಡು ಅಗತ್ಯ ಜಾಗವನ್ನು ಗುತ್ತಿಗೆದಾರರಿಗೆ ಹಸ್ತಾಂತರಿಸಿದ ಬಳಿಕ ಕಾಮಗಾರಿ ಆರಂಭಿಸಲು...

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...