ಚಾಮರಾಜನಗರ | ನಗರಸಭೆ ಬಜೆಟ್ ಮಂಡನೆ: ₹1.87 ಕೋಟಿ ಉಳಿತಾಯ

Date:

ಚಾಮರಾಜನಗರದ ನಗರಸಭೆ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ನಗರಸಭೆ ಆಡಳಿತಾಧಿಕಾರಿಯಾದ ಶ್ರೀರೂಪ 2026-27ನೇ ಸಾಲಿನಲ್ಲಿ ₹1.87 ಕೋಟಿ ಉಳಿತಾಯ ಬಜೆಟ್ ಮಂಡಿಸಿದ್ದಾರೆ.

- Advertisement -

₹77.11 ಕೋಟಿ ರೂಪಾಯಿ ಬಜೆಟ್ ನಲ್ಲಿ ಮೂಲಸೌಕರ್ಯಕ್ಕೆ ಒತ್ತು ನೀಡಲಾಗಿದೆ. ಕುಡಿಯುವ ನೀರು, ಒಳಚರಂಡಿ, ಸ್ವಚ್ಛತೆ, ಉದ್ಯಾನವನ ನಿರ್ವಹಣೆಗೆ ₹75.23 ಕೋಟಿ ರೂಪಾಯಿ ವ್ಯಯಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಐಐಟಿಗಳ ಹೊಳೆಯುವ ಕ್ಯಾಂಪಸ್‌ನೊಳಗೆ ಮಡುಗಟ್ಟಿರುವ ಜಾತಿ ತಾರತಮ್ಯದ ಅಂಧಕಾರ

ದೇಶದ ಅತ್ಯುನ್ನತ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಐಐಟಿಗಳು (IIT) ಕೇವಲ ತಾಂತ್ರಿಕ ಜ್ಞಾನದ ದೇಗುಲಗಳಾಗಿ ಉಳಿದಿಲ್ಲ; ಬದಲಾಗಿ ಮೀಸಲಾತಿ ಅಡಿಯಲ್ಲಿ ಪ್ರವೇಶ ಪಡೆಯುವ ದಲಿತ, ಆದಿವಾಸಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು...

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ ಅದು ಬಹುಪಾಲು ಯಶಸ್ಸನ್ನೂ ಸಾಧಿಸಿದೆ. ಬೃಹತ್ ನೀರಾವರಿ ಯೋಜನೆಗಳಿಗೆ ಕೊಡುವ ಆದ್ಯತೆ ಮತ್ತು ಮಹತ್ವವನ್ನು ಸಣ್ಣ ನೀರಾವರಿ ಯೋಜನೆಗಳಿಗೂ ನೀಡಬೇಕೆನ್ನುವುದೇ...

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ಸದರಿ ಸಾಲಿನಲ್ಲಿ ಆಸ್ತಿ ತೆರಿಗೆ, ದಂಡ ಪಾವತಿ, ಘನತ್ಯಾಜ್ಯ ನಿರ್ವಹಣೆ ಕರ, ನೀರಿನ ಶುಲ್ಕ, ಶುದ್ಧ ಕುಡಿಯುವ ನೀರಿನ ಘಟಕ, ಅಂಗಡಿ-ಮಳಿಗೆ ಬಾಡಿಗೆ, ತರಕಾರಿ ಮಾರುಕಟ್ಟೆ ಶುಲ್ಕ, ಉದ್ದಿಮೆ ಪರವಾನಗಿ, ಅಭಿವೃದ್ಧಿ ಮೇಲ್ವಿಚಾರಣಾ ಶುಲ್ಕ, ರಸ್ತೆ ಅಗೆತ ಶುಲ್ಕ, ಕಟ್ಟಡ ಪರವಾನಗಿ, ಮಾರುಕಟ್ಟೆ ಶುಲ್ಕ, ಉದ್ದಿಮೆ ಪರವಾನಗಿ ಶುಲ್ಕ, ಸಾರ್ವಜನಿಕ ಶೌಚಾಲಯ ಬಾಡಿಗೆ, ಒಳಚರಂಡಿ ಸಂಪರ್ಕ ಶುಲ್ಕ, ಮುದ್ರಾಂಕ ಶುಲ್ಕ, ಬ್ಯಾಂಕ್ ಬಡ್ಡಿ, ಠೇವಣಿ ಮೇಲಿನ ಬಡ್ಡಿ, ಅಕ್ರಮ ನೀರಿನ ಸಂಪರ್ಕ ದಂಡ ವಸೂಲಿ, ಖಾತೆ ಶುಲ್ಕ, ಖಾತೆ ಬದಲಾವಣೆ ಶುಲ್ಕ, ಜಾಹೀರಾತು ತೆರಿಗೆ, ಗುತ್ತಿಗೆದಾರರ ಭದ್ರತಾ ಠೇವಣಿ, ಶೌಚಾಲಯಗಳ ಹರಾಜು, ಅಂಗಡಿ ಮುಂಗಡ ಠೇವಣಿ ಹಣ ಸೇರಿದಂತೆ ಇನ್ನಿತರೇ ಮೂಲಗಳಿಂದ ₹21.17 ಕೋಟಿ ಆದಾಯ ನಿರೀಕ್ಷಿಸಲಾಗಿದೆ ಎಂದರು.

16ನೇ ಹಣಕಾಸು ಆಯೋಗದ ಅನುದಾನ, ವೇತನ ಅನುದಾನ, ಮುಕ್ತನಿಧಿ, ಎಸ್ ಎಫ್ ಸಿ ವಿಶೇಷ ಅನುದಾನ, ಎಸ್ಸಿಎಸ್ಪಿ-ಟಿಎಸ್ಪಿ, ಬೀದಿ ದೀಪ, ನೀರು ಸರಬರಾಜು, ವಿದ್ಯುತ್ ಅನುದಾನ, ಕುಡಿಯುವ ನೀರು, ಗೃಹ ಭಾಗ್ಯ ಯೋಜನೆ ಅನುದಾನ, ಸ್ವಚ್ಛ ಕಲಿಕಾ ಕೇಂದ್ರ, ಸ್ವಚ್ಛ ಭಾರತ್ ಅಭಿಯಾನ ಅನುದಾನ, ಇಂದಿರಾ ಕ್ಯಾಂಟೀನ್ ನಿರ್ವಹಣೆ, ವಿದ್ಯುತ್ ಚಿತಗಾರ ನಿರ್ಮಾಣ, ಡೇ ನಲ್ಮ್ ಅನುದಾನ, ಜನಗಣತಿ ಅನುದಾನ ಸೇರಿ ₹37.78 ಕೋಟಿ ಅನುದಾನ ನಿರೀಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದರು.

ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಮಾತನಾಡಿ, “ಚಾಮರಾಜನಗರಕ್ಕೆ ಕುಡಿಯುವ ನೀರಿನ ಪೂರೈಕೆಗಾಗಿ ಮಾಲಂಗಿ ಯೋಜನೆ ಅನುಷ್ಠಾನವಾಗಲಿದ್ದು, ಜನರಿಗೆ ಸಮರ್ಪಕವಾಗಿ ಕುಡಿಯುವ ನೀರಿನ ಪೂರೈಕೆಯಾಗಬೇಕು. ಮಳೆಗಾಲಕ್ಕೂ ಮುನ್ನ ಕೆರೆಗಳ ಹೂಳು ತೆಗಿಸಬೇಕು. ನಗರಸಭೆಯಲ್ಲಿ ಪೌರಕಾರ್ಮಿಕರ ಕೊರತೆಯಿದ್ದು, ಭರ್ತಿ ಮಾಡಿಕೊಳ್ಳಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ನಗರದಲ್ಲಿ ಕಸ ಸಂಗ್ರಹಣೆ-ವಿಲೇವಾರಿ ಕುರಿತಾಗಿ ಸಾರ್ವಜನಿಕರಿಂದ ದೂರುಗಳಿದ್ದು, ಸರಿ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಮುಂದಾಗಬೇಕಿದೆ. ಕುಡಿಯುವ ನೀರಿಗೆ ಕೇವಲ ₹10 ಲಕ್ಷ ಇರಿಸಿರುವುದು ಯಾವುದಕ್ಕೂ ಸಾಲಲ್ಲ, ಇದನ್ನ ಹೆಚ್ಚಿಸಿ ಕುಡಿಯುವ ನೀರಿಗೆ ಹೆಚ್ಚಿನ ಆಧ್ಯತೆ ನೀಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಕೆ ಆರ್ ಪೇಟೆ | ಗವಿಮಠ ವಸತಿ ಶಾಲೆಗೆ ಸೇರಿದ ಆಹಾರ ದಾಸ್ತಾನು ರೈಸ್ ಮಿಲ್ ನಲ್ಲಿ ಪತ್ತೆ; ದೂರು ನೀಡಿದ ರೈತಸಂಘ

ಸಭೆಯಲ್ಲಿ ಯೋಜನಾ ನಿರ್ದೇಶಕ ವೆಂಕಟೇಶ್, ಪೌರಾಯುಕ್ತ ಪರಶುರಾಮ ಛಲವಾದಿ ಸೇರಿದಂತೆ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ರಾಜೀನಾಮೆ ನೀಡಬೇಕು’ : ಸುರೇಶ್ ಶೆಟ್ಟಿ ಬನ್ನಂಜೆ

ಮತದಾರರ ಪಟ್ಟಿಯಿಂದ ಮತದಾರರನ್ನು ಅಕ್ರಮವಾಗಿ ತೆಗೆದುಹಾಕುವ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಅನ್ಯಾಯ...

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...