ಚಾ.ನಗರ | ನೀರಿಗಾಗಿ ತಂದೆ-ತಾಯಿ ಪರದಾಟ: ಸಿಎಂಗೆ ಪತ್ರ ಬರೆದ ಬಾಲಕಿ; ಗ್ರಾಮಕ್ಕೆ ಅಧಿಕಾರಿಗಳು ದೌಡು

Date:

ತನ್ನ ತಂದೆ-ತಾಯಿ ಕೃಷಿ ಮಾಡಲು ನೀರಿಲ್ಲದೆ ಪರದಾಡುತ್ತಿರುವುದನ್ನು ಕಂಡ 5ನೇ ತರಗತಿಯ ಬಾಲಕಿಯೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ ನಡೆದಿದೆ. ಬಾಲಕಿ ಪತ್ರ ಬರೆಯುತ್ತಿದ್ದಂತೆಯೇ ಅಧಿಕಾರಿಗಳು ಗ್ರಾಮಕ್ಕೆ ದೌಡಾಯಿಸಿದ್ದಾರೆ. ಸಮಸ್ಯೆ ಪರಿಹರಿಸಲು ಕ್ರಮ ತಗೆದುಕೊಳ್ಳುತ್ತಿದ್ದಾರೆ.

- Advertisement -

ಕೆಂಪಯ್ಯನಹಟ್ಟಿ ಗ್ರಾಮದ ವಿದ್ಯಾರ್ಥಿನಿ ವರ್ಣಿಕಾ ಅವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. “ಗ್ರಾಮದಲ್ಲಿ ಮಳೆ ಕೊರತೆಯಿಂದಾಗಿ ಇತ್ತೀಚಿನ ದಿನಗಳಲ್ಲಿ ಅಂತರ್ಜಲ ಕುಸಿದಿದೆ. ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗಿದೆ. ನೀರಿಲ್ಲದೆ ಕೃಷಿ ಚಟುವಟಿಕೆಗಳು ನಿಂತುಹೋಗಿವೆ. ಬೇಸಾಯ ಮಾಡುತ್ತಿದ್ದ ರೈತರು, ಕೃಷಿ ಮಾಡಲಾಗದೆ, ಉದ್ಯೋಗಕ್ಕಾಗಿ ವಲಸೆ ಹೋಗುತ್ತಿದ್ದಾರೆ. ದೂರದ ಊರುಗಳಲ್ಲಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಈ ಸ್ಥಿತಿಯು ನಮ್ಮನ್ನು ತೀವ್ರವಾಗಿ ಕಾಡುತ್ತಿದೆ” ಎಂದು ಬಾಲಕಿ ಹೇಳಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ನಮ್ಮ ಸಮಸ್ಯೆ ಬಗೆಹರಿಯಬೇಕಾದರೆ, ಹನೂರು ತಾಲೂಕಿನ ರಾಮಾಪುರ ಹೋಬಳಿಯ ಎಲ್ಲ ಕೆರೆಗಳಿಗೆ ಕಾವೇರಿ ನದಿಯಿಂದ ನೀರು ತುಂಬಿಸಲು ಕ್ರಮ ಕೈಗೊಳ್ಳಬೇಕು. ಯೋಜನೆಯನ್ನು ರೂಪಿಸಬೇಕು. ಕೆರೆಗಳಿಗೆ ನೀರು ತುಂಬಿಸಿ, ಭೂಮಿಯ ಅಂತರ್ಜಲ ಮಟ್ಟವನ್ನು ಹೆಚ್ಚಿಸಿ, ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸಬೇಕು” ಎಂದು ಬಾಲಕಿ ಮನವಿ ಮಾಡಿದ್ದಾರೆ.

ಬಾಲಕಿ ಪತ್ರ ಬರೆದಿರುವುದು ತಿಳಿದ ಬೆನ್ನಲ್ಲೇ, ಚಾಮರಾಜನಗರ ಜಿಲ್ಲಾ ಪಂಚಾಯತಿ ಸಿಇಒ ಮೋನಾರೋತ್ ಮತ್ತು ಗ್ರಾಮ ಪಂಚಾಯತಿ ಪಿಡಿಒ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಜನರ ಸಮಸ್ಯೆ ಆಲಿಸಿದ ಸಿಇಒ ಮೋನಾರೋತ್, “ಕುಡಿಯುವ ನೀರು ಪೂರೈಸಲು ಪ್ರತ್ಯೇಕ ವ್ಯವಸ್ಥೆ ಮಾಡಲಾಗುತ್ತದೆ. ನದಿಯಿಂದ ನೀರು ತುಂಬಿಸುವ ಬಗ್ಗೆ ಸರ್ಕಾರದ ಜೊತೆಗೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...