ಚಾಮರಾಜನಗರ | ವಸತಿ ಶಾಲೆಗಳಲ್ಲಿ ವಿಶೇಷಚೇತನರಿಗೆ ನೇರಪ್ರವೇಶ ಕಲ್ಪಿಸಿ: ಆಯುಕ್ತ ದಾಸ್ ಸೂರ್ಯವಂಶಿ ಸೂಚನೆ

Date:

ವಸತಿ ಶಾಲೆಗಳಲ್ಲಿ ವಿಶೇಷಚೇತನರಿಗೆ ನೇರಪ್ರವೇಶಕ್ಕೆ ಅವಕಾಶ ಕಲ್ಪಿಸಿಕೊಡುವಂತೆ ವಿಶೇಷ ಚೇತನರ ಹಕ್ಕುಗಳ ಅಧಿನಿಯಮದ
ರಾಜ್ಯ ಆಯುಕ್ತ ದಾಸ್ ಸೂರ್ಯವಂಶಿ ಸೂಚನೆ ನೀಡಿದರು.

- Advertisement -

ಚಾಮರಾಜನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ನಡೆದ ವಿಶೇಷಚೇತನರ ಹಕ್ಕುಗಳ ಅಧಿನಿಯಮದ ಅನುಷ್ಠಾನ ಮತ್ತು ವಿಶೇಷಚೇತನರ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಬಾಗಲಕೋಟೆ | ಆಲಮಟ್ಟಿ ಒಳಹರಿವು ಶೂನ್ಯ: ಬಾಗಿನ ಅರ್ಪಣೆಗೆ...

ಮಹಾರಾಷ್ಟ್ರದ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಮಳೆ ಕಡಿಮೆಯಾಗಿ ಆಲಮಟ್ಟಿ ಜಲಾಶಯದ ಒಳಹರಿವು ಶೂನ್ಯಕ್ಕೆ ತಲುಪಿದೆ. ಜಲಾಶಯ ಭರ್ತಿಯಾಗಿ ಈಗ ನೀರಿನ ಮಟ್ಟ ಇಳಿಕೆಯಾಗುತ್ತಿದ್ದರೂ, ಇದುವರೆಗೆ ಕೃಷ್ಣಾ ನದಿಗೆ ಬಾಗಿನ ಅರ್ಪಿಸದಿರುವುದು ಬಾಗಲಕೋಟೆ ಜಿಲ್ಲೆಯ...

“ಸರ್ಕಾರಿ ವಸತಿ ಶಾಲೆಗಳಲ್ಲಿ ಪ್ರವೇಶ ಪರೀಕ್ಷೆ ಇಲ್ಲದೆ ವಿಕಲಚೇತನರಿಗೆ ಶೇ.20ರಿಂದ ಶೇ.25ರಷ್ಟು ನೇರವಾಗಿ ಪ್ರವೇಶ ನೀಡಲು ಅವಕಾಶವಿದ್ದು, ವಿಶೇಷಚೇತನರಿಗೆ ಶಿಕ್ಷಣ ಕ್ಷೇತ್ರದಲ್ಲಿ ಹೆಚ್ಚಿನ ಅವಕಾಶಗಳನ್ನು ಒದಗಿಸಬೇಕಿದೆ. ಸರ್ಕಾರಿ ವಸತಿ ಶಾಲೆಗಳಲ್ಲಿ ಪ್ರವೇಶ ಪರೀಕ್ಷೆ ನಡೆಸದೆ ವಿಶೇಷಚೇತನರಿಗೆ ಶೇ.20 ರಿಂದ 25ರಷ್ಟು ನೇರವಾಗಿ ಸೀಟುಗಳನ್ನು ನೀಡಬೇಕು. ಇದರಿಂದ ವಿಶೇಷಚೇತನರಿಗೆ ಅನುಕೂಲವಾಗಲಿದೆ. ಈ ಮೂಲಕ ವ್ಯಾಸಂಗಕ್ಕೆ ಉತ್ತೇಜನ ನೀಡಬೇಕಿದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಕ್ರಮವಹಿಸಬೇಕು” ಎಂದು ತಿಳಿಸಿದರು.

“ಶಾಲೆಗಳಲ್ಲಿ ಅಂಧ ಮಕ್ಕಳಿಗೆ ಬ್ರೈಲ್ ಇನ್ನಿತರ ಅನುಕೂಲವಾಗುವ ವ್ಯವಸ್ಥೆಗಳನ್ನು ಜಾರಿಗೆ ತರಬೇಕು. ತರಬೇತಿ ಪಡೆದ ಸಂಪನ್ಮೂಲ ವ್ಯಕ್ತಿಗಳು, ಶಿಕ್ಷಕರನ್ನು ಅಂಧ ವಿದ್ಯಾರ್ಥಿಗಳ ಬೋಧನೆಗೆ ನಿಯೋಜಿಸಬೇಕು. ಅಂಧ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿಯೇ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಶಿಕ್ಷಣದ ನೈಜ ಉದ್ದೆಶ ಈಡೇರಿದಂತಾಗುವುದಿಲ್ಲ. ಕಷ್ಟಕರ ಜೀವನ ನಡೆಸುವ ವಿಶೇಷಚೇತನರ ಕೆಲಸಗಳನ್ನು ಸಕಾಲಕ್ಕೆ ಮಾಡಿಕೊಡಬೇಕು. ಯೋಜನೆಗಳನ್ನು ಪರಿಣಾಮಕಾರಿಯಾಗಿ ತಲುಪಿಸಿದರೆ ಅನುಕೂಲವಾಗಲಿದೆ. ಬೇರೆ ಜಿಲ್ಲೆಗಳಿಗೆ ಚಾಮರಾಜನಗರ ಮಾದರಿಯಾಗಬೇಕು. ವಿಶೇಷಚೇತನರಿಗೆ ಮೀಸಲಾಗಿರುವ ಅನುದಾನ ಹೆಚ್ಚಿನ ಪ್ರಮಾಣದಲ್ಲಿ ವಿನಿಯೋಗವಾಗಬೇಕು” ಎಂದು ಹೇಳಿದರು.

“ಕಟ್ಟಡ ನಿರ್ಮಿಸುವಾಗ ಇಲಾಖೆಗಳು ವಿಕಲಚೇತನ ಸ್ನೇಹಿ ಸೌಕರ್ಯಗಳು ಇರುವಂತೆ ನೋಡಿಕೊಳ್ಳಬೇಕು. ರ್ಯಾಂಪ್ ಸೇರಿದಂತೆ ವಿಶೇಷಚೇತನರು ಪ್ರವೇಶಿಸಲು ಅನುವು ಮಾಡಿಕೊಡುವ ಇನ್ನಿತರ ಆಧುನಿಕ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಕೆಎಸ್‍ಆರ್‌ಟಿಸಿ ಸೇವೆಗಳಲ್ಲಿ ವಿಶೇಷಚೇತನರಿಗೆ ನೆರವಾಗುವ ಸೌಲಭ್ಯಗಳು ಇರಬೇಕು” ಎಂದು ಆಯುಕ್ತ ದಾಸ್ ಸೂರ್ಯವಂಶಿ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ, “ಅಂಧ ಮಕ್ಕಳ ಶಿಕ್ಷಣಕ್ಕಾಗಿಯೇ ವಿಶೇಷ ಕ್ರಮಗಳನ್ನು ತೆಗೆದುಕೊಳ್ಳಲಿದ್ದೇವೆ. ಮೂರು ತಿಂಗಳ ತರಬೇತಿ ಶಿಬಿರಗಳನ್ನು ಏರ್ಪಾಡು ಮಾಡಲಾಗುವುದು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳೊಂದಿಗೆ ಈ ಸಂಬಂಧ ವಿಸ್ತೃತವಾಗಿ ಚರ್ಚೆ ನಡೆಸಿ ಶಿಕ್ಷಣದ ಸುಧಾರಣೆಗೆ ಆದ್ಯ ಗಮನ ಹರಿಸಲಾಗುವುದು” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರಾಜಕೀಯ ದಬ್ಬಾಳಿಕೆ, ಸಾಮಾಜಿಕ ಶೋಷಣೆ ವಿರುದ್ಧ ಎದ್ದು ನಿಲ್ಲಬೇಕಿದೆ: ಈಶ್ವರಾನಂದ ಶ್ರೀ ಕರೆ

“ಆರೋಗ್ಯ ಇಲಾಖೆಯಿಂದ ವಿಶೇಷಚೇತನರಿಗೆ ಒದಗಿಸುತ್ತಿರುವ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದ ವೇಳೆ ಅಂಗವಿಕಲತೆ ಹೋಗಲಾಡಿಸುವಲ್ಲಿ ಆರೋಗ್ಯ ಇಲಾಖೆಯ ಪಾತ್ರ ತುಂಬಾ ಮಹತ್ವದ್ದಾಗಿದೆ. ತಪಾಸಣೆ ಆರಂಭದಲ್ಲಿಯೇ ಅನಾರೋಗ್ಯದ ತೊಂದರೆಗಳನ್ನು ಪತ್ತೆಹಚ್ಚಿ ಸರಿಯಾದ ಸಮಯಕ್ಕೆ ಔಷದೋಪಚಾರ ಚಿಕಿತ್ಸೆ ನೀಡುವುದು ಮುಖ್ಯವಾಗುತ್ತದೆ. ವಿಶೇಷಚೇತನರ ಆರೋಗ್ಯದ ಬಗ್ಗೆ ಆರೋಗ್ಯ ಅಧಿಕಾರಿಗಳು ಹೆಚ್ಚಿನ ಕಾಳಜಿ ವಹಿಸಬೇಕು” ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಉಪಕಾರ್ಯದರ್ಶಿ ಪಿ ಲಕ್ಷ್ಮಿ, ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬೇಳೂರು ಗ್ರಾಪಂ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ಧಾಳಿ

ಕಟ್ಟಡ ಪರವಾನಿಗೆ ನೀಡುವಲ್ಲಿ ವಿಳಂಬ ಹಾಗೂ ಪಂಚಾಯತ್ ಆಡಳಿತಕ್ಕೆ ಸಂಬಂಧಿಸಿದ ವಿವಿಧ...

ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಹತ್ತು ಹೊಸ ಯೋಜನೆಗಳ ಘೋಷಣೆ

ಕಲ್ಯಾಣ ಕರ್ನಾಟಕ ವಿಮೋಚನಾ ದಿನದ ಅಂಗವಾಗಿ ಸಿಎಂ‌ ಡಿ ಕೆ ಶಿವಕುಮಾರ್...

ಭಟ್ಕಳ | ಗಣಪತಿ ವಿಸರ್ಜನೆ ವೇಳೆ ಮಸೀದಿ ಕಿಟಕಿ ಗಾಜು ಒಡೆದು, ಗೊಜ್ಜು ತೂರಾಟ ಆರೋಪ: ದೂರು–ಪ್ರತಿದೂರು ದಾಖಲು

ಭಟ್ಕಳದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಮಸೀದಿಯ ಕಿಟಕಿ ಗಾಜನ್ನು ಕಲ್ಲಿನಿಂದ...