ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸವಿತಾ ಮಹರ್ಷಿ ಜಯಂತಿ ಆಚರಣೆ ಕಾರ್ಯಕ್ರಮ ಚಾಮರಾಜನಗರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನಡೆಯಿತು.
ಸರಳವಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, “ಸವಿತಾ ಮಹರ್ಷಿಗಳು ಸಂಗೀತ, ವೇದಗಳಲ್ಲಿ ಅಪಾರ ಜ್ಞಾನ ಹೊಂದಿದ್ದರು. ಸಂಗೀತಾ ಶಾಸ್ತ್ರಕ್ಕೆ ಸಂಬಂಧಿಸಿದ ಸಾಮ ವೇದವನ್ನು ಸವಿತಾ ಮಹರ್ಷಿಗಳು ರಚನೆ ಮಾಡಿದ್ದಾರೆ. ಆರಂಭದಲ್ಲಿ ವೈದ್ಯ ವೃತ್ತಿ ಮಾಡುತ್ತಿದ್ದ ಸವಿತಾ ಮಹರ್ಷಿಗಳು ನಂತರದ ದಿನಗಳಲ್ಲಿ ಸಮಾಜ ಸುಧಾರಣೆಯ ಕೆಲಸದಲ್ಲಿ ತೊಡಗಿಸಿಕೊಂಡಿದ್ದರು. ಅವರ ಜೀವನಾದರ್ಶಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು” ಎಂದರು.

“ಸಮಾಜದ ಅಭಿವೃದ್ದಿಗೆ ಡಾ ಬಿ ಆರ್ ಅಂಬೇಡ್ಕರ್ ಅವರು ಹೇಳಿರುವಂತೆ ಶಿಕ್ಷಣವೇ ಅಸ್ತ್ರವಾಗಿದೆ. ಶಿಕ್ಷಣದಿಂದ ಹಲವು ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಸಮಾಜದ ಸತ್ಪ್ರಜೆಗಳನ್ನಾಗಿ ಮಾಡಬೇಕು” ಎಂದು ಸಲಹೆ ನೀಡಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ರೈತ ಸಾಲಗಾರನಲ್ಲ; ಸರ್ಕಾರವೇ ರೈತನಿಗೆ ಬಾಕಿದಾರ: ವಿಶ್ವ ರೈತಚೇತನ ಪ್ರೊ. ಎಂಡಿಎನ್ ನೆನಪು
ಡಿವೈಎಸ್ಪಿ ಲಕ್ಷ್ಮಯ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉದಯ್ ಕುಮಾರ್, ಸವಿತಾ ಸಮಾಜದ ಮುಖಂಡರು, ವಿವಿಧ ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಅಧಿಕಾರಿಗಳು ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಇದ್ದರು.
