ಚಾಮರಾಜ ನಗರ | ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಸೂಚನೆ

Date:

Advertisements

ಚಾಮರಾಜ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅನುಷ್ಠಾನಗೊಳಿಸುತ್ತಿರುವ ಅಪೌಷ್ಟಿಕತೆ ನಿವಾರಣೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಒನ್‍ಸ್ಟಾಪ್ ಸೆಂಟರ್ ಸಖಿ ಕೇಂದ್ರ, ಸ್ತ್ರೀಶಕ್ತಿ ಯೋಜನೆ, ಸಾಂತ್ವನ ಹಾಗೂ ಸ್ವಾಧಾರ ಗೃಹ ಯೋಜನೆ ಸಮಿತಿಗಳ ಏಕೀಕೃತ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ನೇತೃತ್ವದಲ್ಲಿ ನಡೆಯಿತು.

ಅಂಗನವಾಡಿ ಮಕ್ಕಳಿಗೆ ಹಾಲು, ಮೊಟ್ಟೆ, ಸಿರಿಧಾನ್ಯಯುಕ್ತ ಚೆಕ್ಕಿ, ಕಡ್ಲೇಕಾಳು (ನ್ಯೂಟ್ರೀಷಿಯನ್ ಫುಡ್) ಆಹಾರಗಳನ್ನು ಸಮರ್ಪಕವಾಗಿ ಪೂರೈಸಿ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ತೀವ್ರ ಅಪೌಷ್ಟಿಕತೆಯಿಂದ ಕೂಡಿರುವ 63 ಹಾಗೂ ಸಾಧಾರಣ ಕಡಿಮೆ ತೂಕದ 948 ಮಕ್ಕಳು ಸೇರಿದಂತೆ ಒಟ್ಟು 1011 ಮಕ್ಕಳ ಅಪೌಷ್ಟಿಕತೆಯಿಂದ ಕೂಡಿದ್ದಾರೆ. ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಜಿಲ್ಲೆಯಲ್ಲಿ 5 ಶಿಶು ಅಭಿವೃದ್ಧಿ ಯೋಜನೆಗಳು ಕಾರ್ಯ ನಿರ್ವಹಿಸುತ್ತಿದ್ದು, ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಗ್ರೋಥ್ ಚಾರ್ಟ್ ಮೆನು ಪ್ರಕಾರವೇ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಸಮರ್ಪಕವಾಗಿ ವಿತರಿಸಬೇಕು. ಪ್ರತಿ ತಿಂಗಳು ಮಕ್ಕಳ ತೂಕವನ್ನು ಪರಿಶೀಲಿಸಿ ಅಪೌಷ್ಟಿಕತೆಯಿಂದ ಹೊರಬರುವ ಮಕ್ಕಳ ಪಟ್ಟಿಮಾಡಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದರು.

Advertisements

ಚಾಮರಾಜನಗರ ತಾಲೂಕಿನ ಕಾಡಂಚಿನ ಹಾಗೂ ಹನೂರು ಮತ್ತು ಕೊಳ್ಳೇಗಾಲ ತಾಲೂಕಿನ ಗಿರಿಜನ ಹಾಡಿ ಪ್ರದೇಶಗಳ ಕೆಲ ಅಂಗನವಾಡಿಗಳಿಗೆ ಪೌಷ್ಟಿಕ ಆಹಾರ ಸಮರ್ಪಕವಾಗಿ ಪೂರೈಕೆಯಾಗದಿರುವುದು ಕಂಡುಬಂದಿದೆ. ಈ ನಿಟ್ಟಿನಲ್ಲಿ ಎಲ್ಲಾ ತಾಲೂಕುಮಟ್ಟದ ಅಧಿಕಾರಿಗಳು ಅಂಗನವಾಡಿಗಳಿಗೆ ಖುದ್ದು ಭೇಟಿ ನೀಡಿ ತಪಾಸಣೆ ನಡೆಸಬೇಕು. ಮಕ್ಕಳ ಹಾಜರಾತಿ ಪರಿಶೀಲಿಸಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಮಕ್ಕಳ ಆರೋಗ್ಯ ತಪಾಸಣೆ ನಡೆಸಬೇಕು. ಈ ಸಂಬಂಧ ತಾಲೂಕು ಆರೋಗ್ಯಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

WhatsApp Image 2024 11 14 at 10.41.56 AM

ಅಂಗನವಾಡಿಗಳಲ್ಲಿ ಕುಡಿಯುವ ನೀರು, ಶೌಚಾಲಯ, ಕಟ್ಟಡ ಸುತ್ತುಗೋಡೆ, ಸ್ವಚ್ಚತೆ, ವಿದ್ಯುತ್ ವ್ಯವಸ್ಥೆ ಸಮರ್ಪಕವಾಗಿರಬೇಕು. ಅಂಗನವಾಡಿ ಕಟ್ಟಡಕ್ಕೆ ನಿವೇಶನ ಅವಶ್ಯವಿದ್ದಲ್ಲಿ ಊರಾಚೆ ಹೊರತುಪಡಿಸಿ ಊರಿನ ಮಧ್ಯಭಾಗದಲ್ಲಿ ಸೂಕ್ತಸ್ಥಳ ನೀಡಲಾಗುವುದು. ಯಾವುದೇ ವಿದ್ಯಾರ್ಥಿನಿಲಯಗಳಿಗೂ ಊರಿನ ಮಧ್ಯಭಾಗದಲ್ಲಿಯೇ ನಿವೇಶನ ನೀಡುವಂತೆ ಸೂಚಿಸಲಾಗಿದೆ. ಶಿಥಿಲ ಅಂಗನವಾಡಿ ಕಟ್ಟಡಗಳನ್ನು ಪರಿಶೀಲಿಸಬೇಕು. ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದರು.

ಅಂದಾಜು ಪಟ್ಟಿಯಲ್ಲಿ ಏನೇನು ಸೌಲಭ್ಯಗಳ ಪಟ್ಟಿ ಮಾಡಲಾಗಿದೆಯೋ ಅದೆಲ್ಲವೂ ತ್ವರಿತವಾಗಿ ಆಗುವಂತೆ ನೋಡಿಕೊಳ್ಳಬೇಕು, ವಿದ್ಯುತ್ ಶುಲ್ಕ ಪಾವತಿಸದ ಕೆಲ ಅಂಗನವಾಡಿಗಳಲ್ಲಿ ವಿದ್ಯುತ್ ಕಡಿತಗೊಳಿಸಿರುವ ಸೆಸ್ಕಾಂ ಅಧಿಕಾರಿಗಳ ಬಗ್ಗೆ ಕಾರ್ಯವೈಖರಿಯನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿಯವರು ಜಿಲ್ಲೆಯಲ್ಲಿ ಈಗಾಗಲೇ ಕೆಲ ಆಶ್ರಮ ಶಾಲೆಗಳಿಗೆ ಉಚಿತ ವಿದ್ಯುತ್ ಪೂರೈಕೆಗೆ ಸರ್ಕಾರ ಸುತ್ತೋಲೆ ಹೊರಡಿಸಿದೆ. ಅದೇ ಮಾದರಿಯಲ್ಲಿ ಅಂಗನವಾಡಿಗಳಿಗೂ ಉಚಿತ ವಿದ್ಯುತ್ ನೀಡಬೇಕು ಎಂದು ತಿಳಿಸಿದರು.

ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ್ ಮಾತನಾಡಿ, ಅಧಿಕಾರಿಗಳು ನಗರ ಪ್ರದೇಶಗಳಲ್ಲಿರುವ ಅಂಗನವಾಡಿಗಳನ್ನು ಮಾತ್ರ ನೋಡಿಕೊಳ್ಳುವುದಲ್ಲ. ಗ್ರಾಮೀಣ ಭಾಗದ ಹಾಗೂ ಆದಿವಾಸಿ ಪ್ರದೇಶಗಳಲ್ಲಿರುವ ಅಂಗನವಾಡಿಗಳಿಗೆ ಭೇಟಿ ನೀಡಿ ಅಲ್ಲಿ ಮೂಲಸೌಲಭ್ಯ ವ್ಯವಸ್ಥೆಗಳನ್ನು ಪರಿಶೀಲಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಮಾತನಾಡಿ, ಅಂಗನವಾಡಿಗಳಿಗೆ ಪರಿಶೀಲನೆಗಾಗಿ ಭೇಟಿ ನೀಡಿದ ಸಂದರ್ಭದಲ್ಲಿ ಮಕ್ಕಳು ಹಲ್ಲುಜ್ಜದೆ ಇರುವುದು, ಉಗುರು ಕತ್ತರಿಸದೇ ಕೊಳೆ ತುಂಬಿರುವುದು ಕಂಡುಬಂದಿದ್ದು, ಅಂಗನವಾಡಿ ಶಿಕ್ಷಕರು ಮಕ್ಕಳಿಗೆ ಈ ಬಗ್ಗೆ ತಿಳಿ ಹೇಳಬೇಕು. ಸ್ವಚ್ಚತೆ ಬಗ್ಗೆ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಬಾಲ್ಯವಿವಾಹ ನಿಷೇಧ ಕಾಯ್ದೆ ಬಗ್ಗೆ ಪ್ರಗತಿ ಪರಿಶೀಲಿಸಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು, ಪ್ರಸಕ್ತ ಸಾಲಿನಲ್ಲಿ ಇದುವರೆಗೆ ಜಿಲ್ಲೆಯಲ್ಲಿ 78 ಬಾಲ್ಯವಿವಾಹ ಪ್ರಕರಣಗಳನ್ನು ತಡೆಹಿಡಿಯಲಾಗಿದ್ದು, ಇದು ಇನ್ನೂ ಹೆಚ್ಚಿನ ಪರಿಣಾಮಕಾರಿಯಾಗಬೇಕು. ಪಂಚಾಯಿತಿ ಮಟ್ಟದಲ್ಲಿ ಕಾವಲು ಪಡೆಯನ್ನು ಚುರುಕುಗೊಳಿಸಬೇಕು. ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯಿತಿಯಾಗಿ ಘೋಷಿಸಲು ಅರಿವು ಕಾರ್ಯಕ್ರಮಗಳನ್ನು ತೀವ್ರಗೊಳಿಸಬೇಕು. ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಆಶಾ ಕಾರ್ಯಕತೆಯರು ಸೇರಿದಂತೆ 13 ಜನರನ್ನೊಳಗೊಂಡ ಸಮಿತಿ ರಚಿಸಬೇಕು ಎಂದು ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ಮನವರಿಕೆ ಮಾಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಮಂಜುನಾಥ್, ಶಾಲಾ ಮತ್ತು ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಚಲುವರಾಜು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಿಂದ್ಯಾ, ಲೀಡ್ ಬ್ಯಾಂಕ್ ವ್ಯವಸ್ಥಾಪಕಿ ಸುರೇಖಾ, ಎಲ್ಲಾ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಮಹಿಳಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷರು, ಪದಾಧಿಕಾರಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X