ಚಾಮರಾಜನಗರ | ವನ್ಯಜೀವಿ, ಜಾನುವಾರುಗಳ ಹತ್ಯೆ ತಡೆಗೆ ಮುಂಜಾಗೃತ ಕ್ರಮ ವಹಿಸಿ : ಸಚಿವ ಕೆ. ವೆಂಕಟೇಶ್

Date:

ಇತ್ತೀಚೆಗೆ ಮಲೈ ಮಹದೆಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವಲಯದಲ್ಲಿ ಸಂಭವಿಸಿದ ಹುಲಿಗಳ ಅಸಹಜ ಸಾವು ಹಾಗೂ ಗುಂಡ್ಲುಪೇಟೆ ವಲಯದ ಕಂದೇಗಾಲ ಭಾಗದಲ್ಲಿ ಕೋತಿಗಳ ಮರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲೆ, ಹನೂರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿಗಳು, ಅರಣ್ಯ ಅಧಿಕಾರಿಗಳೊಂದಿಗೆ ಜಿಲ್ಲಾ ಉಸ್ತುವಾರಿ ಹಾಗೂ ಪಶುಸಂಗೋಪನೆ, ರೇಷ್ಮೆ ಸಚಿವ ಕೆ. ವೆಂಕಟೇಶ್ ಸಭೆ ನಡೆಸಿ ವನ್ಯಜೀವಿ, ಜಾನುವಾರುಗಳ ಹತ್ಯೆ ತಡೆಗೆ ಮುಂಜಾಗೃತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

- Advertisement -

ಹುಲಿಗಳ ಸಾವಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಕೇಂದ್ರ ಹಾಗೂ ರಾಜ್ಯ ಮಟ್ಟದ ಅಧಿಕಾರಿಗಳ ತನಿಖಾ ತಂಡದ ಬಗ್ಗೆ ಪೂರ್ಣ ಮಾಹಿತಿ ಪಡೆದುಕೊಂಡು, ತನಿಖೆಯು ಯಾವ ಹಂತದಲ್ಲಿದೆ ಎಂಬ ಬಗ್ಗೆಯು ಅರಣ್ಯ ಅಧಿಕಾರಿಗಳಿಂದ ಜಿಲ್ಲಾ ಉಸ್ತುವಾರಿ ಸಚಿವರು ವಿವರ ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಅರಣ್ಯದಂಚಿನ ಗ್ರಾಮಗಳಲ್ಲಿ ಜಾನುವಾರುಗಳ ಸಂರಕ್ಷಣೆಗೆ ಅರಣ್ಯ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು. ವನ್ಯಜೀವಿಗಳು ಆಹಾರ ಅರಸಿ ಗ್ರಾಮಗಳಿಗೆ ಬರದಂತೆ ಅರಣ್ಯದಲ್ಲೇ ಸೂಕ್ತ ಆಹಾರ, ನೀರು ಒದಗಿಸುವ ಕಾರ್ಯವನ್ನು ತುರ್ತಾಗಿ ಮಾಡಬೇಕು. ಜಾನುವಾರುಗಳಿಗೆ ಕಾಡು ಸಮೀಪದ ಗ್ರಾಮಗಳಲ್ಲೇ ನರೇಗಾ ಯೋಜನೆಯಡಿ ಮೇವು ಬೆಳೆಸಿ, ಕೆರೆಗಳನ್ನು ನಿರ್ಮಿಸಿ ಅನುಕೂಲ ಮಾಡಿಕೊಡಬೇಕು. ಸ್ಥಳೀಯ ಭಾಗದ ಜಾನುವಾರುಗಳಿಗೆ ಮೇವು ನೀರು ಕೊರತೆಯಾಗಬಾರದು ಎಂದು ನಿರ್ದೇಶನ ನೀಡಿದರು.

ಅರಣ್ಯ ಹಾಗೂ ಕಾಡಂಚಿನ ಗ್ರಾಮಗಳಲ್ಲಿ ಗಸ್ತು ಹೆಚ್ಚಿಸಬೇಕು. ರಾತ್ರಿಯ ವೇಳೆಯಲ್ಲೂ ವಿಶೇಷ ಗಸ್ತು ವ್ಯವಸ್ಥೆ ಇರಬೇಕು. ವಾಚರ್‍ ಗಳು ಇನ್ನಿತರ ಅರಣ್ಯ ಸಿಬ್ಬಂದಿಯನ್ನು ನಿಯೋಜಿಸಿ, ಅರಣ್ಯ ಅಧಿಕಾರಿಗಳು ಮೇಲುಸ್ತುವಾರಿ ಮಾಡಿದರೆ ಪ್ರಾಣಿಗಳ ಉಪಟಳ ತಪ್ಪಿಸಬಹುದಾಗಿದೆ. ವನ್ಯಜೀವಿಗಳು ಜಾನುವಾರು ಮೇಲೆ ದಾಳಿ ಮಾಡಿದಾಗ ರೈತರನ್ನು, ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಾಂತ್ವನ ಹೇಳಬೇಕು. ಜಾನುವಾರುಗಳ ರಕ್ಷಣೆಗೆ ಶೀಘ್ರ ಸ್ಪಂದಿಸಿ ಮಾಹಿತಿ ತಿಳಿವಳಿಕೆ ನೀಡಬೇಕಿದೆ ಎಂದರು.

ಮಲೈ ಮಹದೇಶ್ವರ ವನ್ಯಜೀವಿ ವಿಭಾಗದ ಹೊರಗುತ್ತಿಗೆ ವಾಚರ್ ಸಿಬ್ಬಂದಿಗೆ ಸಕಾಲದಲ್ಲಿ ವೇತನ ಪಾವತಿಸುವುದು ಸಂಬಂಧಪಟ್ಟ ಅರಣ್ಯ ಇಲಾಖೆಯ ಅಧಿಕಾರಿಗಳ ಮುಖ್ಯ ಜವಾಬ್ದಾರಿಯಾಗಿದೆ. ಈ ವಿಷಯದಲ್ಲಿ ನಿರ್ಲಕ್ಷ್ಯ ವಹಿಸದೆ ಉನ್ನತ ಮಟ್ಟದ ಅಧಿಕಾರಿಗಳ ಗಮನಕ್ಕೆ ತಂದು ಪರಿಹರಿಸಬೇಕು. ಅರಣ್ಯ ಇಲಾಖೆ ವಿಶೇಷವಾಗಿ ಕಾಡಂಚಿನ ಭಾಗಗಳ ಪ್ರಾಣಿಗಳು, ಜನ ಜಾನುವಾರುಗಳಿಗೆ ಸೂಕ್ತ ರಕ್ಷಣೆ, ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಅಗತ್ಯವಿರುವ ಅನುದಾನದ ನೆರವು ಮಂಜೂರು ಮಾಡಿಸಲು ಕ್ರಮ ತೆಗೆದುಕೊಳ್ಳಲಾಗುವುದೆಂದು ತಿಳಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಮೈಸೂರು | ಉತ್ತಮ ಆರೋಗ್ಯಕ್ಕೆ ಉಳಿದಿರುವ ದಾರಿ ಒಂದೇ; ಅದುವೇ ರಾಸಾಯನಿಕ ಮುಕ್ತ ಕೃಷಿ

ಶಾಸಕ ಎಂ.ಆರ್. ಮಂಜುನಾಥ್, ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಮಾಜಿ ಶಾಸಕ ಆರ್. ನರೇಂದ್ರ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೆಚ್ಚುವರಿ ಪ್ರಭಾರದಲ್ಲಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಸಂತೊಷ್ ಕುಮಾರ್, ಬಂಡೀಪುರ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರ್, ಕಾವೇರಿ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸುರೇಂದ್ರ, ಹನೂರು ವಲಯದ ಪ್ರೊಬೆಷನರಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಉಮಾಪತಿ, ಹೆಚ್ಚುವರಿ ಪ್ರಭಾರದಲ್ಲಿರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸ್ವಪ್ನಿಲ್, ತಹಶೀಲ್ದಾರ್ ಗುರುಪ್ರಸಾದ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಬಸ್, ಬೈಕ್ ಡಿಕ್ಕಿ: ಬೈಕ್ ಹಿಂಬದಿ ಸವಾರ ಸಾವು

ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ...

ಕಲಬುರಗಿ | ಗಾಂಜಾ ಮಾರಾಟ; ಮೂವರು ಬಂಧನ, ₹7,500 ಮೌಲ್ಯದ ವಸ್ತು ವಶ

ಕಲಬುರಗಿ ನಗರದ ರೋಜಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ...

ಕಲಬುರಗಿ | ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶವ ಪತ್ತೆ; ಕೊಲೆ ಶಂಕೆ

ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯೊಬ್ಬರ ಮೃತದೇಹ...