ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ತಾಯಿಯನ್ನು ರಕ್ಷಿಸಲು ಹೋದ ಮಕ್ಕಳು ಸೇರಿದಂತೆ ಒಂದೇ ಮನೆಯ ಮೂವರು ನೀರು ಪಾಲಾಗಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗೋಪಿನಾಥಂ ಗ್ರಾಮ ಪಂಚಾಯಿತಿಯ ಪುದೂರು ಗ್ರಾಮದ ನಿವಾಸಿ ಮೀನಾ (33), ಪವಿತ್ರ (13), ಕೀರ್ತಿ(12) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ತುಮಕೂರು | ಬಾಬು ಜಗಜೀವನರಾಂ ರವರ ತತ್ವಾದರ್ಶಗಳನ್ನು ಎಲ್ಲರೂ ಪಾಲಿಸಬೇಕು: ಜಿಲ್ಲಾಧಿಕಾರಿ
ಜಲಾಶಯದ ಬಳಿ ಬಟ್ಟೆ ತೊಳೆಯಲು ಹೋದಾಗ ಕಾಲು ಜಾರಿ ತಾಯಿ ನೀರಿಗೆ ಬಿದ್ದಿದ್ದು, ಕೊಚ್ಚಿ ಹೋಗುತ್ತಿದ್ದ ತಾಯಿಯನ್ನು ರಕ್ಷಿಸಲೆಂದು ಇಬ್ಬರು ಮಕ್ಕಳು ನೀರಿಗೆ ಹಾರಿದ್ದಾರೆ. ಆದರೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರೂ ಪ್ರಾಣ ಕಳೆದುಕೊಂಡಿದ್ದಾರೆ.
ಮೂವರನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
