ಚಾಮರಾಜನಗರ | ಸುವರ್ಣಾವತಿ ಜಲಾಶಯದಲ್ಲಿ ಟ್ರಯಲ್ ಬೋಟಿಂಗ್

Date:

ಸುವರ್ಣಾವತಿ ಜಲಾಶಯದಲ್ಲಿ ಬೋಟಿಂಗ್ ಮತ್ತು ಇತರೆ ಜಲಕ್ರೀಡೆಗಳನ್ನು ಶಾಶ್ವತ ವೈಶಿಷ್ಟ್ಯವನ್ನಾಗಿ ಮಾಡಬೇಕೆಂಬ ಬೇಡಿಕೆ ಚಾಮರಾಜನಗರ ಜಿಲ್ಲೆಯಲ್ಲಿ ಜೋರಾಗಿದ್ದು, ಸಾಹಸ ಚಟುವಟಿಕೆಗಳನ್ನು ಪರಿಚಯಿಸುವ ಪ್ರಯೋಗವು ಈ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಆಕರ್ಷಿಸುತ್ತಿದೆ.

- Advertisement -

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಚಾಮರಾಜನಗರ ಜಿಲ್ಲಾಡಳಿತದ ಸಂಯುಕ್ತಾಶ್ರಯದಲ್ಲಿ ಸುವರ್ಣಾವತಿ ಜಲಾಶಯದಲ್ಲಿ ಪ್ರಾಯೋಗಿಕವಾಗಿ ಬೋಟಿಂಗ್ ಸೇವೆ ಆರಂಭಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂವಿತಾ, ಅಪರ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕಿ ಅನಿತಾ ಸೇರಿದಂತೆ ನೂರಾರು ಪ್ರವಾಸಿಗರು, ವಿವಿಧ ಕ್ಷೇತ್ರಗಳ ಜನರು ಪ್ರವಾಸಿಗರೊಂದಿಗೆ ಅಕ್ವಾ ಸಾಹಸಗಳ ಕ್ರೀಡೆಯನ್ನು ಆನಂದಿಸಿದರು. ಅವರು ರಾಫ್ಟಿಂಗ್, ಜೆಟ್ ಸ್ಕೀಯಿಂಗ್, ಸ್ಪೀಡ್ ಬೋಟಿಂಗ್, ಬನಾನಾ ರೈಡಿಂಗ್, ಬಂಪರ್ ರೈಡಿಂಗ್, ಕಯಾಕಿಂಗ್ ಮತ್ತು ಬೋಟಿಂಗ್‌ನಂತಹ ಸಾಹಸ ಕ್ರೀಡೆಗಳನ್ನು ಆನಂದಿಸಿದರು. ಪೆಡಲಿಂಗ್ ಮತ್ತು ರೋಯಿಂಗ್ ಬೋಟ್ ಸೇವೆಗಳು ಹೆಚ್ಚಿನ ಸಂಖ್ಯೆಯ ಪ್ಆರವಾಸಿಗರನ್ನು ಆಕರ್ಷಿಸಿದವು.

ಜಿಲ್ಲಾಡಳಿತ ಆಯೋಜಿಸಿದ್ದ ಜಲ ಮತ್ತು ಸಾಹಸ ಕ್ರೀಡಾ ಚಟುವಟಿಕೆಗಳಿಗೆ ಜಲಕ್ರೀಡೆ ಪ್ರಿಯರಿಂದ ಉತ್ತಮ ಸ್ಪಂದನೆ ದೊರೆತಿದ್ದು, ಮೈಸೂರು ಜಿಲ್ಲಾಡಳಿತ ವರುಣಾ ಕೆರೆಯಲ್ಲಿ ಬೋಟಿಂಗ್ ಸೇವೆಯನ್ನು ಖಾಯಂಗೊಳಿಸಿರುವಂತೆ ಸುವರ್ಣಾವತಿ ಜಲಾಶಯದಲ್ಲಿ ಇದನ್ನು ಖಾಯಂಗೊಳಿಸುವಂತೆ ಪ್ರವಾಸಿಗರು ಮತ್ತು ಸ್ಥಳೀಯರು ಸರ್ಕಾರಿ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

“ಅಂತರಾಜ್ಯ ಕರ್ನಾಟಕ-ತಮಿಳುನಾಡು ಹೆದ್ದಾರಿಯಲ್ಲಿ ಜಿಲ್ಲಾ ಕೇಂದ್ರದಿಂದ 15 ಕಿ.ಮೀ ದೂರದಲ್ಲಿರುವ ಸುವರ್ಣಾವತಿ ಜಲಾಶಯವು ವರ್ಷಪೂರ್ತಿ ದೇಶಾದ್ಯಂತ ಪ್ರವಾಸಿಗರನ್ನು ಆಕರ್ಷಿಸುವುದರಿಂದ, ಸರ್ಕಾರ ಮತ್ತು ಚಾಮರಾಜನಗರ ಜಿಲ್ಲಾಡಳಿತ ಬೋಟಿಂಗ್ ಸೇರಿದಂತೆ ಇತರ ಸಾಹಸ ಚಟುವಟಿಕೆಗಳನ್ನು ಶಾಶ್ವತ ಲಕ್ಷಣವಾಗಿ ಪರಿಚಯಿಸಬೇಕು” ಎಂದು ಪ್ರವಾಸಿ ಯಮುನಾ ಹೇಳಿದರು.

ಜಲಾಶಯವು ಬಿಳಿಗಿರಿ ರಂಗನ ಬೆಟ್ಟ(ಬಿ ಆರ್ ಬೆಟ್ಟ)ಗಳಿಂದ ಸುತ್ತುವರೆದಿದ್ದು, ಹಲವಾರು ಜಾತಿಯ ಪಕ್ಷಿ ಮತ್ತು ಪ್ರಾಣಿಗಳಿಗೆ ನೆಲೆಯಾಗಿದೆ. ಸುವರ್ಣಾವತಿಯ ಹಿನ್ನೀರು ವರ್ಷವಿಡೀ ಪ್ರವಾಸಿಗರನ್ನು ಆಕರ್ಷಿಸುತ್ತದೆ.

ಬೋಟಿಂಗ್ ಕ್ರೀಡೆಯನ್ನು ಶಾಶ್ವತ ಲಕ್ಷಣವಾಗಿ ಪರಿಚಯಿಸುವುದರಿಂದ ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸುತ್ತದೆ ಎಂದು ಪ್ರವಾಸಿಗರೊಬ್ಬರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೋಲಾರ | ಅವಸಾನದ ಅಂಚಿನಲ್ಲಿರುವ ಯುರೋಪಿಯನ್ನರ ಸ್ಮಶಾನ

“ಪ್ರವಾಸೋದ್ಯಮ ಇಲಾಖೆ, ಕಾವೇರಿ ನೀರಾವರಿ ನಿಗಮ ನಿಯಮಿತದ ಅಧಿಕಾರಿಗಳೊಂದಿಗೆ ಚರ್ಚಿಸಿ ಬೋಟಿಂಗ್ ಕ್ರೀಡೆಯನ್ನು ಖಾಯಂ ಆಗಿ ಪ್ರಾರಂಭಿಸಲಾಗುವುದು. ಪ್ರವಾಸಿಗರನ್ನು ಆಕರ್ಷಿಸಲು ಇಂತಹ ಸೇವೆಗಳನ್ನು ಪರಿಚಯಿಸಲು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಇತರ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗುವುದು” ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕಿ ಅನಿತಾ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಫಾರಂ-7 ಅರ್ಜಿಗಳ ದುರುಪಯೋಗಕ್ಕೆ ಕಡಿವಾಣ ಹಾಕಿ: ಕಥೊಲಿಕ್ ಸಭಾ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಫಾರಂ-7 ಅರ್ಜಿಗಳ ದುರುಪಯೋಗ...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...

ಕೋಲಾರ | ಪಶು ವೈದ್ಯರ ಖಾಲಿ ಹುದ್ದೆ ಭರ್ತಿಗೆ ರೈತಸಂಘ ಆಗ್ರಹ

ಪಶು ಇಲಾಖೆಯಲ್ಲಿ ಖಾಲಿ ಇರುವ ಪಶು ವೈದ್ಯರ ಹುದ್ದೆಗಳನ್ನು ತಕ್ಷಣ ಭರ್ತಿ...

‘ಸಮಸ್ತ’ ಆ್ಯಪ್ ಸಮಸ್ಯೆ ಪರಿಹರಿಸಿ, ಗೃಹಲಕ್ಷ್ಮಿ ಹೆಚ್ಚುವರಿ ಕೆಲಸ ಕೈಬಿಡಿ: ಆಶಾ ಕಾರ್ಯಕರ್ತೆಯರ ಆಗ್ರಹ

‘ಸಮಸ್ತ’ ಆ್ಯಪ್‌ನಲ್ಲಿ ಎದುರಾಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ತಕ್ಷಣ ಪರಿಹರಿಸಬೇಕು, ಗೃಹಲಕ್ಷ್ಮಿ ಯೋಜನೆಯ...