ಚಾಮರಾಜನಗರ | ಗ್ರಾಮ ಪಂ. ಕಚೇರಿ ಗೋಡೆಗೆ ‘ಡೆತ್‌ ನೋಟ್‌’ ಅಂಟಿಸಿ ನೀರುಗಂಟಿ ಆತ್ಮಹತ್ಯೆ

Date:

ಗ್ರಾಮ ಪಂಚಾಯತಿಯಲ್ಲಿ ಸರಿಯಾದ ಸಮಯಕ್ಕೆ ವೇತನ ನೀಡುತ್ತಿಲ್ಲವೆಂದು ಮನನೊಂದಿದ್ದ ನೀರುಗಂಟಿಯೊಬ್ಬರು ಪಂಚಾಯತಿ ಕಚೇರಿ ಕಟ್ಟಡದ ಗೋಡೆಗೆ ‘ಡೆತ್‌ ನೋಟ್‌’ ಅಂಟಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಚಾಮರಾಜನಗರ ಜಿಲ್ಲೆಯ ಹೊಂಗನೂರಿನಲ್ಲಿ ನಡೆದಿದೆ.

- Advertisement -

ಹೊಂಗನೂರು ಗ್ರಾಮ ಪಂಚಾಯತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ಚಿಕ್ಕೂಸ ನಾಯಕ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಂಚಾಯತಿ ಕಟ್ಟಡದ ಕಿಟಕಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಡೆತ್‌ ನೋಟ್‌ನಲ್ಲಿ, “ನಾನು ಹಲವು ವರ್ಷಗಳಿಂದ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದೇನೆ. ಕೆಲಸಕ್ಕೆ ತಕ್ಕಂತೆ ವೇತನ ಕೊಡುತ್ತಿಲ್ಲ. ವೇತನ ಪಾವತಿಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಪಿಡಿಒ ವಿಳಂಬ ಮಾಡುತ್ತಲೇ ಬಂದಿದ್ದಾರೆ. ನನಗೆ 27 ತಿಂಗಳುಗಳಿಂದ ವೇತನ ನೀಡಲಾಗಿಲ್ಲ” ಎಂದು ಆರೋಪಿಸಿದ್ದಾರೆ.

“ನಾನು ಅನಾರೋಗ್ಯಕ್ಕೆ ತುತ್ತಾಗಿದ್ದರಿಂದ, ಕೆಲಸ ತೊರೆಯಲು ನಿರ್ಧರಿಸಿದ್ದೆ. ಆದ್ದರಿಂದ, ನನಗೆ ಪಾವತಿ ಮಾಡಬೇಕಿದ್ದ 27 ತಿಂಗಳ ವೇತನವನ್ನು ನೀಡುವಂತೆ ಪಿಡಿಒ ಅವರನ್ನು ಕೇಳಿಕೊಂಡಿದ್ದೆ. ಆದರೆ, ಅವರು ನನ್ನ ಮನವಿ ಸ್ಪಂದಿಸಲಿಲ್ಲ. ಈ ಬಗ್ಗೆ ಜಿಲ್ಲಾ ಪಂಚಾಯತಿ ಸಿಇಒಗೆ ಪತ್ರ ಬರೆದರೂ ಯಾವುದೇ ಉಪಯೋಗವಾಗಿಲಿಲ್ಲ” ಎಂದು ಡೆತ್‌ ನೋಟ್‌ನಲ್ಲಿ ಆರೋಪಿಸಿದ್ದಾರೆ.

ಚಾಮರಾಜನಗರ ಪೂರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಡೆತ್‌ ನೋಟ್‌ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ತನಿಖೆ ಆರಂಭಿಸಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...