ಚಾಮರಾಜನಗರ | ವೇತನ ಪಾವತಿಸದ್ದಕ್ಕೆ ವಾಟರ್‌ಮೆನ್‌ ಆತ್ಮಹತ್ಯೆ; ಗ್ರಾಮ ಪಂ. PDO ಅಮಾನತು

Date:

27 ತಿಂಗಳಿನಿಂದ ವಾತನ ಪಾವತಿ ಮಾಡಿಲ್ಲವೆಂದು ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಪಿಡಿಒ ವಿರುದ್ಧ ಆರೋಪ ಮಾಡಿ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮ ಪಂಚಾಯತಿಯ ನೀರುಗಂಟಿ ಚಿಕ್ಕುಸ ನಾಯಕ ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಪ್ರಕರಣದಲ್ಲಿ ಪಂಚಾಯತಿಯ ಪಡಿಒ ರಾಮೇಗೌಡ ಕೆ.ಎನ್ ಅವರನ್ನು ಅಮಾನತು ಮಾಡಲಾಗಿದೆ. ಜಿಲ್ಲಾ ಪಂಚಾಯಿತಿ ಸಿಇಒಮೋನಾ ರೋತ್ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

- Advertisement -

ಹೊಂಗನೂರು ಗ್ರಾಮ ಪಂಚಾಯತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ಚಿಕ್ಕೂಸ ನಾಯಕ ಅವರು ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಂಚಾಯತಿ ಕಟ್ಟಡದ ಕಿಟಕಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಗಾಡ್ಗೀಳ್‌, ಕಸ್ತೂರಿ ರಂಗನ್ ವರದಿಗಳು ಹೇಳುವುದೇನು? ವಿರೋಧವೇಕೆ?

ಪಶ್ಚಿಮ ಘಟ್ಟವನ್ನು ಉಳಿಸಬೇಕೆಂಬ ಪರಿಸರದ ಕೂಗು ಒಂದು ಕಡೆ, ಜನವಸತಿ–ಕೃಷಿ–ಜೀವನೋಪಾಯದ ಆತಂಕ ಮತ್ತೊಂದು ಕಡೆ. ಗಾಡ್ಗೀಳ್‌ನ ಕಠಿಣ ಸಂರಕ್ಷಣಾ ಶಿಫಾರಸುಗಳಿಂದ ಕಸ್ತೂರಿರಂಗನ್ ವರದಿವರೆಗೆ—ಪಶ್ಚಿಮ ಘಟ್ಟದ ಭವಿಷ್ಯವನ್ನು ರೂಪಿಸಿದ ಎರಡು ಪ್ರಮುಖ ವರದಿಗಳು ಏನು...

ವಂದೇ ಮಾತರಂ: ರಾಷ್ಟ್ರಗೌರವದ ಸಂಕೇತವೋ, ಚಿತ್ತ ಚದುರಿಸುವ ರಾಜಕೀಯ...

ಭಾರತದ ಯುವಜನತೆಯಲ್ಲಿ ರಾಹುಲ್ ಗಾಂಧಿಯವರ ವರ್ಚಸ್ಸು ಹೆಚ್ಚುತ್ತಿರುವುದನ್ನು ಗಮನಿಸಿ, ಇದೇ ಸಂಸತ್ ಕಲಾಪದಲ್ಲಿ, "ವಂದೇ ಮಾತರಂ" ವಿಷಯವನ್ನು ಮುನ್ನೆಲೆಗೆ ತಂದು, ಯುವಜನತೆಯ ಗಮನವನ್ನು ಬೇರೆಡೆ ಸೆಳೆಯುವ old trick ಮಾಡಲಾಗಿದೆ ಎಂಬುದು ಈ...

ಮುಂಗಾರು ಹಿನ್ನಡೆ, ಹಿಂಗಾರಿಗೆ ಕಂಟಕ: ದೇಶದಲ್ಲಿ 2027ರವರೆಗೆ ಬರಗಾಲದ ಆತಂಕ!

ಪ್ರಕೃತಿಯ ಏರುಪೇರುಗಳನ್ನು ಎದುರಿಸಲು ಸರ್ಕಾರಗಳು ತಕ್ಷಣದ ಆಪತ್ಕಾಲೀನ ಪರಿಹಾರ ಕ್ರಮಗಳಿಗೆ ಸೀಮಿತವಾಗದೆ, ದೀರ್ಘಕಾಲೀನ ಕಾರ್ಯತಂತ್ರಗಳನ್ನು ರೂಪಿಸುವುದು ಅತ್ಯಗತ್ಯ. ಮಣ್ಣಿನ ತೇವಾಂಶ ಸಂರಕ್ಷಣೆ, ನೀರಾವರಿ ವ್ಯಾಪ್ತಿಯ ವೈಜ್ಞಾನಿಕ ವಿಸ್ತರಣೆ, ಹವಾಮಾನ ಬದಲಾವಣೆಗೆ ಸ್ಥಿತಿಸ್ಥಾಪಕತ್ವ ಹೊಂದಿರುವ(Climate-resilient)...

ಡೆತ್‌ ನೋಟ್‌ನಲ್ಲಿ, “ನಾನು ಹಲವು ವರ್ಷಗಳಿಂದ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದೇನೆ. ಕೆಲಸಕ್ಕೆ ತಕ್ಕಂತೆ ವೇತನ ಕೊಡುತ್ತಿಲ್ಲ. ವೇತನ ಪಾವತಿಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಪಿಡಿಒ ವಿಳಂಬ ಮಾಡುತ್ತಲೇ ಬಂದಿದ್ದಾರೆ. ನನಗೆ 27 ತಿಂಗಳುಗಳಿಂದ ವೇತನ ನೀಡಲಾಗಿಲ್ಲ” ಎಂದು ಆರೋಪಿಸಿದ್ದಾರೆ.

“ನಾನು ಅನಾರೋಗ್ಯಕ್ಕೆ ತುತ್ತಾಗಿದ್ದರಿಂದ, ಕೆಲಸ ತೊರೆಯಲು ನಿರ್ಧರಿಸಿದ್ದೆ. ಆದ್ದರಿಂದ, ನನಗೆ ಪಾವತಿ ಮಾಡಬೇಕಿದ್ದ 27 ತಿಂಗಳ ವೇತನವನ್ನು ನೀಡುವಂತೆ ಪಿಡಿಒ ಅವರನ್ನು ಕೇಳಿಕೊಂಡಿದ್ದೆ. ಆದರೆ, ಅವರು ನನ್ನ ಮನವಿ ಸ್ಪಂದಿಸಲಿಲ್ಲ. ಈ ಬಗ್ಗೆ ಜಿಲ್ಲಾ ಪಂಚಾಯತಿ ಸಿಇಒಗೆ ಪತ್ರ ಬರೆದರೂ ಯಾವುದೇ ಉಪಯೋಗವಾಗಿಲಿಲ್ಲ” ಎಂದು ಡೆತ್‌ ನೋಟ್‌ನಲ್ಲಿ ಆರೋಪಿಸಿದ್ದಾರೆ.

ಚಿಕ್ಕುಸ ನಾಯಕ ಅವರು ದಲಿತ ಸಮುದಾಯಕ್ಕೆ ಸೇರಿದವರಾಗಿದ್ದು, ಆರೋಪಿಗಳ ವಿರುದ್ಧ ಚಾಮರಾಜನಗರ ಪೂರ್ವ ಪೊಲೀಸ್‌ ಠಾಣೆಯಲ್ಲಿ ಬಿಎನ್‌ಎಸ್‌ ಮತ್ತು ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ಡೆಯಡಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನು, ಕರ್ನಾಟಕ ಗ್ರಾಮಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆ-1993 ರ ಸೆಕ್ಷನ್ 111ರ ಅಡಿಯಲ್ಲಿ ಕಡ್ಡಾಯವಾಗಿ ಕರ್ತವ್ಯ ನಿರ್ವಹಿಸುವಲ್ಲಿ ಪಿಡಿಒ ರಾಮೇಗೌಡ ಕೆ.ಎನ್ ವಿಫಲರಾಗಿದ್ದಾರೆ ಎಂದು ಕಂಡುಬಂದಿದ್ದು, ಅವರನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತಿ ಸಿಇಒ ಆದೇಶದಲ್ಲಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ನರಸಾಪುರದಲ್ಲಿ ಸೆ.26ರಂದು ಪ್ರಜಾ ಸೇವೆ ಆಂದೋಲನ

ಒಂದೇ ಸೂರಿನಡಿ ಸಾರ್ವಜನಿಕರ ಅರ್ಜಿ ಹಾಗೂ ಅಹವಾಲುಗಳನ್ನು ಸ್ವೀಕರಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ...

ಕೆಜಿಎಫ್ | ಯುವಜನರ ಧ್ವನಿಗೆ ವೇದಿಕೆಯಾದ ಕೆಜಿಎಫ್‌ನ ಯುವಜನ ಮನ ಸಂಭ್ರಮೋತ್ಸವ

ಯುವಜನರಲ್ಲಿ ಮಾನಸಿಕ ಆರೋಗ್ಯದ ಕುರಿತು ಅರಿವು ಮೂಡಿಸುವುದು, ಸಂವಿಧಾನಿಕ ಮೌಲ್ಯಗಳನ್ನು ಬೆಳೆಸುವುದು...

ಬಾಗೇಪಲ್ಲಿ | ಸೆ.26ರಿಂದ ಪಟ್ಟಣದಲ್ಲಿ ಡಿವೈಎಫ್‍ಐ 13ನೇ ರಾಜ್ಯ ಯುವಜನ ಸಮ್ಮೇಳನ

ಬಾಗೇಪಲ್ಲಿ ಪಟ್ಟಣದಲ್ಲಿ ರಾಜ್ಯಮಟ್ಟದ 13 ನೇ ಯುವಜನ ಸಮ್ಮೇಳನ ತಾಲ್ಲೂಕು ಪಂಚಾಯತಿ...

ವಿಜಯಪುರ | ಜಿಲ್ಲೆಯ 4 ತಾಲೂಕುಗಳು ತೀವ್ರ ಬರಪೀಡಿತ: ಸಚಿವ ಎಂ.ಬಿ ಪಾಟೀಲ

ಕೇಂದ್ರ ಸರಕಾರದ ಬರ ನಿರ್ವಹಣಾ ಮಾನದಂಡಗಳನ್ನು ಆಧರಿಸಿ ವಿಜಯಪುರ ಜಿಲ್ಲೆಯ ಆಲಮೇಲ,...