ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕು ಆಡಳಿತ ಮತ್ತು ಪರಿಶಿಷ್ಟ ವರ್ಗಗಳ ಇಲಾಖೆಯ ಆಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸರಳವಾಗಿ ಆಚರಿಸಿದರು. ತಾಲೂಕು ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕು ದಂಡಾಧಿಕಾರಿಗಳು ಟಿ ರಮೇಶ್ ಬಾಬು ಅವರು ವಾಲ್ಮೀಕಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಇದೇ ವೇಳೆ, “ವೇದಿಕೆಯ ಮೇಲೆ ಮತ್ತು ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಅಗತ್ಯವಾದಷ್ಟು ಕುರ್ಚಿಗಳನ್ನು ಹಾಕದೆ ನಮ್ಮ ಸಮಾಜದ ಮುಖಂಡರಿಗೆ ಅವಮಾನ ಮಾಡಿದ್ದಾರೆ” ಎಂದು ನಾಯಕ ಸಮಾಜದ ಮುಖಂಡರು ತಾಲೂಕು ದಂಡಾಧಿಕಾರಿಗಳ ಎದುರು ಪ್ರತಿಭಟಿಸಿದರು.
ಪೂರ್ವ ತಯಾರಿಯಿಲ್ಲದೆ ವಾಲ್ಮೀಕಿ ಜಯಂತಿ ಆಚರಣೆ ಮಾಡುವ ಮೂಲಕ ನಮ್ಮ ಸಮಾಜವನ್ನು ಅವಮಾನಿಸಿದ್ದಾರೆಂದು ತಾಲೂಕು ದಂಡಾಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಾಲೂಕು ದಂಡಾಧಿಕಾರಿಗಳು ಬಂದು ಕ್ಷಮೆ ಕೇಳಬೇಕು ಎಂದು ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಮಹರ್ಷಿ ವಾಲ್ಮೀಕಿ ಎಲ್ಲರಿಗೂ ಆದರಣೀಯ ಪುರುಷ: ಎಚ್ ಸಿ ಮಹದೇವಪ್ಪ
ಈ ಸಂದರ್ಭದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಪಿ ಗಿರೀಶ್, ಮಾಜಿ ಉಪಾಧ್ಯಕ್ಷ ಸುರೇಶ್, ಪುರಸಭೆ ಸದಸ್ಯ ಕುಮಾರ್, ಶ್ರೀನಿವಾಸ್, ಜಾರಕಿಹೊಳಿ ಬ್ರಿಗೇಡ್ ಸದಸ್ಯ ಗೋವಿಂದ್ರಾಜ್, ಕನ್ನಡಪರ ಸಂಘಟನೆಯ ಮುಖಂಡರು ಹಾಗೂ ಕರವೇ ತಾಲೂಕು ಅಧ್ಯಕ್ಷ ಸುರೇಶ್ ನಾಯಕ್, ನಾಗೇಂದ್ರ, ರಮೇಶ್ ಸೇರಿದಂತೆ ಇತರರು ಇದ್ದರು.