ಚಾಮರಾಜನಗರ | ಆಹಾರ ಸ್ವಾವಲಂಬನೆಗೆ ಬಾಬು ಜಗಜೀವನ ರಾಮ್ ಕೊಡುಗೆ ಸ್ಮರಣೀಯ: ಶ್ರೀರೂಪ

Date:

ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಅವರ 40ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಚಾಮರಾಜನಗರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.

- Advertisement -

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಶ್ರೀರೂಪ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಡಾ. ಬಾಬು ಜಗಜೀವನ ರಾಮ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಜಿಲ್ಲಾಧಿಕಾರಿ ಶ್ರೀರೂಪ ಮಾತನಾಡಿ, ಡಾ. ಬಾಬು ಜಗಜೀವನ ರಾಮ್ ಅವರು ಕೃಷಿ ಸಚಿವರಾಗಿ ಆಧುನಿಕ ತಂತ್ರಜ್ಞಾನವನ್ನು ಕೃಷಿ ಕ್ಷೇತ್ರದಲ್ಲಿ ಅಳವಡಿಸಿ ದೇಶದಲ್ಲಿ ಹಸಿರು ಕ್ರಾಂತಿಗೆ ಮುನ್ನುಡಿ ಬರೆದರು. ಅವರ ದೂರದೃಷ್ಟಿಯ ನಾಯಕತ್ವದಿಂದ ಭಾರತ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವಲ್ಲಿ ಮಹತ್ವದ ಪಾತ್ರ ವಹಿಸಿತು ಎಂದು ಹೇಳಿದರು.

ಕಾರ್ಮಿಕ, ಕೃಷಿ, ರಕ್ಷಣೆ ಸೇರಿದಂತೆ ಹಲವು ಪ್ರಮುಖ ಸಚಿವಾಲಯಗಳನ್ನು ಸಮರ್ಥವಾಗಿ ನಿರ್ವಹಿಸಿದ ಅವರು ದೇಶದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ದೀರ್ಘಕಾಲ ಸಂಸತ್ ಸದಸ್ಯರಾಗಿ ಹಾಗೂ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿರುವುದು ಅವರ ಸಾರ್ವಜನಿಕ ಜೀವನದ ವಿಶಿಷ್ಟ ಸಾಧನೆಯಾಗಿದೆ. ಡಾ. ಬಾಬು ಜಗಜೀವನ ರಾಮ್ ಅವರು ಯಾವುದೇ ಒಂದು ವರ್ಗಕ್ಕೆ ಸೀಮಿತವಾದ ನಾಯಕರಲ್ಲ. ಅವರ ತತ್ವ, ಆದರ್ಶ ಮತ್ತು ಸಾಮಾಜಿಕ ಬದ್ಧತೆ ಇಂದಿನ ಪೀಳಿಗೆಗೆ ಮಾರ್ಗದರ್ಶಕವಾಗಿದ್ದು, ಅವರ ಜೀವನ ಮೌಲ್ಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖಂಡ ಬಸವನಪುರ ರಾಜಶೇಖರ್, ಡಾ. ಬಾಬು ಜಗಜೀವನ ರಾಮ್ ಅವರು ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಹಲವು ಐತಿಹಾಸಿಕ ಕ್ರಮಗಳನ್ನು ಕೈಗೊಂಡಿದ್ದರು. ಕಾರ್ಮಿಕರಿಗೆ ವಿಮೆ ಸೌಲಭ್ಯ ಹಾಗೂ ಮುಂಬಡ್ತಿ ವ್ಯವಸ್ಥೆಯನ್ನು ಜಾರಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರಕ್ಷಣಾ ಸಚಿವರಾಗಿಯೂ ಗಮನಾರ್ಹ ಸಾಧನೆಗಳನ್ನು ಮಾಡಿದ್ದಾರೆ. ದೇಶದ ಆಹಾರ ಭದ್ರತೆಯನ್ನು ಬಲಪಡಿಸಿದ ಹಸಿರು ಕ್ರಾಂತಿಯ ಪ್ರಮುಖ ಶಿಲ್ಪಿಯಾಗಿ ಅವರ ಹೆಸರು ಸದಾ ಸ್ಮರಣೀಯವಾಗಿದೆ ಎಂದು ಹೇಳಿದರು.

ಜಾನಪದ ಗಾಯಕ ಸಿ.ಎಂ. ನರಸಿಂಹಮೂರ್ತಿ ಡಾ. ಬಾಬು ಜಗಜೀವನ ರಾಮ್ ಅವರ ಜೀವನ ಮತ್ತು ಸಾಧನೆ ಕುರಿತ ಗೀತಗಾಯನವನ್ನು ಪ್ರಸ್ತುತಪಡಿಸಿದರು.

ಈ ವಿಶೇಷ ಸುದ್ಧಿ ಓದಿದ್ದೀರಾ?ಕಾವೇರಿ ಕಣಿವೆಯ ಜಲಾಶಯಗಳಲ್ಲಿ ವಾಡಿಕೆ ನೀರಿನ ಸಂಗ್ರಹ ಕುಸಿತ: ಹಳೇ ಮೈಸೂರು ಭಾಗದಲ್ಲಿ ಬರದ ಭೀತಿ

ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮುನಿರಾಜು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ಎಸ್. ಬಿಂದ್ಯಾ, ವಿವಿಧ ಸಮುದಾಯಗಳ ಹಾಗೂ ಸಂಘಟನೆಗಳ ಮುಖಂಡರು, ಪ್ರತಿನಿಧಿಗಳು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...