ಚಾಮರಾಜನಗರ | ಸರ್ವರ್‌ ಸಮಸ್ಯೆಯಿಂದ ವಸತಿ ಯೋಜನೆ ದಾಖಲೆ ಸಲ್ಲಿಕೆ ವಿಳಂಬ; ಕಾಲಾವಧಿ ಮುಂದೂಡುವಂತೆ ಒತ್ತಾಯ

Date:

ವಸತಿ ಯೋಜನೆಗಳ ಅಡಿಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ದಾಖಲೆಗಳನ್ನು ಸಲ್ಲಿಸಲು ನವೆಂಬರ್‌ 30 ಕೊನೆಯ ದಿನವಾಗಿದೆ. ಆದರೆ ನಾಡ ಕಚೇರಿಗಳಲ್ಲಿ ಸರ್ವರ್‌ ಸಮಸ್ಯೆಯಿಂದಾಗಿ ಆನ್‌ಲೈನ್‌ ಸೇವೆಗಳು ವ್ಯತ್ಯಯವಾಗಿದ್ದು, ಮಂಜೂರಾಗಿರುವ ಮನೆಗಳು ರದ್ದಾಗುವ ಆತಂಕ ಫಲಾನುಭವಿಗಳಿಗೆ ಎದುರಾಗಿದೆ.

ರಾಜ್ಯದಾದ್ಯಂತ ವಿವಿಧ ವಸತಿ ಯೋಜನೆಯಡಿ 2021–22 ಮತ್ತು 2022–23ನೇ ಸಾಲಿಗೆ ಹೆಚ್ಚುವರಿಯಾಗಿ ಮಂಜೂರು ಮಾಡಿರುವ ಮನೆಗಳ ಪೈಕಿ, ಫಲಾನುಭವಿಗಳು ಆಯ್ಕೆಯಾಗಿ ಹಲವು ಲಾಗಿನ್‌ ಹಂತದಲ್ಲಿ ಅನುಮೋದನೆಗೆ ಬಾಕಿ ಇರುವ ಮತ್ತು ಫಲಾನುಭವಿಗಳು ಇನ್ನೂ ಆಯ್ಕೆಯಾಗದಿರುವ 1,35,976 ಮನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡಿ ಡಾಟಾ ಎಂಟ್ರಿ ಮಾಡಲು ಮತ್ತು ಅನುಮೋದನೆ ಪಡೆದುಕೊಳ್ಳಲು ರಾಜೀವ್‌ ಗಾಂಧಿ ವಸತಿ ನಿಗಮ ನವೆಂಬರ್‌ 30ರವರೆಗೆ ಅವಕಾಶ ನೀಡಿದೆ. ಆ ಬಳಿಕ ಬಾಕಿ ಉಳಿಯುವ ಎಲ್ಲ ಮನೆಗಳ ಗುರಿಯನ್ನು ಹಿಂಪಡೆಯಲಾಗುವುದೆಂದು ನಿಗಮ ಹೇಳಿದೆ.

ಈ ಸಂಬಂಧ ನಿಗಮವು ಈ ತಿಂಗಳ 6ರಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ಪತ್ರ ಬರೆದಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಚಾಮರಾಜನಗರ ಜಿಲ್ಲೆಯಲ್ಲಿ ಚಾಮರಾಜನಗರ ಮತ್ತು ಹನೂರು ತಾಲೂಕುಗಳಿಗೆ ಬಸವ ವಸತಿ ಯೋಜನೆಯಡಿಯಲ್ಲಿ 5,315 ಮತ್ತು ಡಾ.ಬಿ.ಆರ್‌. ಅಂಬೇಡ್ಕರ್‌ ಯೋಜನೆ ಅಡಿಯಲ್ಲಿ 3,349 ಸೇರಿದಂತೆ 8,664 ಮನೆಗಳ ಹಂಚಿಕೆಯ ಗುರಿ ಹೊಂದಿದೆ.

ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕರು ಎರಡೂ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಇದೇ 15ರಂದು ಪತ್ರ ಬರೆದು, 25ರ ಒಳಗೆ ಗ್ರಾಮ ಸಭೆಗಳ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಿ ಆನ್‌ಲೈನ್‌ನಲ್ಲಿ ಅನುಮೋದನೆ ಪಡೆಯಲು ಸೂಚಿಸಿದ್ದರು. ಅದರಂತೆ ವಾರದಿಂದ ಗ್ರಾಮಗಳಲ್ಲಿ ವಾರ್ಡ್ ಸಭೆ ಹಾಗೂ ಗ್ರಾಮಪಂಚಾಯಿತಿ ಕೇಂದ್ರಗಳಲ್ಲಿ ಗ್ರಾಮ ಸಭೆಗಳನ್ನು ನಡೆಸಿ ಆಯಾ ಗ್ರಾಮಪಂಚಾಯಿತಿ ಸದಸ್ಯರ ಸಮ್ಮುಖದಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಿದ್ದು, ಆದೇಶ ಪತ್ರಗಳನ್ನೂ ವಿತರಿಸುತ್ತಿದ್ದಾರೆ.

“ಆಯ್ಕೆಯಾಗಿರುವ ಫಲಾನುಭವಿಗಳು ಜಾತಿ, ಆದಾಯ ಪ್ರಮಾಣಪತ್ರ ಸೇರಿದಂತೆ ಇನ್ನಿತರ ದಾಖಲೆಗಳನ್ನು ಗುರುವಾರದ ಒಳಗಾಗಿ ಗ್ರಾಮ ಪಂಚಾಯಿತಿಗೆ ಸಲ್ಲಿಸಬೇಕು. ಗ್ರಾಮ ಪಂಚಾಯಿತಿ ಅಧಿಕಾರಿಗಳು ಫಲಾನುಭವಿಗಳ ವಿವರಗಳು, ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಿ ಅನುಮೋದನೆ ಪಡೆದುಕೊಳ್ಳಬೇಕು. ಆದರೆ, ಸರ್ವರ್‌ ಸಮಸ್ಯೆಯಿಂದ ಫಲಾನುಭವಿಗಳು ದಾಖಲಾತಿ ಒದಗಿಲು ವಿಳಂಬವಾಗುತ್ತಿದೆ. ಈ ಬಗ್ಗೆ ರಾಜೀವ್‌ ಗಾಂಧಿ ವಸತಿ ನಿಗಮ ನಿರ್ಧಾರ ಕೈಗೊಳ್ಳಬೇಕು. ಜನರು ಎದುರಿಸುತ್ತಿರುವ ಸಮಸ್ಯೆ ಕುರಿತು ನಿಗಮದ ಗಮನಕ್ಕೆ ತರುತ್ತೇವೆ” ಎಂದು ಚಾಮರಾಜನಗರ ಜಿಲ್ಲಾ ಪಂಚಾಯತ್‌ ಸಿಇಒ ಆನಂದ್‌ ಪ್ರಕಾಶ್‌ ಮೀನಾ ತಿಳಿಸಿದ್ದಾರೆ.

“ಸರ್ವರ್‌ ಸಮಸ್ಯೆಯ ಕಾರಣದಿಂದ ಪ್ರಮಾಣಪತ್ರಗಳನ್ನು ಪಡೆಯಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ನಾಲ್ಕೈದು ದಿನಗಳಿಂದ ಗ್ರಾಮ ಒನ್ ಕೇಂದ್ರಗಳು ಹಾಗೂ ನಾಡಕಚೇರಿಗೆ ಅಲೆದಾಡುವಂತಾಗಿದೆ. ನಾಲ್ಕೈದು ದಿನಗಳ ಹಿಂದೆ ಆದೇಶ ಪತ್ರ ವಿತರಿಸಲಾಗಿದೆ. ಗ್ರಾಮ ಒನ್ ಕೇಂದ್ರ ಹಾಗೂ ನಾಡಕಚೇರಿಯ ಕಂಪ್ಯೂಟರ್ ಕೇಂದ್ರಗಳಲ್ಲಿ ಸರ್ವರ್ ಸಮಸ್ಯೆಯಾಗಿದ್ದು ಸಕಾಲದಲ್ಲಿ ದಾಖಲೆಗಳು ಸಿಗುತ್ತಿಲ್ಲ. ಇದರಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ” ಎಂದು ಫಲಾನುವಿಗಳು ಪರದಾಡುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾಸನ | ದಲಿತ ಕುಟುಂಬ ಬೆಳೆದಿದ್ದ ಕಾಫಿ, ಬಾಳೆ ಗಿಡ ನಾಶ – ಜಾತಿ ನಿಂದನೆ; ಸಂತ್ರಸ್ಥರ ಆರೋಪ

“ಮನೆ ನಿರ್ಮಿಸಿಕೊಳ್ಳಲು ಗ್ರಾಮ ಪಂಚಾಯಿತಿಯವರು ಆದೇಶ ಪತ್ರ ನೀಡಿದ್ದಾರೆ. ನಾಡಕಚೇರಿಯಲ್ಲಿ ದಾಖಲೆಗಳನ್ನು 2 ದಿನಗಳಲ್ಲಿ ಪಡೆದುಕೊಳ್ಳಲು ಆಗುವುದಿಲ್ಲ. ಹಾಗಾಗಿ ನಿಗದಿಪಡಿಸಿರುವ ಕಾಲಾವಕಾಶವನ್ನು ಮುಂದೂಡಬೇಕು” ಎಂದು ಫಲಾನುಭವಿಗಳು ಒತ್ತಾಯಿಸುತ್ತಿದ್ದಾರೆ.

“ಸರ್ವರ್ ಸಮಸ್ಯೆ ಉಂಟಾಗಿ ಸಾರ್ವಜನಿಕರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ನೀಡಲು ವಿಳಂಬವಾಗುತ್ತಿದೆ. ಒಂದು ವೇಳೆ ಸರ್ವರ್ ಸಮಸ್ಯೆ ಇಲ್ಲದಿದ್ದರೂ ಎರಡು ದಿನಗಳಲ್ಲಿ ಪ್ರಮಾಣಪತ್ರ ನೀಡುವುದು ಸಾಧ್ಯವಿಲ್ಲ” ಎಂದು ನಾಡಕಚೇರಿ ಅಧಿಕಾರಿಗಳು ಹೇಳುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ; ಇಬ್ಬರ ಬಂಧನ

ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಐನಾಪೂರ ಪಟ್ಟಣದ ಉಗಾರ ರಸ್ತೆಗೆ ಹೊಂದಿಕೊಂಡ...

ಪಾಕ್‌ ಪರ ಘೋಷಣೆ ಆರೋಪ | ಜನಾಕ್ರೋಶಕ್ಕೆ ಮಣಿದ ಸರ್ಕಾರ, ಮೂವರು ಆರೋಪಿಗಳ ಬಂಧನ: ಆರ್‌ ಅಶೋಕ್‌

ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ...

ಬೆಂ.ಗ್ರಾಮಾಂತರ | ಕೃಷಿ ಹೊಂಡಕ್ಕೆ ಜಾರಿ ಬಿದ್ದ ಮಗಳು; ರಕ್ಷಿಸಲು ಹೋದ ಪೋಷಕರೂ ಸಾವು

ಕೃಷಿ ಹೊಂಡದಲ್ಲಿ ಕೈತೊಳೆಯಲು ಹೋಗಿ ಜಾರಿ ಬಿದ್ದ ಮಗಳನ್ನು ರಕ್ಷಿಸಲು ಹೋದ...

ಬಿಜೆಪಿಯಿಂದ ತಿರಂಗಾ ಯಾತ್ರೆ; ಅನುಮತಿ ಪಡೆದಿಲ್ಲ ಎಂದು ಪೊಲೀಸರಿಂದ ತಡೆ

ದೇಶ ಮೊದಲು ಚಿಂತನೆಯಡಿ ‘ತಿರಂಗಾ ಯಾತ್ರೆ’ ಹಮ್ಮಿಕೊಳ್ಳುವುದರಲ್ಲಿ ತಪ್ಪೇನಿದೆ?. ಆದರೆ, ಇಲ್ಲಿ...