ಚಾಮರಾಜನಗರ | ಗ್ರಾಪಂ, ನಗರ ವಾರ್ಡ್‌ಗಳಲ್ಲಿ ಭಾರತ್ ಜೋಡೊ ಯುವ ಸಂಘಗಳ ಸ್ಥಾಪನೆಗೆ ಜಿಲ್ಲಾಧಿಕಾರಿ ಸೂಚನೆ

Date:

ಯುವಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮುದಾಯಿಕ ಸಾಮರಸ್ಯವನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಭಾರತ್ ಜೋಡೊ ಯುವ ಸಂಘ ಯೋಜನೆಯನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಎಲ್ಲ ಇಲಾಖೆಗಳ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಸೂಚಿಸಿದರು.

- Advertisement -

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾರತ್ ಜೋಡೊ ಯುವ ಸಂಘಗಳ ಸ್ಥಾಪನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯುವಜನರನ್ನು ಸಮುದಾಯ ಅಭಿವೃದ್ಧಿ, ಸಾಮಾಜಿಕ ಸಾಮರಸ್ಯ, ಕ್ರೀಡೆ, ಫಿಟ್ನೆಸ್ ಹಾಗೂ ಕೌಶಲ್ಯಾಭಿವೃದ್ಧಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸುವ ಮೂಲಕ ತಳಮಟ್ಟದ ಆಡಳಿತದಲ್ಲಿ ಪಾಲುದಾರರನ್ನಾಗಿಸುವ ಮಹತ್ವದ ಉದ್ದೇಶದಿಂದ ಸರ್ಕಾರ ಈ ಯೋಜನೆಯನ್ನು ರೂಪಿಸಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನೇತೃತ್ವದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ನಗರಾಭಿವೃದ್ಧಿ, ಕಂದಾಯ ಹಾಗೂ ಶಿಕ್ಷಣ ಇಲಾಖೆಗಳ ಸಹಯೋಗದೊಂದಿಗೆ ಯೋಜನೆಯನ್ನು ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದ ಅವರು, ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲಿ ಒಂದು ಭಾರತ್ ಜೋಡೊ ಯುವ ಸಂಘವನ್ನು ಸ್ಥಾಪಿಸಬೇಕು ಎಂದರು.

ಅದರಂತೆ ಪ್ರತಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸರಾಸರಿ 4 ಸಾವಿರ ಜನಸಂಖ್ಯೆಗೆ ಒಂದು ಸಂಘ, ಪುರಸಭೆ ವ್ಯಾಪ್ತಿಯಲ್ಲಿ 6 ಸಾವಿರ ಜನಸಂಖ್ಯೆಗೆ ಒಂದು ಸಂಘ ಹಾಗೂ ನಗರಸಭೆ ವ್ಯಾಪ್ತಿಯಲ್ಲಿ 8 ಸಾವಿರ ಜನಸಂಖ್ಯೆಗೆ ಒಂದು ಸಂಘ ರಚಿಸುವಂತೆ ಸರ್ಕಾರ ಮಾರ್ಗಸೂಚಿ ನೀಡಿದೆ ಎಂದು ತಿಳಿಸಿದರು.

ಭಾರತ್ ಜೋಡೊ ಯುವ ಸಂಘಗಳ ನೋಂದಣಿಗೆ ಬಿಜೆವೈಎಸ್ (BJYS) ಪೋರ್ಟಲ್, ಮೊಬೈಲ್ ಆ್ಯಪ್ ಅಥವಾ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ನಾಗರಿಕ ಸೇವಾ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಸದಸ್ಯತ್ವಕ್ಕಾಗಿ ಆಧಾರ್ ಕಡ್ಡಾಯವಾಗಿದ್ದು, 16ರಿಂದ 35 ವರ್ಷದೊಳಗಿನ ಯುವಕರು ಸದಸ್ಯರಾಗಬಹುದು. ಪ್ರತಿ ಘಟಕ ರಚನೆಗೆ ಕನಿಷ್ಠ 100 ಸದಸ್ಯರಿರುವುದು ಅಗತ್ಯ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ಪ್ರತಿ ಭಾರತ್ ಜೋಡೊ ಯುವ ಸಂಘಕ್ಕೆ ವಾರ್ಷಿಕವಾಗಿ ₹10 ಲಕ್ಷ ಅನುದಾನ ಬಿಡುಗಡೆಯಾಗಲಿದ್ದು, ಸಂಘದ ಕಾರ್ಯಾಚರಣೆಗೆ ಅಗತ್ಯವಾದ ಕೊಠಡಿ, ಹೊರಾಂಗಣ ಚಟುವಟಿಕೆಗಳಿಗೆ ಸ್ಥಳಾವಕಾಶ ಹಾಗೂ ಅಗತ್ಯ ಅನುಮತಿಗಳನ್ನು ಸ್ಥಳೀಯ ಆಡಳಿತದಿಂದ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಯೋಜನೆಯ ಪಾರದರ್ಶಕ ಹಾಗೂ ಸಮರ್ಥ ಅನುಷ್ಠಾನಕ್ಕಾಗಿ ನಿಗದಿತ ಆಡಳಿತಾತ್ಮಕ ವ್ಯವಸ್ಥೆಯಂತೆ ಎಲ್ಲ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು. ತಹಶೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಕೂಡಲೇ ಸಭೆಗಳನ್ನು ನಡೆಸಿ ನೋಂದಣಿ ಪ್ರಕ್ರಿಯೆಗೆ ಸಿದ್ಧತೆ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.

ಯೋಜನೆಯ ಕುರಿತು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವ್ಯಾಪಕ ಜಾಗೃತಿ ಮೂಡಿಸಿ, ಸರ್ಕಾರದ ಮಾರ್ಗಸೂಚಿಗಳ ಅನ್ವಯ ಭಾರತ್ ಜೋಡೊ ಯುವ ಸಂಘಗಳ ಸ್ಥಾಪನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವಂತೆ ಎಲ್ಲ ಇಲಾಖೆಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶ್ರೀರೂಪ ಕರೆ ನೀಡಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ಶುಂಠಿ ಕೃಷಿ: ಕೇರಳದಿಂದ ಕರ್ನಾಟಕಕ್ಕೆ ವಲಸೆ ಬಂದ ಲಾಭದಾಯಕ ಬೆಳೆ; ಪರಿಸರಕ್ಕೆ ಎಚ್ಚರಿಕೆಯ ಗಂಟೆಯೂ ಹೌದು

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಭಾರ ಸಹಾಯಕ ನಿರ್ದೇಶಕಿ ಹೆಚ್.ಎಸ್. ಬಿಂದ್ಯಾ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ವೆಂಕಟೇಶ್, ತಹಶೀಲ್ದಾರರಾದ ಗಿರಿಜಾ, ಬಸವರಾಜು, ನಯನ, ಚೈತ್ರ, ಜಯಪ್ರಕಾಶ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಚಂದ್ರಪಾಟೀಲ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಪುಟ್ಟಗೌರಮ್ಮ, ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಶ್ರೀಕಂಠರಾಜೇ ಅರಸ್, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಗಳು, ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳ ಮುಖ್ಯಾಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಸಗಿ ಬಸ್‌ಗಳ ಮುಖಾಮುಖಿ ಢಿಕ್ಕಿ : ಮೂವರ ಸ್ಥಿತಿ ಗಂಭೀರ, 28 ಮಂದಿಗೆ ಗಾಯ

ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ...

ಉಡುಪಿ | ಹಿರಿಯ ಸಾಧಕರಿಗೆ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ

ಮಂಗಳೂರು ಅಮ್ಮೆಂಬಳ ಶಂಕರ ನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ, ಕನ್ನಡ ಸಾಹಿತ್ಯ...

ಉಡುಪಿ | ‘ನಡಿಗೆ’ ಅಭಿಯಾನದಲ್ಲಿ 20 ಸಾವಿರ ಜೋಡಿ ಪಾದರಕ್ಷೆ ಸಂಗ್ರಹ

ಮನೆಯಲ್ಲಿ ಬಳಸಿದ ಅಥವಾ ಬಳಕೆಯಾಗದ ಉತ್ತಮ ಗುಣಮಟ್ಟದಲ್ಲಿರುವ ಪಾದರಕ್ಷೆಗಳನ್ನು ಹೊಸ ಪಾದರಕ್ಷೆಗಳಾಗಿ...

ಉಡುಪಿ | ಸಾಮಾಜಿಕ, ಶೈಕ್ಷಣಿಕ ಸೇವೆಗಳಿಗೆ ಸಹಕಾರಿ ಸಂಸ್ಥೆಗಳು ಆದ್ಯತೆ ನೀಡಲಿ: ದುಗ್ಗಣ್ಣ ಸಾವಂತ್

ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ...