ಚಾಮರಾಜನಗರ | ರಕ್ತಚಂದನ ಅಕ್ರಮ ಸಾಗಾಟ; ಐವರ ಬಂಧನ

Date:

Advertisements

ತರಕಾರಿ ವಾಹನದಲ್ಲಿ ರಕ್ತಚಂದನ ಮರದ ತುಂಡುಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ವಿಶೇಷ ಹುಲಿ ಸಂರಕ್ಷಣಾ ದಳದ ವಲಯ ಅಧಿಕಾರಿಗಳು ದಾಳಿ ನಡೆಸಿ ಐವರು ಆರೋಪಿಗಳನ್ನು ಬಂಧಿಸಿರುವ ಘಟನೆ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯಲ್ಲಿ ನಡೆದಿದೆ.

ಬೆಂಗಳೂರಿನ ಅಮೃತಹಳ್ಳಿಯ ಮನುಗುರಪ್ಪ ಬಡಾವಣೆಯ ನಿವಾಸಿ ಆರ್ ಎಲ್ ರವಿ(47) ಚಾಮರಾಜನಗರ ತಾಲೂಕಿನ ಸರಗೂರು ಮೋಳೆಯ ಎನ್ ಎಂ ಗೋವಿಂದರಾಜ್‌(43), ಆನಂದ್ ಎಸ್ ಡಿ (40) ಚಾಮರಾಜನಗರದ ಭ್ರಮರಾಂಬ ಬಡಾವಣೆಯ ಆಸ್ಕರ್ ಪಾಷ(63) ಹಾಗೂ ಚಾಮರಾಜನಗರ ತಾಲೂಕಿನ ಹಾಗೂ ನಾಗವಳಿ ಗ್ರಾಮದ ಮಹೇಂದ್ರ(32) ಬಂಧಿತ ಆರೋಪಿಗಳು. ಇವರಿಂದ ಸುಮಾರು ಐವತ್ತು ಕೆಜಿ ತೂಕದ ರಕ್ತಚಂದನ ತುಂಡುಗಳನ್ನು ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಮಂಗಳವಾರ ಸಂಜೆ ಸುಮಾರು 6-30ರಲ್ಲಿ ತುಂಬಿದ ಬೊಲೆರೋ ವಾಹನದಲ್ಲಿ ರಕ್ತಚಂದನ ಮರಗಳ ತುಂಡುಗಳನ್ನು ಸಾಗಿಸುತ್ತಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ ಬಂಡೀಪುರ ಹುಲಿ ಸಂರಕ್ಷಣಾಧಿಕಾರಿ ರಮೇಶ್ ಕುಮಾರ್ ನಿರ್ದೇಶನದಂತೆ ಗುಂಡ್ಲುಪೇಟೆ ಬಫರ್ ಝೋನ್ ವಲಯ ಮತ್ತು ವಿಶೇಷ ಹುಲಿ ಸಂರಕ್ಷಣಾ ದಳದ ಸಿಬ್ಬಂದಿಗಳು ಹಾಗೂ ಅರಣ್ಯ ಸಂರಕ್ಷಣಾಧಿಕಾರಿಗಳಾದ ಜಿ ರವೀಂದ್ರ ಮತ್ತು ಪರಮೇಶ್ವರ್ ಹಾಗೂ ನವೀನ್ ಕುಮಾರ್ ಮೂರು ತಂಡಗಳಾಗಿ ಬೇರೆ ಬೇರೆ ಸ್ಥಳಗಳಲ್ಲಿ ನಿಯೋಜನೆ ಮಾಡಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು.

Advertisements

ತಾಲೂಕಿನ ಲಕ್ಕೂರು ಗ್ರಾಮದ ಬಳಿ ಕೆ ಎ 45 5301 ಸಂಖ್ಯೆಯ ಬೊಲೆರೋ ವಾಹನ ತಡೆದು ಪರಿಶೀಲನೆ ಮಾಡಿದಾಗ ಮೇಲ್ಭಾಗದಲ್ಲಿ ಹೂಕೋಸು ಜೊತೆ ಕೆಳಭಾಗದಲ್ಲಿ ರಕ್ತಚಂದನ ತುಂಡುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದು ಕಂಡುಬಂದಿದ್ದು, ಇವರನ್ನು ವಶಪಡಿಸಿಕೊಂಡ ಅರಣ್ಯ ಇಲಾಖೆಯ ಅಧಿಕಾರಿಗಳು ಗುಂಡ್ಲುಪೇಟೆ ಬಫರ್ ಝೋನ್ ವಲಯದಲ್ಲಿ ಮೊಕದ್ದಮೆ ದಾಖಲಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಎಸ್ಸಿಪಿ, ಟಿಎಸ್ಪಿ ಯೋಜನೆ ಫಲಾನುಭವಿಗಳ ಆಯ್ಕೆ ಪಾರದರ್ಶಕತೆಗೆ ಸೂಚನೆ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ...

ಗುಂಡ್ಲುಪೇಟೆ | ಆನೆ ದಾಳಿಯಿಂದ ಬದುಕಿ ಬಂದವನಿಗೆ ಅರಣ್ಯ ಇಲಾಖೆಯಿಂದ ಭಾರೀ ದಂಡ

ಬಂಡೀಪುರ ಅರಣ್ಯದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ, ಆನೆದ ದಾಳಿಗೆ ತುತ್ತಾಗಿ, ಬದುಕಿ...

ಚಾಮರಾಜನಗರ | ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷಾ ಕಾರ್ಯಕ್ಕೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ...

ಚಾಮರಾಜನಗರ | ಸರ್ವರ ಸಹಕಾರದೊಂದಿಗೆ ಸ್ವಾತಂತ್ರ್ಯ ದಿನಾಚರಣೆ : ಟಿ ಜವರೇಗೌಡ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ ದಿನಾಚರಣೆ ಸಂಬಂಧ ವಿವಿಧ ಸಂಘಟನೆಗಳ...

Download Eedina App Android / iOS

X