ಚಾಮರಾಜನಗರ | ಸಾಮೂಹಿಕ ವಿವಾಹ 2 ಬಾರಿ ಮುಂದೂಡಿಕೆ; ಸ್ವಂತ ಖರ್ಚಿನಲ್ಲಿ ವಿವಾಹವಾದ 7 ಜೋಡಿ

Date:

ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ನಡೆಯಬೇಕಿದ್ದ ಉಚಿತ ಸಾಮೂಹಿಕ ವಿವಾಹ 2 ಬಾರಿ ಮುಂದೂಡಿಕೆಯಾದ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸಿದ್ದ 7 ಜೋಡಿ ಸೋಮವಾರ ಸಾಲೂರು ಬೃಹನ್ಮಠದಲ್ಲಿ ವಿವಾಹವಾಗುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

- Advertisement -

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಆಗಸ್ಟ್‌ 23 ರಂದು ಸಮೂಹಿಕ ವಿವಾಹ ನಿಗದಿಪಡಿಸಲಾಗಿತ್ತು. ಆದರೆ ಸಾಮೂಹಿಕ ವಿವಾಹವನ್ನು ಕಾರಣಾಂತರದಿಂದ 28ಕ್ಕೆ ಮುಂದೂಡಲಾಗಿತ್ತು. ಈ ವೇಳೆಗೆ ಸುಮಾರು 65 ಜೋಡಿಗಳಿಂದ ಅರ್ಜಿ ಸಲ್ಲಿಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಈಗಾಗಲೇ ಕೆಲವರು ಲಗ್ನ ಪತ್ರಿಕೆಯನ್ನೂ ಹಂಚಿದ್ದರು. ಇನ್ನು ಲಗ್ನಪತ್ರಿಕೆ ಮಾಡಿಸದ ಕೆಲವರು ವಿವಾಹಕ್ಕೆ ಆಗಮಿಸುವಂತೆ ಸಂಬಂಧಿಕರಿಗೆ 2 ಬಾರಿ ತಿಳಿಸಿದ್ದರು. ಆದರೆ ಪ್ರಾಧಿಕಾರ ಮುಂದೂಡಲಾದ ಮದುವೆಗೆ ಮುಂದಿನ ದಿನಾಂಕವನ್ನು ನಿಗದಿಪಡಿಸಿ ಖಚಿತಪಡಿಸಿಲ್ಲ. ಇದರಿಂದ ಗೊಂದಲಕ್ಕೆ ಸಿಲುಕಿದ್ದ 7 ಜೋಡಿ ವಧು-ವರರು ದೃಢ ನಿರ್ಧಾರ ಹೊಂದಿ ಸ್ವಂತ ಖರ್ಚಿನಲ್ಲಿಯೇ ಬೆಟ್ಟದಲ್ಲಿ ವಿವಾಹವಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ದಾಂಪತ್ಯ ಜೀವನಕ್ಕೆ ಕಾಲಿಟ್ಟ 7 ಜೋಡಿಗಳು: ಬಹುತೇಕ ಬಡ ವರ್ಗದ ವಧು-ವರರು ಮಹದೇಶ್ವರ ಬೆಟ್ಟದಲ್ಲಿ ಪ್ರಾಧಿಕಾರದಿಂದ ನಡೆಯುವ ಉಚಿತ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಲು ಅರ್ಜಿ ಸಲ್ಲಿಸುವುದು ವಾಡಿಕೆ. ಆದರೆ 2 ಬಾರಿ ವಿವಾಹ ಮುಂದೂಡಿಕೆಯಾಗಿದ್ದ ಹಿನ್ನೆಲೆಯಲ್ಲಿ ಚಾಮರಾಜನಗರದ ಜಗದೀಶ್- ನಂಜನಗೂಡಿನ ಕಾವ್ಯಾಶ್ರೀ, ಪಿಜಿ ಪಾಳ್ಯದ ಮಹೇಶ್ ಕುಮಾರ್ ಮೈಸೂರಿನ ಹೊರಳವಾಡಿಯ ರಮ್ಯಾ, ತಾಳವಾಡಿಯ ಉದಯಕುಮಾರ್, ಇದೇ ಗ್ರಾಮದ ಸ್ನೇಹ, ನರಸೀಪುರದ ದಿನೇಶ್ ಮೈಸೂರಿನ ನಿರ್ಮಲಾ, ನಂಜನಗೂಡು ತಾಲೂಕಿನ ಹಳೇಪುರದ ಮಹೇಂದ್ರ, ಚಾಮರಾಜನಗರ ತಾಲೂಕಿನ ಅರಳೀಪುರ ಗ್ರಾಮದ ಮಂಗಳಮ್ಮ, ಮೈಸೂರಿನ ಸಂಜಯ್ – ಸೌಭಾಗ್ಯ ಹಾಗೂ ಚಾಮರಾಜನಗರದ ರವಿ-ಸೌಮ್ಯ ಜೋಡಿ ಸಾಲೂರು ಬೃಹನ್ಮಠದಲ್ಲಿ ವಿವಾಹವಾದರು. ಅಂತೆಯೆ ಮಹದೇಶ್ವರ ಬೆಟ್ಟದ ಬೊಮ್ಮೇಶ್ವರ ದೇಗುಲದಲ್ಲಿ ಮಹದೇವಪ್ಪ-ಸವಿತಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪ್ರಚಾರಕ್ಕಾಗಿ ಸಚಿವರನ್ನ ರೇಣುಕಾಚಾರ್ಯ ಭೇಟಿ ಮಾಡುತ್ತಿದ್ದಾರೆ: ಶಾಸಕ ಬಸವರಾಜ್ ಶಿವಗಂಗಾ

ದಿನಾಂಕ ನಿಗದಿಗೆ ಒತ್ತಾಯ: ಈಗಾಗಲೇ 2 ಬಾರಿ ವಿವಾಹ ಮಂದೂಡಿಕೆಯಾಗಿರುವುದರಿಂದ ಅರ್ಜಿ ಸಲ್ಲಿಸಿರುವ ವಧು- ವರರು ಹಾಗೂ ಕುಟುಂಬಸ್ಥರು ಪ್ರಾಧಿಕಾರದ ಕಾರ್ಯವೈಖರಿಗೆ ಆಕ್ಷೇಪ ವ್ಯಕ್ತಪಡಿಸಿದ್ದು, ಸಾಮೂಹಿಕ ವಿವಾದ ಮುಂದಿನ ದಿನಾಂಕವನ್ನು ಕೂಡಲೇ ನಿಗದಿಪಡಿಸುವಂತೆ ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

E-KYC: ಸರ್ವರ್‌ಗಿಂತ ದೊಡ್ಡ ಸಮಸ್ಯೆ: ಜನರ ಬದುಕು

ಇ-ಕೆವೈಸಿ ಗಡುವು ವಿಸ್ತರಿಸಿದರೂ ಬದಲಾಗಬೇಕಿರುವುದು ವ್ಯವಸ್ಥೆ; ಕೊಡಗು-ಚಿಕ್ಕಮಗಳೂರು-ಚಾಮರಾಜನಗರದ ಗಡಿ ಹಳ್ಳಿಗಳವರೆಗೆ ತಲುಪಬೇಕಿದೆ...

ಆದಿವಾಸಿಗಳ ಮನೆ ನಿರ್ಮಾಣಕ್ಕೆ ಅರಣ್ಯ ಇಲಾಖೆ ಅಡ್ಡಿಪಡಿಸಬಾರದು: ಪುಟ್ಟರಂಗಶೆಟ್ಟಿ

ಮುಖ್ಯಮಂತ್ರಿಗಳ ಆದಿವಾಸಿ ಗೃಹಭಾಗ್ಯ ಯೋಜನೆಯಡಿ ಚಾಮರಾಜನಗರ ಜಿಲ್ಲೆಗೆ ಮೊದಲ ಹಂತದಲ್ಲಿ 593...

ಹುಲಿ ದಾಳಿಗೆ ರೈತ ಬಲಿ; ಅಧಿಕಾರಿಗಳ ನಿರ್ಲಕ್ಷ್ಯದ ಫಲ: ರೈತ ಸಂಘದ ಆಕ್ರೋಶ

ಚಾಮರಾಜನಗರ ಜಿಲ್ಲೆಯ ಬಡಗಲಪುರ ಗ್ರಾಮದಲ್ಲಿ ಹುಲಿ ದಾಳಿಗೆ ರೈತ ಬಸವಣ್ಣ ಮೃತಪಟ್ಟ...