ಚಾಮರಾಜನಗರ | ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ

Date:

ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಆನೆ ದಾಳಿ, ಕಾಡ್ಗಿಚ್ಚು, ಕಾಡುಗಳ್ಳರ ಮುತ್ತಿಗೆ, ಪ್ರಾಣಿಗಳ ದಾಳಿ ಸೇರಿದಂತೆ ಹಲವು ಪ್ರಕರಣಗಳಲ್ಲಿ ಪ್ರಾಣ ತೆತ್ತಿರುವ ನಿರ್ದೇಶನಗಳನ್ನು ನಾವು ಸಾಕಷ್ಟು ನೋಡಿದ್ದೇವೆ. ಹಾಗಾಗಿ ಅರಣ್ಯ ಹುತಾತ್ಮರ ದಿನಾಚರಣೆಯಿಂದ ಇವರ ಸೇವೆಗಳನ್ನು ಸ್ಮರಣೆ ಮಾಡಿಕೊಳ್ಳುವುದು ಬಹು ಮುಖ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಬಸವರಾಜ್ ತಳವಾರ್ ಅವರು ತಿಲೀಸಿದರು.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ನಡೆದ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

“ಮಾನವ ಅರಣ್ಯವನ್ನು ಸಂರಕ್ಷಣೆ ಮಾಡದೆ ಹೋದರೆ ಮತ್ತು ಮುಂದಿನ ದಿನಗಳಲ್ಲಿ ಅರಣ್ಯ ಅಳಿವಿನ ಪರಿಸ್ಥಿತಿ ತಲುಪುವುದರಲ್ಲಿ ಯಾವುದೇ ಸಂಶಯವಿಲ್ಲ. ಮುಂದಿನ ಪೀಳಿಗೆಗಳಿಗೂ ಅರಣ್ಯಗಳು ಇರಬೇಕಾದರೆ ಅರಣ್ಯ ಸಂರಕ್ಷಣೆ ಮಾಡುವುದು ಕೇವಲ ಅರಣ್ಯ ಇಲಾಖೆಯ ಕರ್ತವ್ಯವಲ್ಲ. ಇದಕ್ಕೆ ಸಾರ್ವಜನಿಕರ ಸಹಕಾರವೂ ತುಂಬಾ ಅಗತ್ಯವಾಗಿದೆ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಮ್ಮ ಐತಿಹಾಸಿಕ ದಾಖಲೆ ಆಧಾರದ ಮೇಲೆ ನೋಡುವುದಾದರೆ ಮೊದಲು ಇದ್ದಿದ್ದು ಮಾನವನ ಅಥವಾ ಅರಣ್ಯವಾ ಎಂದು ನೋಡಿದರೆ ಮೊದಲು ಅರಣ್ಯ ಎಂದು ತಿಳಿಯುತ್ತದೆ. ಮಾನವ ತನ್ನ ಮೂಲ ನೆಲೆಯಾದ ಅರಣ್ಯವನ್ನು ಸಂರಕ್ಷಣೆ ಮಾಡಲು ವಿಫಲನಾಗಿದ್ದಾನೆ ಮತ್ತು ತನ್ನ ಸ್ವಾರ್ಥಕ್ಕಾಗಿ ಅರಣ್ಯವನ್ನು ವಿನಾಶದ ಕಡೆಗೆ ತೆಗೆದುಕೊಂಡು ಹೋಗುತ್ತಿದ್ದಾನೆ” ಎಂದು ಆರೋಪಿಸಿದರು.

ಬಂಡೀಪುರ ಹುಲಿ ಯೋಜನೆಯ ನಿರ್ದೇಶಕ ಡಾ. ರಮೇಶ್ ಕುಮಾರ್ ಮಾತನಾಡಿ, “ಪೊಲೀಸ್ ಇಲಾಖೆಗಿಂತಲೂ ಅರಣ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವುದು ಬಹಳ ಕಷ್ಟಕರ ಕೆಲಸ. ಹಾಗೆಯೇ ಯಾವಾಗ ಯಾವ ಘಟನೆ ನಡೆಯುತ್ತದೆ ಎಂಬುವುದೇ ತಿಳಿಯುವುದಿಲ್ಲ. ಹಾಗಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ತಮ್ಮ ಜೀವವನ್ನು ರಕ್ಷಣೆ ಮಾಡಿಕೊಂಡು ಕೆಲಸ ಮಾಡಬೇಕು. ತುಂಬಾ ಎಚ್ಚರಿಕೆಯಿಂದ ಕೆಲಸ ಮಾಡಬೇಕು” ಎಂದು ತಿಳಿಸಿದರು.

“ನಮ್ಮ ರಾಜ್ಯದಲ್ಲಿ ಈವರೆಗೆ 60 ಮಂದಿ ಅರಣ್ಯ ಇಲಾಖೆ ಅಧಿಕಾರಿಗಳು ಹುತಾತ್ಮರಾಗಿದ್ದು, ನಮ್ಮ ಬಂಡೀಪುರದಲ್ಲಿ ಐದು ಮಂದಿ ಸಿಬ್ಬಂದಿಗಳು ಹುತಾತ್ಮರಾಗಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲಿ ಅವರ ಅಗತ್ಯಕ್ಕನುಗುಣವಾಗಿ ಹುತಾತ್ಮರ ದಿನಾಚರಣೆ ಆಚರಿಸುತ್ತಿದ್ದರು. ನಮ್ಮ ರಾಜ್ಯದಲ್ಲಿ ಡಿಸಿಎಫ್ ಅಧಿಕಾರಿ ಶ್ರೀನಿವಾಸ್ ಅವರು ಹುತಾತ್ಮರಾದ ದಿನದಂದು ಆಚರಿಸಲಾಗುತ್ತಿತ್ತು. ತದನಂತರ 2013ರ ಬಳಿಕ ಸೆಪ್ಟಂಬರ್ 11ರಂದು ಅರಣ್ಯ ಹುತಾತ್ಮರ ದಿನಾಚರಣೆಯನ್ನು ಆಚರಣೆ ಮಾಡಲಾಗುತ್ತಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | 57 ವರ್ಷಗಳ ಹಿಂದೆ ಎಮ್ಮೆ ಕದ್ದಿದ್ದ ಆರೋಪಿ ಬಂಧನ

ಇದೇ ವೇಳೆ ಅರಣ್ಯ ಹುತಾತ್ಮರ ಸ್ಮಾರಕಕ್ಕೆ ಗೌರವ ಸಮರ್ಪಣೆ ಸಲ್ಲಿಸಿ ಎರಡು ನಿಮಿಷಗಳ ಕಾಲ ಮೌನಚರಣೆ ಸಲ್ಲಿಸಿದರು.

ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಶಿವಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನವೀನ್ ಕುಮಾರ್ ಮತ್ತು ಪರಮೇಶ್ವರ್ ಹಾಗೂ ರವೀಂದ್ರ ಸೇರಿದಂತೆ ಹಲವು ವಲಯಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಇದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಕಾಲೇಜಿಗೆ ತೆರಳಿ ಮತ ಕೇಳಿದ ಬಿಜೆಪಿ ಅಭ್ಯರ್ಥಿ : ಕ್ರಮಕ್ಕೆ ಆಗ್ರಹ

ಬಿರು ಬಿಸಿಲಿನ ನಡುವೆ ಸದ್ಯ ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗಿದೆ. ರಾಜಕೀಯ...

ಚಾಮರಾಜನಗರ | ಕಾರಿನ ಮೇಲೆ ಕಬ್ಬಿನ ಲಾರಿ ಪಲ್ಟಿ; ಮೂವರ ದುರ್ಮರಣ

ಕಾರಿನ ಮೇಲೆ ಕಬ್ಬಿನ ಲಾರಿ ಉರುಳಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ...

ಚಾಮರಾಜನಗರ | ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು; ಅಂದಾಜು 50 ಎಕರೆ ಪ್ರದೇಶಕ್ಕೆ ಬೆಂಕಿ

ಚಾಮರಾಜನಗರ ಜಿಲ್ಲೆಯ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸೋಮವಾರ ಕಾಡ್ಗಿಚ್ಚು ಉಂಟಾಗಿದ್ದು,...

ಮೈಸೂರು | ಕೃಷಿ ಸಲಕರಣಾ ವಿತರಕರು ಹೊಸ ಯೋಜನೆಗಳ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು: ಜಂಟಿ ಕೃಷಿ ನಿರ್ದೇಶಕ

ಕೃಷಿ ಸಲಕರಣೆಗಳ ವಿತರಕರು ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವುದರ ಜತೆಗೆ...