ನೆರೆಯ ಕೇರಳ ರಾಜ್ಯದಲ್ಲಿ ನಿಫಾ ವೈರಸ್ ಹೆಚ್ಚಾಗುತ್ತಿರುವ ಕಾರಣ ಕೇರಳದಿಂದ ಬರುವ ವಾಹನ ಸವಾರರನ್ನು ತಪಾಸಣೆಗೆ ಒಳಪಡಿಸಿ ರಾಜ್ಯಕ್ಕೆ ಪ್ರವೇಶಿಸಲು ಅನುಮತಿ ನೀಡಬೇಕು ಎಂದು ಕರ್ನಾಟಕ ಕಾವಲು ಪಡೆ ಕಾರ್ಯಕರ್ತರು ಆಗ್ರಹಿಸಿದರು.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕು ಆರೋಗ್ಯಾಧಿಕಾರಿ ಪುಟ್ಟಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
ಗುಂಡ್ಲುಪೇಟೆ ತಾಲೂಕು ರಾಜ್ಯದ ಗಡಿ ಭಾಗವಾಗಿದ್ದು, ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳದ ಹಿನ್ನೆಲೆಯಲ್ಲಿ ಪಟ್ಟಣದ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಹಾಗಾಗಿ ಇದರ ಬಗ್ಗೆ ಕ್ರಮ ವಹಿಸಬೇಕು. ಗಡಿಭಾಗದ ಮೂಲೆಹೊಳೆ ಚೆಕ್ ಪೋಸ್ಟ್ ಹಾಗೂ ಕೆಕ್ಕನಹಳ್ಳ ಚೆಕ್ ಪೋಸ್ಟ್‌ನಲ್ಲಿ ನೆರೆ ರಾಜ್ಯದವರು ತಮ್ಮ ರಾಜ್ಯಕ್ಕೆ ಪ್ರವೇಶಿಸುವ ವೇಳೆ ತಪಾಸಣೆ ಮಾಡಿ ಬಳಿಕ ಪ್ರವೇಶಕ್ಕೆ ಅನುಮತಿಸಬೇಕು” ಎಂದು ಒತ್ತಾಯಿಸಿದರು.
ತಾಲೂಕು ಅಧ್ಯಕ್ಷ ಎ ಅಬ್ದುಲ್ ಮಾಲಿಕ್ ಮಾತನಾಡಿ, “ಗಡಿಭಾಗದಲ್ಲಿ ಬರುವ ಎಲ್ಲ ವಾಹನ ಸವಾರರ ಬಗ್ಗೆ ಕಟ್ಟೆಚ್ಚರ ವಹಿಸಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಲೋಕಸಭಾ ಕ್ಷೇತ್ರದ ಅಭಿವೃದ್ಧಿಗೆ ಸಿಎಂ ಸಿದ್ದರಾಮಯ್ಯನವರಿಗೆ ಪ್ರಸ್ತಾವನೆ ಸಲ್ಲಿಕೆ: ಕೇಂದ್ರ ಸಚಿವ ಖೂಬಾ
ಈ ವೇಳೆ ತಾಲೂಕು ಗೌರವಾಧ್ಯಕ್ಷ ವೆಂಕಟೇಶ್ ಗೌಡ, ತಾ. ಕಾರ್ಯಾಧ್ಯಕ್ಷ ಈಗಲ್ ಸ್ವಾಮಿ, ಟೌನ್ ಉಪಾಧ್ಯಕ್ಷ ಸಾದಿಕ್ ಪಾಷ, ಟೌನ್ ಗೌರವಾಧ್ಯಕ್ಷ ಶಕೀಲ್, ಕಸಬಾ ಹೋಬಳಿ ಘಟಕದ ಅಧ್ಯಕ್ಷ ಎಚ್ ರಾಜು, ಟೌನ್ ಸಂಚಾಲಕ ಮಿಮಿಕ್ರಿ ರಾಜು, ಸುರೇಶ್, ಡ್ಯಾನ್ಸರ್ ಪವನ್, ಗಣೇಶ್ ಕೂತನೂರು ಸೇರಿದಂತೆ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಇದ್ದರು.