ಚಾಮರಾಜನಗರ | ಮಹಿಳೆಯೊಬ್ಬರು ಬಿಟ್ಟುಹೋಗಿದ್ದ ಹೆಣ್ಣು ಮಗುವಿನ ಗುರುತು ಪತ್ತೆ

Date:

ಚಾಮರಾಜನಗರ ಗುಂಡ್ಲುಪೇಟೆ ಪಟ್ಟಣದ ಕೆಎಸ್ಆರ್‌‌‌‌ಟಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಡಿಸೆಂಬರ್‌ 20ರಂದು ಬಿಟ್ಟು ಹೋಗಿದ್ದ ಹೆಣ್ಣು ಮಗುವಿನ ಗುರುತು ಪತ್ತೆಯಾಗಿದೆ.

- Advertisement -

“ಭಾನುವಾರ ಹಾಸನದಿಂದ ಬಂದಿದ್ದ ಮಗುವಿನ ತಂದೆ, ಮಗು ಆಶ್ರಯ ಪಡೆದಿದ್ದ ಕೊಳ್ಳೇಗಾಲದ ಜೀವನ ಜ್ಯೋತಿ ಟ್ರಸ್ಟ್‌ಗೆ ಭೇಟಿ ನೀಡಿ ಮಗುವಿನ ದಾಖಲೆಗಳನ್ನು ಹಾಜರು ಪಡಿಸಿದ್ದಾರೆ. ಸೋಮವಾರ ಮಗುವನ್ನು ಹಾಸನ ಜಿಲ್ಲೆಯ ಮಕ್ಕಳ ಕಲ್ಯಾಣ ಸಮಿತಿಗೆ ಹಸ್ತಾಂತರಿಸಲಾಗಿದೆ” ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

“ಗುಂಡ್ಲುಪೇಟೆಯಲ್ಲಿ ಮಗು ಬಿಟ್ಟು ಹೋಗಿರುವ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದನ್ನು ಗಮನಿಸಿ, ಮಗುವಿನ ತಂದೆ ಠಾಣೆಯನ್ನು ಸಂಪರ್ಕಿಸಿದ್ದರು. ಪೊಲೀಸರು ಮಗು ಜೀವನ್‌ ಜ್ಯೋತಿ ಟ್ರಸ್ಟ್‌ನಲ್ಲಿ ಇರುವುದಾಗಿ ಮಾಹಿತಿ ನೀಡಿದ್ದರು. ಅದರ ಆಧಾರದಲ್ಲಿ ಅವರು ಬಂದು ದಾಖಲೆಗಳನ್ನು ಸಲ್ಲಿಸಿದ್ದಾರೆ. ತಂದೆ ಮಾತ್ರ ಬಂದಿದ್ದರಿಂದ ಮಗುವನ್ನು ಪೋಷಕರಿಗೆ ಒಪ್ಪಿಸಿಲ್ಲ. ಹಾಸನ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಒಪ್ಪಿಸಲಾಗಿದೆ. ಜತೆಗೆ ಇನ್ನಷ್ಟು ದಾಖಲೆಗಳನ್ನು ನೀಡುವಂತೆ ಕೇಳಿದ್ದೇವೆ” ಎಂದು ಸಿಡಿಪಿಒ ಚೆಲುವರಾಜು ತಿಳಿಸಿದ್ದಾರೆ.

ಘಟನೆಯ ವಿವರ: ಡಿಸೆಂಬರ್‌ 20ರಂದು ಗುಂಡ್ಲುಪೇಟೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಕಲ್ಲೀಗೌಡನಹಳ್ಳಿಯ ಮಹದೇವಮ್ಮ ಅವರ ಬಳಿ ಮಗುವನ್ನು ಕೊಟ್ಟು, ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿದವರು ವಾಪಸ್‌ ಆಗಿರಲಿಲ್ಲ.

ವಿಷಯ ತಿಳಿದು ಸ್ಥಳಕ್ಕೆ ಬಂದಿದ್ದ ಪೊಲೀಸರು ಮಗುವನ್ನು ವಶಕ್ಕೆ ಪಡೆದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ  ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯೊಂದಿಗೆ ಚರ್ಚಿಸಿದ ಬಳಿಕ ಮಗುವನ್ನು ಸ್ಥಳೀಯ ಸಿಎಂಎಸ್ ಅನಾಥಾಲಯದಲ್ಲಿ ಇರಿಸಿದ್ದರು. ನಂತರ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯವರು ಮಗುವನ್ನು ಕೊಳ್ಳೇಗಾಲ ತಾಲೂಕಿನ ಜೀವನಜ್ಯೋತಿ ಟ್ರಸ್ಟ್‌ಗೆ ಹಸ್ತಾಂತರಿಸಿದ್ದರು.

ಈ ಸುದ್ದಿ ಓದಿದ್ದೀರಾ? ವಿಶ್ವಕರ್ಮ ಅಧ್ಯಯನ ಪೀಠ ಸ್ಥಾಪನೆಗೆ ಕ್ರಮ; ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

ಮಗುವಿನ ತಂದೆ ತಾಯಿ ಹಾಸನದವರು. ಕೌಟುಂಬಿಕ ಕಲಹದಿಂದಾಗಿ ಡಿಸೆಂಬರ್‌ 2ರಂದು ತಾಯಿಯು ಮಗುವಿನೊಂದಿಗೆ ಮನೆ ಬಿಟ್ಟು ಬಂದಿದ್ದರು. ಈ ಸಂಬಂಧ ಹಾಸನ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಸತಿ ಯೋಜನೆಗಳ ಪ್ರಗತಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ...

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...

ಸ್ವಚ್ಛ ಮೈಸೂರು ನಿರ್ಮಾಣಕ್ಕೆ ನ್ಯಾಯಾಂಗ-ಪಾಲಿಕೆ ಸಾಥ್

ಮೈಸೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿಸುವ ಉದ್ದೇಶದಿಂದ ನ್ಯಾಯಾಂಗ ಇಲಾಖೆ...

ಇಳಕಲ್‌ | ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ SYM ಒತ್ತಾಯ; ಹೋರಾಟ ತೀವ್ರಗೊಳಿಸುವ ಎಚ್ಚರಿಕೆ!

ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಮೂಲಕ ಸಂವಿಧಾನಬದ್ಧ ಮತದಾನದ...