ಚಾಮರಾಜನಗರ | ಖಾಸಗಿ ವಿಡಿಯೋ ವೈರಲ್‌ ಮಾಡುವುದಾಗಿ ಬೆದರಿಕೆ; ಸಿಇಎನ್‌ಗೆ ದೂರು

Date:

ಕೆಲವು ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ ಮಾಜಿ ಪ್ರೇಮಿ ಮತ್ತು ಆತನ ಸಹಚರನ ವಿರುದ್ಧ ಶಿಕ್ಷಕಿಯೊಬ್ಬರು ಪೊಲೀಸರಿಗೆ ದೂರು ನೀಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

“10 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದ್ದ ಆರೋಪಿಯು, ತನ್ನ ಪತಿಯನ್ನು ತೊರೆದು ಬರುವಂತೆ ಬ್ಲಾಕ್‌ಮೇಲ್ ಮಾಡುತ್ತಿದ್ದ” ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಈ ಸಂಬಂಧ ಸಂತ್ರಸ್ತ ಶಿಕ್ಷಕಿ ಪೊಲೀಸರಿಗೆ ದೂರು ನೀಡಿದ್ದರು. ದೂರು ದಾಖಲಾದ ಬೆನ್ನಲ್ಲೇ ನಾಪತ್ತೆಯಾಗಿದ್ದ ಆರೋಪಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಬ್ದುಲ್ ಅಸೀಮ್ ಮತ್ತು ಆತನ ಸಹಚರ ಮಯೂರ್ ಎಂಬಾತನ ವಿರುದ್ಧ ದೂರು ದಾಖಲಾಗಿದೆ.

ಘಟನೆ ಹಿನ್ನೆಲೆ

ಅದ್ಬುಲ್ ಅಸೀಮ್ ಮತ್ತು ಸಂತ್ರಸ್ತೆ ಏಳು ವರ್ಷಗಳಿಂದ ಪರಿಚಿತರಾಗಿದ್ದರು. ಎರಡು ವರ್ಷಗಳ ಹಿಂದೆ ಮಹಿಳೆ ಬೇರೊಬ್ಬರನ್ನು ಮದುವೆಯಾಗಿದ್ದರು. ಹೀಗಾಗಿ, ಪತಿಯನ್ನು ಬಿಟ್ಟು ತನ್ನೊಂದಿಗೆ ಬರುವಂತೆ ಆರೋಪಿ ಸಂತ್ರಸ್ತೆ ಮೇಲೆ ಒತ್ತಡ ಹೇರುತ್ತಿದ್ದ ಎನ್ನಲಾಗಿದೆ.

ಪತಿಯನ್ನು ಬಿಟ್ಟು ಬಾರದಿದ್ದರೆ ಆಕೆಯ ಖಾಸಗಿ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಆರೋಪಿ ಅಬ್ದುಲ್ ಅಸೀಮ್ ತನ್ನ ಸಹಚರ ಮಯೂರ್ ಜೊತೆಗೆ ಆಕೆಯ ಖಾಸಗಿ ವಿಡಿಯೋಗಳನ್ನು ಮಹಿಳೆಯ ಪತಿ ಮತ್ತು ಕುಟುಂಬ ಸದಸ್ಯರಿಗೆ ಕಳುಹಿಸಿದ್ದ.

ಈ ಸುದ್ದಿ ಓದಿದ್ದೀರಾ? ತನ್ನ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾನೆಂಬ ಕಾರಣಕ್ಕೆ ವ್ಯಕ್ತಿಯೊಬ್ಬನ ಕತ್ತು ಕೊಯ್ದು ಕೊಲೆ

ಗಂಡನನ್ನು ಬಿಟ್ಟು ಬಾರದಿದ್ದರೆ ಹಿಂದೂ-ಮುಸ್ಲಿಂ ಸಂಘರ್ಷಕ್ಕೂ ನಾಂದಿ ಹಾಡುವುದಾಗಿ ಬೆದರಿಕೆ ಹಾಕಿದ್ದ. ಖಾಸಗಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಬಾರದು ಎಂದಾದರೆ 10 ಲಕ್ಷ ರೂ. ನೀಡಬೇಕೆಂದು ಬೇಡಿಕೆ ಇಟ್ಟಿದ್ದನು. ಹಣ ನೀಡದಿದ್ದಲ್ಲಿ ಆಕೆಯ ಖಾಸಗಿ ವಿಡಿಯೋದ ದೃಶ್ಯಗಳ ಬ್ಯಾನರ್‌ಗಳನ್ನು ಆ ಪ್ರದೇಶದಲ್ಲಿ ಹಾಕುವುದಾಗಿ ಆರೋಪಿ ಬೆದರಿಕೆಯೊಡ್ಡಿದ್ದ.

ಈ ಸಂಬಂಧ ಸಂತ್ರಸ್ತೆ ಸೈಬರ್ ಎಕನಾಮಿಕ್ ಅಂಡ್ ನಾರ್ಕೋಟಿಕ್ಸ್ ಕ್ರೈಂ ಪೊಲೀಸ್ ಠಾಣೆಗೆ (ಸಿಇಎನ್) ದೂರು ನೀಡಿದ್ದಾರೆ. ಸದ್ಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಕಾಲೇಜಿಗೆ ತೆರಳಿ ಮತ ಕೇಳಿದ ಬಿಜೆಪಿ ಅಭ್ಯರ್ಥಿ : ಕ್ರಮಕ್ಕೆ ಆಗ್ರಹ

ಬಿರು ಬಿಸಿಲಿನ ನಡುವೆ ಸದ್ಯ ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗಿದೆ. ರಾಜಕೀಯ...

ಚಾಮರಾಜನಗರ | ಕಾರಿನ ಮೇಲೆ ಕಬ್ಬಿನ ಲಾರಿ ಪಲ್ಟಿ; ಮೂವರ ದುರ್ಮರಣ

ಕಾರಿನ ಮೇಲೆ ಕಬ್ಬಿನ ಲಾರಿ ಉರುಳಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ...

ಚಾಮರಾಜನಗರ | ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಕಾಡ್ಗಿಚ್ಚು; ಅಂದಾಜು 50 ಎಕರೆ ಪ್ರದೇಶಕ್ಕೆ ಬೆಂಕಿ

ಚಾಮರಾಜನಗರ ಜಿಲ್ಲೆಯ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸೋಮವಾರ ಕಾಡ್ಗಿಚ್ಚು ಉಂಟಾಗಿದ್ದು,...

ಮೈಸೂರು | ಕೃಷಿ ಸಲಕರಣಾ ವಿತರಕರು ಹೊಸ ಯೋಜನೆಗಳ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು: ಜಂಟಿ ಕೃಷಿ ನಿರ್ದೇಶಕ

ಕೃಷಿ ಸಲಕರಣೆಗಳ ವಿತರಕರು ರೈತರಿಗೆ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುವುದರ ಜತೆಗೆ...