ಬಸವಣ್ಣನವರ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ರವಿ ಹಂಚ್ ವಿರುದ್ಧ ಕ್ರಮಕ್ಕೆ ಆಗ್ರಹ

Date:

ವಿಶ್ವಗುರು ಬಸವಣ್ಣನವರ ಕುರಿತು ಬಸವ ಮಂಟಪ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅನಿವಾಸಿ ಭಾರತೀಯ ರವಿ ಹಂಚ್ ಅವರು ಆಡಿದ್ದಾರೆ ಎನ್ನಲಾದ ಅವಹೇಳನಕಾರಿ ಹೇಳಿಕೆಗಳನ್ನು ಅಖಿಲ ಭಾರತ ವೀರಶೈವ ಮಹಾಸಭಾ, ಬಸವ ಕೇಂದ್ರ ಹಾಗೂ ಬಸವ ಸಂಸ್ಕೃತಿ ಅಭಿಯಾನ ಸಮಿತಿ ತೀವ್ರವಾಗಿ ಖಂಡಿಸಿವೆ.

- Advertisement -

ಚಾಮರಾಜನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮುಖಂಡರು, ಬಸವಣ್ಣನವರು ಜಾತಿ, ಧರ್ಮದ ಗಡಿಗಳನ್ನು ಮೀರಿ ಸಮಾನತೆ, ಕಾಯಕ, ದಾಸೋಹ ಹಾಗೂ ಮಾನವೀಯ ಮೌಲ್ಯಗಳನ್ನು ಸಾರಿದ ವಿಶ್ವಗುರು. ಅವರ ಕುರಿತು ಅಪಹಾಸ್ಯ ಮಾಡುವುದು ಖಂಡನೀಯ. ರವಿ ಹಂಚ್ ಅವರ ಹೇಳಿಕೆಗಳ ಸಂಪೂರ್ಣ ವಿಡಿಯೋ ಪರಿಶೀಲಿಸಿ, ಹೇಳಿಕೆಗಳ ಹಿನ್ನೆಲೆ ಹಾಗೂ ಉದ್ದೇಶದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಕಾನೂನು ಉಲ್ಲಂಘನೆ ಕಂಡುಬಂದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ಪ.ಬಂಗಾಳ- SIR ಮೇಲ್ಮನವಿ | 19 ನ್ಯಾಯಾಧಿಕರಣಗಳ ದುರ್ಗತಿ-...

ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯ (ಎಸ್‌ಐಆರ್‌) ಮೇಲ್ಮನವಿಗಳ ಇತ್ಯರ್ಥಕ್ಕೆ ಸ್ಥಾಪಿಸಲಾದ 19 ನ್ಯಾಯಾಧಿಕರಣಗಳು ಸಾಲುಸಾಲು ಸಮಸ್ಯೆಗಳ ಸುಳಿಯಲ್ಲಿ ಸಿಲುಕಿವೆ. ಕಾರ್ಯಭಾರ, ಕೆಂಪುಪಟ್ಟಿ ಆಡಳಿತದಿಂದ ನಿವೃತ್ತ ನ್ಯಾಯಮೂರ್ತಿಗಳ ರಾಜೀನಾಮೆ, ಸಿಬ್ಬಂದಿಯ ವೇತನ ವಿಳಂಬದ...

ಕೃಷಿಮೇಳ | ‘ಪ್ರಕೃತಿ ಕೊಡಾದೆಲ್ಲ ಒಳ್ಳೀದೆ ಇರ್ತೈತಿ, ಮನ್ಷಾನೇ...

"ಪ್ರಕೃತಿ ಮನುಷ್ಯನಿಗೆ ಕೊಡುವುದೆಲ್ಲವೂ ಒಳ್ಳೆಯದೇ ಇರುತ್ತದೆ, ಆದರೆ ಮನುಷ್ಯ ಪ್ರಕೃತಿಯನ್ನು ಮರೆತು ಏನೇನೋ ಹುಡುಕಿಕೊಂಡು ಹೊರಟಿದ್ದಾನೆ" ಇದು ತಲೆಮಾರುಗಳಿಂದ ಕಂಬಳಿ ನೇಯ್ದು ಬದುಕು ಕಟ್ಟಿಕೊಂಡಿರುವ ಕಂಬಳಿ ನೇಕಾರರ ಮನದಾಳ. ಅಜ್ಜ-ಮುತ್ತಜ್ಜರ ಕಾಲದಿಂದಲೂ ನಡೆದುಕೊಂಡು...

ವೈಚಾರಿಕ ಚಿಂತಕರಾದ ಕಲಬುರ್ಗಿ, ಗೌರಿ ಲಂಕೇಶ್, ದಾಭೋಲ್ಕರ್ ಮತ್ತು ಪನ್ಸಾರೆ ಅವರ ಹತ್ಯೆಗಳ ಹಿನ್ನೆಲೆಯಲ್ಲಿ ವೈಚಾರಿಕ ಭಿನ್ನಾಭಿಪ್ರಾಯಗಳಿಗೆ ಹಿಂಸೆಯ ರೂಪ ನೀಡುವ ಪ್ರವೃತ್ತಿಗಳ ಬಗ್ಗೆಯೂ ಎಚ್ಚರಿಕೆ ಅಗತ್ಯ. ಆದರೆ, ಈ ಹಿಂದಿನ ಹತ್ಯೆಗಳಿಗೂ ರವಿ ಹಂಚ್ ಅವರಿಗೂ ನೇರ ಸಂಬಂಧ ಕಲ್ಪಿಸಲು ಯಾವುದೇ ಆಧಾರವಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ತನಿಖಾ ವರದಿ ಓದಿದ್ದೀರಾ? ತನಿಖಾ ವರದಿ | ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ಬದಲಾವಣೆ ಸುತ್ತ ರಾಜಕೀಯ: ಆದೇಶವಿಲ್ಲದೆ ನೇಮಕದ ಸುದ್ದಿ ಹರಡಿದ್ದೇಕೆ?

ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಮೊದಲು ಚಾಮರಾಜನಗರದಲ್ಲಿ, ನಂತರ ಬೆಂಗಳೂರಿನಲ್ಲಿ ರಾಜ್ಯಮಟ್ಟದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ವಿಶೇಷ ಲೇಖನ ಓದಿದ್ದೀರಾ? ಆರ್‌ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಬಸವ ಕೇಂದ್ರದ ಅಧ್ಯಕ್ಷ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ರಾಷ್ಟ್ರೀಯ ನಿರ್ದೇಶಕ ಎಚ್.ಎಸ್. ಮಹದೇವಸ್ವಾಮಿ, ಕೆ. ವೀರಭದ್ರಸ್ವಾಮಿ, ಮಹದೇವಪ್ಪ ದೇವನಹಳ್ಳಿ, ವಕೀಲರಾದ ನಂಜೆದೇವನಪುರ ಪೃಥ್ವಿ, ಮಹದೇವಸ್ವಾಮಿ ಹಾಗೂ ಮರಿಯಾಲ ಸ್ವಾಮಿ ಸೇರಿದಂತೆ ಹಲವು ಮುಖಂಡರು ಇರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬಸವಣ್ಣನ ಕುರಿತು ಅವಹೇಳನ: ರವಿ ಹಂಜ ಬಂಧನಕ್ಕೆ ಆಗ್ರಹ

12ನೇ ಶತಮಾನದಲ್ಲಿ ವರ್ಣ ವ್ಯವಸ್ಥೆಯನ್ನು ವಿರೋಧಿಸಿ, ಸಮಾನತೆ, ಕಾಯಕ ಮತ್ತು ದಾಸೋಹದ...

 ಗದಗ | ಕೈಗಾರಿಕಾ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವಂತೆ ಪತ್ರ ಚಳವಳಿ

ಕರ್ನಾಟಕದಲ್ಲಿ ಖಾಸಗಿ ಕೈಗಾರಿಕಾ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ನೀಡುವ ಕಾನೂನು ಜಾರಿಗೊಳಿಸುವಂತೆ...

ಶಿವಮೊಗ್ಗ | ಬೈಪಾಸ್‌ ರಸ್ತೆ ಅಕ್ರಮ ಒತ್ತುವರಿ ತೆರವು: ಪೊಲೀಸರ ಕಾರ್ಯಕ್ಕೆ ಜನರ ಮೆಚ್ಚುಗೆ

ಶಿವಮೊಗ್ಗ ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಸಾರ್ವಜನಿಕ ಸಂಚಾರಕ್ಕೆ ಅಡ್ಡಿಯಾಗಿದ್ದ ಅಂಗಡಿಗಳನ್ನು,...

ಹಾಸನ | ವಾಹನ ಅಪಘಾತ: ಸ್ಥಳದಲ್ಲೇ ಓರ್ವ ಸಾವು 

ಸಕಲೇಶಪುರ ತಾಲೂಕಿನ ಬಾಳ್ಳುಪೇಟೆಯ ವೈಭವ್‌ ಲೇಔಟ್ ಸಮೀಪದಲ್ಲಿ ಬೈಕ್ ಗೆ ಕೆಎಸ್‌ಆರ್‌ಟಿಸಿ...