ಚಾಮರಾಜನಗರ ಜಿಲ್ಲಾ ಪಿಯುಸಿಎಲ್ ಅಧ್ಯಕ್ಷರಾಗಿ ಡಿ.ಎಸ್. ದೊರೆಸ್ವಾಮಿ ಆಯ್ಕೆ

Date:

ಚಾಮರಾಜನಗರದ ರಂಗಕರ್ಮಿ ಕೆ. ವೆಂಕಟರಾಜು ಅವರ ‘ನೆಲೆ’ ನಿವಾಸದಲ್ಲಿ ನಡೆದ ಜಿಲ್ಲಾ ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ (PUCL) ಘಟಕದ ಸರ್ವಸದಸ್ಯರ ಸಭೆಯಲ್ಲಿ ನೂತನ ಜಿಲ್ಲಾ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

- Advertisement -

ಸಭೆಯಲ್ಲಿ ರಾಜ್ಯ ಪಿಯುಸಿಎಲ್ ಕಾರ್ಯದರ್ಶಿ ಸುಜಾಯಿತ್ ಉಲ್ಲಾ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಸಭೆಯಲ್ಲಿ ನಡೆದ ಚುನಾವಣೆಯಲ್ಲಿ ಜಿಲ್ಲಾ ಅಧ್ಯಕ್ಷರಾಗಿ ಡಿ.ಎಸ್. ದೊರೆಸ್ವಾಮಿ ಆಯ್ಕೆಯಾದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ ದೊಡ್ಡ ಪ್ರಮಾಣದಲ್ಲಿ ದೂರ ಸರಿದಿದ್ದಾರೆ. ಉದ್ಯೋಗದ ಅನಿಶ್ಚಿತತೆ, ದುಬಾರಿ ಜೀವನ, ಭವಿಷ್ಯದ ಆತಂಕ ಹಾಗೂ ಸರ್ಕಾರದ ನೀತಿಗಳ ಕುರಿತ ಅಸಮಾಧಾನ...

ಸಾಮಾಜಿಕ ನ್ಯಾಯ | ಕಾಂಗ್ರೆಸ್ ಸರ್ಕಾರದ ಭರವಸೆಗಳು ಮತ್ತು...

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಕೇವಲ ಮುಸ್ಲಿಂ ಸಮುದಾಯದ ಅಭಿವೃದ್ಧಿಯಲ್ಲ. ಕ್ರೈಸ್ತರು, ಜೈನರು, ಸಿಖ್ಖರು, ಬೌದ್ಧರು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ, ಉದ್ಯೋಗ, ವಸತಿ ಮತ್ತು ಆರ್ಥಿಕ ಅಭಿವೃದ್ಧಿಯ ಅಗತ್ಯಗಳನ್ನೂ ಸಮಾನವಾಗಿ ಪರಿಗಣಿಸಬೇಕು....

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ರಾಜ್ಯ ಪಿಯುಸಿಎಲ್ ಸದಸ್ಯರಾಗಿ ಕೆ. ವೆಂಕಟರಾಜು ಮತ್ತು ಅಬ್ರಹಾಂ ಡಿ. ಸಿಲ್ವಾ ಆಯ್ಕೆಯಾದರು. ಜಿಲ್ಲಾ ಕಾರ್ಯದರ್ಶಿಯಾಗಿ ಜೆ. ದಯಾಗೈಡ್, ಸಹಕಾರ್ಯದರ್ಶಿಯಾಗಿ ಬೆಜ್ಜಲಪಾಳ್ಯ ವೆಂಕಟೇಶ್, ಉಪಾಧ್ಯಕ್ಷರಾಗಿ ಸಂಗಸೇನಾ ಮತ್ತು ಸಿ. ಮಹದೇವಯ್ಯ, ಖಜಾಂಚಿಯಾಗಿ ಮುತ್ತುರಾಜ್ ಆಯ್ಕೆಯಾದರು.

ಈ ವಿಶೇಷ ಬರಹ ಓದಿದ್ದೀರಾ? ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ ಎತ್ತರಕ್ಕೆ: ಅಕ್ಷರಗಳ ಮೂಲಕ ಅಮರರಾದ ಕೆವಿಎನ್

ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಕಾರ್ಯದರ್ಶಿ ಸುಜಾಯಿತ್ ಉಲ್ಲಾ ಅವರು, ಮಾನವ ಹಕ್ಕುಗಳು ಮತ್ತು ನಾಗರಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದಂತೆ ಎಸ್‌ಐಆರ್ (SIR) ವಿಚಾರವೂ ಸೇರಿದಂತೆ ವಿವಿಧ ವಿಷಯಗಳಲ್ಲಿ ರಾಜ್ಯ ಉಚ್ಚ ನ್ಯಾಯಾಲಯ ಹಾಗೂ ಸರ್ವೋಚ್ಚ ನ್ಯಾಯಾಲಯಗಳಲ್ಲಿ ಕಾನೂನು ಹೋರಾಟ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಈ ವಿಶೇಷ ವರದಿ ಓದಿದ್ದೀರಾ? ಅಕ್ಕಿ ಬೆಲೆ ಏರಿಕೆಯ ಹಿಂದಿನ ಆಟ ಯಾರದ್ದು?: ಕಾರ್ಪೋರೇಟ್ ಮಾರುಕಟ್ಟೆಯ ಕರಾಮತ್ತು!

ಚಾಮರಾಜನಗರ ಜಿಲ್ಲಾ ಪಿಯುಸಿಎಲ್ ಘಟಕವು ಈ ಹಿಂದೆ ಹಲವು ಮಹತ್ವದ ತನಿಖಾ ವರದಿಗಳನ್ನು ಸಿದ್ಧಪಡಿಸಿ ಸಾರ್ವಜನಿಕರ ಗಮನ ಸೆಳೆದಿರುವುದು ಶ್ಲಾಘನೀಯ. ಮಾನವ ಹಕ್ಕುಗಳ ಉಲ್ಲಂಘನೆ, ಸಾಮಾಜಿಕ ಅನ್ಯಾಯ ಹಾಗೂ ನಾಗರಿಕರ ಹಕ್ಕುಗಳ ರಕ್ಷಣೆಯ ವಿಚಾರದಲ್ಲಿ ಜಿಲ್ಲಾ ಘಟಕದ ಕಾರ್ಯಚಟುವಟಿಕೆಗಳು ಮತ್ತಷ್ಟು ಪರಿಣಾಮಕಾರಿಯಾಗಿ ಮುಂದುವರಿಯಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಈ ವಿಶೇಷ ವರದಿ ಓದಿದ್ದೀರಾ? ಅಕ್ಕಿ ಬೆಲೆ ಏರಿಕೆಯ ಬಿಸಿ: ಗ್ರಾಹಕರ ಕೈ ಸುಡುತ್ತಿದೆ, ಆಹಾರ ಭದ್ರತೆಗೆ ಎದುರಾಗಿದೆ ಸವಾಲು!

ಸಭೆಯಲ್ಲಿ ಭಾಗವಹಿಸಿದ್ದ ಸದಸ್ಯರು ಸಂಘಟನೆಯ ಮುಂದಿನ ಕಾರ್ಯಯೋಜನೆಗಳು, ಮಾನವ ಹಕ್ಕುಗಳ ರಕ್ಷಣೆ ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಸೂಕ್ತ ಸಲಹೆ-ಸೂಚನೆಗಳನ್ನು ನೀಡಿದರು. ಚುನಾವಣಾ ಪ್ರಕ್ರಿಯೆಯನ್ನು ಅಬ್ರಹಾಂ ಡಿ’ ಸಿಲ್ವ ನಡೆಸಿಕೊಟ್ಟರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಪಟಾಕಿ ಮಳಿಗೆಗಳಲ್ಲಿ ಅಪ್ರಾಪ್ತರ ದುಡಿಮೆ ನಿಷೇಧ: ನೇಮಕ ಮಾಡಿದರೆ ಕಾನೂನು ಕ್ರಮ

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲೆ ಹಾಗೂ ವಿವಿಧ ತಾಲೂಕು ಕೇಂದ್ರಗಳಲ್ಲಿ ತೆರೆಯಲಾಗುವ...

ಧಾರವಾಡ | ನಮ್ಮ ಮನೆಯಿಂದಲೇ ಕನ್ನಡ ಉಳಿಸಿ, ಬೆಳೆಸೋಣ: ಲಿಂಗರಾಜ ಪಾಟೀಲ್

"ಪ್ರಸ್ತುತ ಆಧುನಿಕ ದಿನಗಳಲ್ಲಿ ಹಿರಿಯರು ತಪ್ಪು ಮಾಡುತ್ತಿದ್ದಾರೆ. ತಮ್ಮ ಮಕ್ಕಳು, ಮೊಮ್ಮಕ್ಕಳನ್ನು...

ಹಾವೇರಿ | ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ಪ್ರಜಾಸೇವಾ ಆಂದೋಲನ: ಸಚಿವ ರುದ್ರಪ್ಪ ಲಮಾಣಿ

"ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ...

ಗದಗ | ಪ್ರಕೃತಿ ವಿಕೋಪದ ಸಂಕಷ್ಟಕ್ಕೆ ರೈತರ ನೆರವಿಗೆ ಫಸಲ್ ಬಿಮಾ ಯೋಜನೆ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

"ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆ...