ಕೊಳ್ಳೆಗಾಲ | ಕಬ್ಬಿಗೆ ಟನ್‌ಗೆ ₹6,000 ಎಂಎಸ್‌ಪಿ ನಿಗದಿಗೆ ಆಗ್ರಹ

Date:

ಕಬ್ಬಿಗೆ ಪ್ರತಿ ಟನ್‌ಗೆ ₹6,000 ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಉತ್ತಂಬಳ್ಳಿ ರಾಷ್ಟ್ರೀಯ ಹೆದ್ದಾರಿ ಸೇತುವೆ ಮೇಲೆ ಕಬ್ಬು ಬೆಳೆಗಾರರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನಾಕಾರರು ಬೆಂಗಳೂರು-ತಮಿಳುನಾಡು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿಯನ್ನು ಸುಮಾರು ನಾಲ್ಕು ಗಂಟೆಗಳ ಕಾಲ ಬಂದ್ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಹಳ್ಳಿ ಕೆರೆಹುಂಡಿ ಭಾಗ್ಯರಾಜ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಬ್ಬು ಬೆಳೆಗಾರರ ಹಕ್ಕುಗಳನ್ನು ರಕ್ಷಿಸಬೇಕು ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು.

ದೇಶದಲ್ಲಿ ಐದು ಕೋಟಿಗೂ ಹೆಚ್ಚು ಕಬ್ಬು ಬೆಳೆಗಾರರು ಕೃಷಿ ಮತ್ತು ಆರ್ಥಿಕ ವ್ಯವಸ್ಥೆಗೆ ಮಹತ್ವದ ಕೊಡುಗೆ ನೀಡುತ್ತಿದ್ದಾರೆ. ರಾಜ್ಯಗಳ ಆರ್ಥಿಕ ಅಭಿವೃದ್ಧಿಯಲ್ಲಿಯೂ ಕಬ್ಬು ಉದ್ಯಮ ಪ್ರಮುಖ ಪಾತ್ರ ವಹಿಸುತ್ತಿದೆ. ಇಷ್ಟೊಂದು ಮಹತ್ವದ ಕೊಡುಗೆ ನೀಡುತ್ತಿರುವ ಕಬ್ಬು ಬೆಳೆಗಾರರ ಹಿತಾಸಕ್ತಿ ಕಾಪಾಡುವುದು ಸರ್ಕಾರಗಳ ಜವಾಬ್ದಾರಿಯಾಗಿದೆ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು.

ಕಬ್ಬು ಬೆಳೆಗಾರರ ಪ್ರಮುಖ ಬೇಡಿಕೆಗಳು

ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.

  1. ಕಬ್ಬಿಗೆ ಪ್ರತಿ ಟನ್‌ಗೆ ₹6,000 ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಬೇಕು. ಎಂ.ಎಸ್. ಸ್ವಾಮಿನಾಥನ್ ವರದಿಯ ಶಿಫಾರಸುಗಳನ್ನು ಜಾರಿಗೊಳಿಸಬೇಕು.
  2. ಕಬ್ಬಿನ ಇಳುವರಿ ಆಧಾರವಾಗಿ ಶೇ.9.25ರ ಮಾನದಂಡದಡಿ ದರ ನಿಗದಿಪಡಿಸಲು ಕೇಂದ್ರ ಸರ್ಕಾರ ಸೂಕ್ತ ಆದೇಶ ಹೊರಡಿಸಬೇಕು.
  3. ವಾಣಿಜ್ಯ ಉದ್ದೇಶಗಳಿಗೆ ಬಳಕೆಯಾಗುವ ಸಕ್ಕರೆಯ ಬೆಲೆಯನ್ನು ಹೆಚ್ಚಿಸುವ ಮೂಲಕ ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ದೊರೆಯುವಂತೆ ಮಾಡಬೇಕು.
  4. ಎಥನಾಲ್ ಉತ್ಪಾದನೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಪ್ರತಿ ಲೀಟರ್ ಎಥನಾಲ್‌ಗೆ ₹80 ದರ ನಿಗದಿಪಡಿಸಿ ಖರೀದಿಸಬೇಕು. ರೈತರಿಗೆ ಎಥನಾಲ್ ಉತ್ಪಾದನೆಗೆ ಅವಕಾಶ ಕಲ್ಪಿಸಿ, ಉತ್ಪಾದಿತ ಎಥನಾಲ್ ಖರೀದಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.
  5. ಕಬ್ಬಿನ ಕಟಾವು ಮತ್ತು ಸಾಗಣೆ ವೆಚ್ಚವನ್ನು ಸಕ್ಕರೆ ಕಾರ್ಖಾನೆಗಳ ಮಾಲೀಕರೇ ಭರಿಸಬೇಕು.
  6. ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆಗಳ ನಡುವೆ ದ್ವಿಪಕ್ಷೀಯ ಒಪ್ಪಂದ ಪತ್ರವನ್ನು ಜಾರಿಗೊಳಿಸಬೇಕು.
  7. ಕಬ್ಬಿನ ಬಾಕಿ ಹಣ ಅಥವಾ ಲಾಭಾಂಶ ಹಂಚಿಕೆಯ ಮೊತ್ತವನ್ನು ಪಾವತಿಸದ ಕಾರ್ಖಾನೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಕಬ್ಬು ಖರೀದಿಸಿದ 14 ದಿನಗಳೊಳಗೆ ರೈತರಿಗೆ ಹಣ ಪಾವತಿಸುವುದನ್ನು ಕಡ್ಡಾಯಗೊಳಿಸಬೇಕು.
  8. ಎಲ್ಲ ಸಕ್ಕರೆ ಕಾರ್ಖಾನೆಗಳ ಮುಂದೆ ಸರ್ಕಾರದ ವತಿಯಿಂದ ತೂಕದ ಯಂತ್ರಗಳನ್ನು ಅಳವಡಿಸಬೇಕು.
  9. ಕಬ್ಬಿನ ಇಳುವರಿ ಲೆಕ್ಕಾಚಾರದಲ್ಲಿ ನಡೆಯುವ ವಂಚನೆಗಳನ್ನು ತಡೆಯಲು ಸ್ಥಳೀಯ ತಜ್ಞರ ಸಮಿತಿಯನ್ನು ನೇಮಿಸಬೇಕು.
  10. ಹೊಸ ಸಕ್ಕರೆ ಕಾರ್ಖಾನೆಗಳ ಸ್ಥಾಪನೆ ಹಾಗೂ ಕಬ್ಬು ಮೀಸಲು ಪ್ರದೇಶಕ್ಕೆ ಸಂಬಂಧಿಸಿದ ನಿಯಮಗಳನ್ನು ತೆಗೆದುಹಾಕಬೇಕು.
  11. ಕಬ್ಬು ಬೆಳೆಯನ್ನೂ ಬೆಳೆ ವಿಮೆ ಯೋಜನೆಯ ವ್ಯಾಪ್ತಿಗೆ ತರಬೇಕು.
  12. ಕಬ್ಬು ಬೆಳೆಗಾರರ ಜೀವ ಮತ್ತು ಕುಟುಂಬಗಳ ಆರ್ಥಿಕ ಭದ್ರತೆಗಾಗಿ ಪ್ರತ್ಯೇಕ ವಿಮಾ ಯೋಜನೆಯನ್ನು ಜಾರಿಗೊಳಿಸಬೇಕು.

ಇದರೊಂದಿಗೆ, ಕಳೆದ ವರ್ಷದ ಕಬ್ಬಿನ ಬಾಕಿ ಮೊತ್ತದ ಭಾಗವಾಗಿ ಪ್ರತಿ ಟನ್‌ಗೆ ₹50ರಂತೆ ರೈತರಿಗೆ ಸರ್ಕಾರ ಹಣ ಪಾವತಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಕೊಳ್ಳೇಗಾಲ ತಹಸೀಲ್ದಾರ್ ಬಸವರಾಜ್ ಆಗಮಿಸಿ, ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು. ಪ್ರತಿಭಟನೆಯನ್ನು ಕೈಬಿಡುವಂತೆ ಮನವೊಲಿಸಲು ಪ್ರಯತ್ನಿಸಿದರು. ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಗಮನಹರಿಸಬೇಕು. ರೈತರು ಬೆಳೆದ ಕಬ್ಬಿಗೆ ನ್ಯಾಯಯುತ ಬೆಲೆ ದೊರೆಯಬೇಕು ಹಾಗೂ ಬಾಕಿ ಹಣವನ್ನು ಸಕಾಲದಲ್ಲಿ ಪಾವತಿಸುವ ವ್ಯವಸ್ಥೆ ಜಾರಿಯಾಗಬೇಕು ಎಂಬುದು ಪ್ರತಿಭಟನಾಕಾರರ ಪ್ರಮುಖ ಆಗ್ರಹವಾಗಿತ್ತು.

ಈ ವಿಶೇಷ ವರದಿ ಓದಿದ್ದೀರಾ? ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

ಪ್ರತಿಭಟನೆಯಲ್ಲಿ ಗೌಡೇಗೌಡ, ಗೌಡಳ್ಳಿ ಸೋಮಣ್ಣ, ಜಿಲ್ಲಾಧ್ಯಕ್ಷ ಹಾಲಿನ ನಾಗರಾಜ್, ಪ್ರಕಾಶ್ ಗಾಂಧಿ, ದೇಮಳ್ಳಿ ಪ್ರಸಾದ್, ಮಲೆಯೂರು ಮಹೇಂದ್ರ, ಸತೀಶ್, ಉತ್ತಂಬಳ್ಳಿ ಗಣೇಶ್, ಸ್ಯಾಂಡರಳ್ಳಿ ಬಸವರಾಜು, ಶ್ರೀಕಂಠ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ ಬದುಕು!

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು...

ಬೀದರ್ | ಸಿಇಸಿ ಜ್ಞಾನೇಶ್‌ ಕುಮಾರ್‌ ವಜಾ, ಎಸ್ಐಆರ್ ರದ್ದತಿಗೆ ಕದಸಂಸ ಆಗ್ರಹ

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಸ್ಥಗಿತಗೊಳಿಸಿ, ಮುಖ್ಯ...

ಶಿವಮೊಗ್ಗ | ವಿಮಾ ಪಾಲಿಸಿ ಪುನರಾರಂಭಿಸದ ಕಂಪನಿಗೆ ದಂಡ: ಗ್ರಾಹಕ ಆಯೋಗ ಆದೇಶ

ನಿಯಮಾನುಸಾರ ಕಂತು ಪಾವತಿಸಿದರೂ ಜೀವ ವಿಮಾ ಪಾಲಿಸಿಯನ್ನು ಪುನರಾರಂಭಿಸದೆ ಸೇವಾ ನ್ಯೂನತೆ...

ಕಬ್ಬಿಗೆ ರೂ.5,500 ಬೆಂಬಲ ಬೆಲೆ ಆಗ್ರಹ: ಬಿರುಬಿಸಿಲಿಗೆ ಜಗ್ಗದೇ ಸಾಗಿದ ರೈತ ಹೋರಾಟ!

ಸೆಪ್ಟೆಂಬರ್ 29 ರಂದು ಹುಬ್ಬಳ್ಳಿಯಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸಿದ್ದರು. ನಂತರ...