ಚಾಮರಾಜನಗರ ಜಿಲ್ಲೆಯ ವಿವಿಧ ಭಾಗಗಳಿಗೆ ಜಿಲ್ಲಾಧಿಕಾರಿ ಶ್ರೀರೂಪ ಭೇಟಿ: ಎಸ್‌ಐಆರ್ ಪ್ರಕ್ರಿಯೆ ಪರಿಶೀಲನೆ

Date:

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿ ಶ್ರೀರೂಪ ಅವರು ಬುಧವಾರ ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

- Advertisement -

ಚಾಮರಾಜನಗರ ತಾಲ್ಲೂಕಿನ ಉಡಿಗಾಲ, ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ, ತ್ರಿಯಂಭಕಪುರ, ಕಗ್ಗಳ ಹಾಗೂ ಗುಂಡ್ಲುಪೇಟೆ ಪಟ್ಟಣದ ವಿವಿಧ ವಾರ್ಡ್‌ಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಯವರು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣಾ ಕಾರ್ಯವನ್ನು ಖುದ್ದಾಗಿ ವೀಕ್ಷಿಸಿ ಪ್ರಗತಿ ಪರಿಶೀಲನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಪರಿಷ್ಕರಣೆ ಕಾರ್ಯದಲ್ಲಿ ನಿರತರಾಗಿದ್ದ ಬೂತ್ ಮಟ್ಟದ ಅಧಿಕಾರಿಗಳಿಂದ (ಬಿಎಲ್‌ಒ) ಮಾಹಿತಿ ಪಡೆದು, ಕಾರ್ಯದ ಸ್ಥಿತಿಗತಿಗಳ ಕುರಿತು ವಿವರವಾಗಿ ಚರ್ಚಿಸಿದರು. ಇದೇ ವೇಳೆ ಬೂತ್ ಮಟ್ಟದ ಅಧಿಕಾರಿಗಳೊಂದಿಗೆ ಮತದಾರರ ಮನೆಗಳಿಗೆ ಭೇಟಿ ನೀಡಿ ಗಣತಿ ನಮೂನೆ (ಎನ್ಯೂಮರೇಷನ್ ಫಾರಂ) ವಿತರಿಸಿದರು.

ಈ ಸಂದರ್ಭದಲ್ಲಿ ಮತದಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಯವರು, ಫಾರಂ ಅನ್ನು ಸರಿಯಾಗಿ ಭರ್ತಿ ಮಾಡಿ ಸಹಿ ಹಾಕಿದ ನಂತರ ಮನೆಗೆ ಭೇಟಿ ನೀಡುವ ಬೂತ್ ಮಟ್ಟದ ಅಧಿಕಾರಿಗಳಿಗೆ ಸಲ್ಲಿಸಬೇಕು ಎಂದು ತಿಳಿಸಿದರು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಅತ್ಯಂತ ಮಹತ್ವದ್ದಾಗಿದ್ದು, ಅರ್ಹ ಮತದಾರರು ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಎಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ಪರಿಷ್ಕರಣೆ ಸಂಬಂಧ ಯಾವುದೇ ಗೊಂದಲ ಅಥವಾ ಸಮಸ್ಯೆಗಳಿದ್ದಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು, ಮೇಲ್ವಿಚಾರಕರು, ಮತದಾರರ ನೋಂದಣಾಧಿಕಾರಿಗಳು ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿಗಳನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಬಹುದು ಎಂದು ಅವರು ತಿಳಿಸಿದರು.

ಬೂತ್ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಿಲ್ಲಾಧಿಕಾರಿ ಶ್ರೀರೂಪ ಅವರು, ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದು ಸೂಚಿಸಿದರು. ಮತದಾರರಿಂದ ಸ್ವೀಕರಿಸಲಾದ ಗಣತಿ ನಮೂನೆಗಳನ್ನು ತಕ್ಷಣವೇ ಡಿಜಿಟಲೀಕರಣಗೊಳಿಸಿ, ನಿಗದಿತ ಅವಧಿಯೊಳಗೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಶೇ.64ರಷ್ಟು ಬೋಧಕ ಹುದ್ದೆ ಖಾಲಿ: ಉನ್ನತ ಶಿಕ್ಷಣದ ಗುಣಮಟ್ಟಕ್ಕೆ ಗಂಭೀರ ಸವಾಲು

ಪರಿಶೀಲನಾ ಭೇಟಿಯ ವೇಳೆ ಮತದಾರರ ನೋಂದಣಾಧಿಕಾರಿಗಳು ಹಾಗೂ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿಶ್ವನಾಥ್, ಸಹಾಯಕ ಮತದಾರರ ನೋಂದಣಾಧಿಕಾರಿ ಹಾಗೂ ತಹಶೀಲ್ದಾರ್ ಗಿರಿಜಾ ಮತ್ತು ತನ್ಮಯ್ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...